Saturday, 23rd November 2024

ಸೆ.16 ರೊಳಗೆ ಹೆಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ಅಳವಡಿಸಿಕೊಳ್ಳಿ

ಬೆಂಗಳೂರು : ವಾಹನ ಸವಾರರ ಗಮನಕ್ಕೆ ..ಹೆಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ಅಳವಡಿಕೆ ಗಡುವು ಸೆ.15 ರವರೆಗೆ ವಿಸ್ತರಣೆ ಮಾಡಲಾಗಿದ್ದು, ಸೆ.16 ರೊಳಗೆ ನಂಬರ್ ಪ್ಲೇಟ್ ಅಳವಡಿಸಬಹುದಾಗಿದೆ.

2019ರ ಏಪ್ರಿಲ್ 1ಕ್ಕಿಂತ ಹಿಂದಿನ ವಾಹನಗಳು ಎಚ್‌ಎಸ್‌ಆರ್ಪಿ ಅಳವಡಿಸಿಕೊಳ್ಳಬೇಕು, ನೀವು HSRP ನಂಬರ್ ಪ್ಲೇಟ್ ಗೆ ರಿಜಿಸ್ಟ್ರೇಷನ್ ಮಾಡಿಸಿ ಕೊಳ್ಳುವುದು ಕಡ್ಡಾಯವಾಗಿದೆ. ಹೈ ಸೆಕ್ಯೂರಿಟಿ ರಿಜಿಸ್ಟ್ರೇಷನ್ ಪ್ಲೇಟ್ ವಾಹನಗಳ ಸುರಕ್ಷತೆಗಾಗಿ ಈ ಪ್ಲೇಟ್ ಅಳವಡಿಕೆಯನ್ನ ಕಡ್ಡಾಯ ಮಾಡಲಾಗಿದೆ.

ಕರ್ನಾಟಕ ರಾಜ್ಯದಲ್ಲಿ 1ನೇ ಏಪ್ರಿಲ್ 2019ಕ್ಕಿಂತ ಮೊದಲು ನೋಂದಾಯಿಸಲ್ಪಟ್ಟ ಹಳೆಯ ಎಲ್ಲಾ (ಹಳೆಯ / ಅಸ್ತಿತ್ವದಲ್ಲಿರುವ ವಾಹನಗಳು) (ದ್ವಿಚಕ್ರ ಮತ್ತು ತ್ರಿಚಕ್ರ ವಾಹನಗಳು, ಲಘು ಮೋಟಾರು ವಾಹನಗಳು, ಪ್ರಯಾಣಿಕ ಕಾರುಗಳು, ಮಧ್ಯಮ ಮತ್ತು ಭಾರಿ ವಾಣಿಜ್ಯ ವಾಹನಗಳು, ಟ್ರೈಲರ್, ಟ್ರ್ಯಾಕ್ಟರ್ ಇತ್ಯಾದಿ) ವಾಹನಗಳಿಗೆ ಅತಿ ಸುರಕ್ಷಿತ ನೋಂದಣಿ ಫಲಕಗಳನ್ನು (ಹೆಚ್‌ಎಸ್‌ಆರ್ಪಿ) ಅಳವಡಿಸುವುದು ಕಡ್ಡಾಯವಾಗಿದೆ.

ಆನ್ಲೈನ್ ಮೂಲಕ ಅಳವಡಿಕೆ ಹೇಗೆ?
ಸ್ಕ್ಯಾನ್ ಮಾಡಿ
. ಎಚ್‌ಎಸ್‌ಆರ್ಪಿ ಮೇಲೆ ಕ್ಲಿಕ್ ಮಾಡಿ
• ವಾಹನದ ಮೂಲ ವಿವರಗಳನ್ನು ಭರ್ತಿ ಮಾಡಿ
• ನಂಬರ್ ಪ್ಲೇಟ್ ಅಳವಡಿಕೆಗೆ ಸ್ಥಳ ಆಯ್ದುಕೊಂಡರೆ ಅವರೇ ಬ೦ದು ಫಿಟ್ ಮಾಡಿಕೊಡುತ್ತಾರೆ. 2019ರ ಏಪ್ರಿಲ್ 1ಕ್ಕಿಂತ ಹಿಂದಿನ ವಾಹನಗಳು ಎಚ್‌ಎಸ್‌ಆರ್ಪಿ ಅಳವಡಿಸಿಕೊಳ್ಳಬೇಕು