ಮುಂಬೈ: ಬಿಹಾರ ವಿಧಾನಸಭೆ ಚುನಾವಣೆಗೂ ಮುನ್ನ ಬಿಜೆಪಿ ಶಹನವಾಜ್ ಹುಸೇನ್ ಮತ್ತು ಉಪ ಮುಖ್ಯಮಂತ್ರಿ ಸುಶೀಲ್ ಮೋದಿ ಅವರು ಕೊರೊನಾ ವೈರಸ್ ಸೋಂಕಿಗೆ ಒಳಗಾದ ಬಳಿಕ ಈಗ ಬಿಹಾರ ರಾಜ್ಯ ಚುನಾವಣಾ ಪ್ರಚಾರದ ಉಸ್ತುವಾರಿ ಯಾಗಿರುವ ಪಕ್ಷದ ಹಿರಿಯ ನಾಯಕ ಮತ್ತು ಮಹಾರಾಷ್ಟ್ರ ಮಾಜಿ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರಿಗೆ ಕೊರೊನಾ ವೈರಸ್ ಪಾಸಿಟಿವ್ ಇರುವುದು ದೃಢಪಟ್ಟಿದೆ.
ತಾವು ಕೋವಿಡ್ ಸೋಂಕಿಗೆ ಒಳಗಾಗಿರುವ ಬಗ್ಗೆ ಸ್ವತಃ ದೇವೇಂದ್ರ ಫಡ್ನವೀಸ್ ಮಾಹಿತಿ ನೀಡಿದ್ದಾರೆ. ‘ಕೆಲಸ ಮಾಡುವುದನ್ನು ಸ್ವಲ್ಪ ಸಮಯ ನಿಲ್ಲಿಸಿ ವಿರಾಮ ತೆಗೆದುಕೊಳ್ಳುವಂತೆ ದೇವರು ಬಯಸಿದ್ದಾನೆ’ ಎಂದು ಅವರು ಟ್ವೀಟ್ ಮಾಡಿದ್ದಾರೆ.
ನನಗೆ ಕೋವಿಡ್ 19 ಪಾಸಿಟಿವ್ ಬಂದಿದ್ದು, ಪ್ರತ್ಯೇಕವಾಗಿ ಉಳಿದುಕೊಂಡಿದ್ದೇನೆ’ ಎಂದು ತಿಳಿಸಿದ್ದಾರೆ. ‘ವೈದ್ಯರು ನೀಡುತ್ತಿರುವ ಸಲಹೆಗಳಿಗೆ ಅನುಗುಣವಾಗಿ ಎಲ್ಲ ಔಷಧ ಹಾಗೂ ಚಿಕಿತ್ಸೆಗಳನ್ನು ಪಡೆದುಕೊಳ್ಳುತ್ತಿದ್ದೇನೆ. ನನ್ನೊಂದಿಗೆ ಸಂಪರ್ಕಕ್ಕೆ ಬಂದವ ರೆಲ್ಲರೂ ಕೋವಿಡ್ 19 ಪರೀಕ್ಷೆಗೆ ಒಳಪಡುವಂತೆ ಸಲಹೆ ನೀಡುತ್ತೇನೆ. ಎಲ್ಲರೂ ಎಚ್ಚರಿಕೆಯಿಂದ ಇರಿ’ ಎಂದು ಹೇಳಿದ್ದಾರೆ.
ಬಿಹಾರ ವಿಧಾನಸಭೆ ಚುನಾವಣೆಯ ಬಿಜೆಪಿ ಉಸ್ತುವಾರಿಯನ್ನಾಗಿ ಫಡ್ನವೀಸ್ ಅವರನ್ನು ಕಳೆದ ತಿಂಗಳು ನೇಮಕ ಮಾಡಲಾ ಗಿತ್ತು. ಬಿಹಾರ ವಿಧಾನಸಭೆ ಚುನಾವಣೆಯ ಮೊದಲ ಹಂತದ ಮತದಾನಕ್ಕೆ ಇನ್ನು ನಾಲ್ಕು ದಿನ ಬಾಕಿ ಇದೆ.