Friday, 22nd November 2024

ಸೆಪ್ಟೆಂಬರ್ 15 ರಂದು ಬೃಹತ್ ಮಾನವ ಸರಪಳಿ ನಿರ್ಮಿಸಿ ಪ್ರಜಾಪ್ರಭುತ್ವ ದಿನ ಆಚರಿಸಲು ಜಿಲ್ಲಾಧಿಕಾರಿ ಪಿ.ಎನ್. ರವೀಂದ್ರ ಸೂಚನೆ

chickballapur

ಚಿಕ್ಕಬಳ್ಳಾಪುರ : ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ ಅಂಗವಾಗಿ ಜಿಲ್ಲೆಯಲ್ಲಿ ಬೃಹತ್ ಮಾನವ ಸರಪಳಿ ನಿರ್ಮಿಸಿ ಅರ್ಥಪೂರ್ಣವಾಗಿ ಆಚರಣೆ ಮಾಡಲು ಸರ್ಕಾರದ ಸೂಚನೆ ಇದೆ. ಅದರಂತೆ ಸೂಕ್ತ ತಾ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಪಿ.ಎನ್. ರವೀಂದ್ರ ಅವರು ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಿಲ್ಲಾಡಳಿತ ಭವನದ ಜಿಲ್ಲಾ ಪಂಚಾಯತ್ ನ ಸರ್. ಎಂ.ವಿಶ್ವೇಶ್ವರಯ್ಯ ಸಭಾಂಗಣದಲ್ಲಿ ನಡೆದ “ಪ್ರಗತಿ ಪರಿಶೀಲನಾ ಸಭೆ”ಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಬೀದರ್‌ನಿಂದ ಚಾಮರಾಜನಗರದ ವರೆಗೆ ಬೃಹತ್ ಮಾನವ ಸರಪಳಿಯನ್ನು ನಿರ್ಮಿಸಿ ಅಂತರಾಷ್ಟಿçÃಯ ಪ್ರಜಾಪ್ರಭುತ್ವ ದಿನಾಚರಣೆಯನ್ನು ಸೆಪ್ಟೆಂಬರ್ ೧೫ ರಂದು ಬೆಳಿಗ್ಗೆ ೮:೩೦ ರಿಂದ ೧೦:೩೦ರ ಸಮಯದಲ್ಲಿ ರಾಜ್ಯದಾದ್ಯಂತ ಏಕ ಕಾಲಕ್ಕೆ ಆಚರಣೆ ಮಾಡಲು ಸರ್ಕಾರದ ನಿರ್ದೇಶನವಿದೆ.

ಅದರಂತೆ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿಯೂ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗಡಿಯಿಂದ ಕೋಲಾರ ಜಿಲ್ಲೆಯ ಗಡಿಯವರೆಗೆ ಒಟ್ಟು ೬೫ ಕಿಲೋ ಮೀಟರ್ ಉದ್ದದ ಮಾನವ ಸರಪಳಿಯನ್ನು ನಿರ್ಮಿಸಿ ಕಾರ್ಯ ಕ್ರಮವನ್ನು ಅರ್ಥಪೂರ್ಣವಾಗಿ ಆಚರಣೆ ಮಾಡಬೇಕಾಗಿದೆ.

ಸಾರ್ವಜನಿಕರು, ಶಾಲಾ ಕಾಲೇಜು ವಿದ್ಯಾರ್ಥಿಗಳು, ಸರ್ಕಾರೇತರ ಸಂಸ್ಥೆಗಳು, ಸ್ವ-ಸಹಾಯ ಸಂಘಗಳ ಸದಸ್ಯರು ಪದಾಧಿಕಾರಿಗಳೆಲ್ಲರ ಸಹಕಾರ ಪಡೆದು ಆಚರಣೆ ಮಾಡಲು ಎಲ್ಲಾ ಇಲಾಖೆಗಳು ಸಮನ್ವಯ, ಸಹಕಾರದೊಂದಿಗೆ ಕಾರ್ಯ ನಿರ್ವಹಿಸಬೇಕು. ಅದಕ್ಕೆ ಬೇಕಾದ ಎಲ್ಲಾ ಸಿದ್ದತೆಗಳನ್ನು ಈಗಿನಿಂದಲೇ ಕೈಗೊಳ್ಳಬೇಕೆಂದು ಕಟ್ಟುನಿಟ್ಟಿನ ಸೂಚನೆಗಳನ್ನು ಜಿಲ್ಲಾಧಿಕಾರಿಗಳು ನೀಡಿದರು.

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಕಾಶ್ ಜಿ.ಟಿ. ನಿಟ್ಟಾಲಿ, ಅಪರ ಜಿಲ್ಲಾಧಿಕಾರಿ ಡಾ. ಎನ್. ಭಾಸ್ಕರ್ ಹಾಗೂ ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿ ಉಪಸ್ಥಿತರಿದ್ದರು.