Wednesday, 11th December 2024

Hidden Camera: ಶಾಕಿಂಗ್‌ ಘಟನೆ! ವಿದ್ಯಾರ್ಥಿನಿಯರ ಹಾಸ್ಟೆಲ್‌ ಟಾಯ್ಲೆಟ್‌ನಲ್ಲಿ ಹಿಡನ್‌ ಕ್ಯಾಮೆರಾ; ಭಾರೀ ಪ್ರೊಟೆಸ್ಟ್‌

Hidden camera

ಹೈದರಾಬಾದ್‌: ಕೋಲ್ಕತ್ತಾ ಟ್ರೈನಿ ವೈದ್ಯೆ  ಅತ್ಯಾಚಾರ ಕೊಲೆ ಪ್ರಕರಣ(Kolkata Doctor Murder Case) ರಾಷ್ಟ್ರವ್ಯಾಪಿ ಬಹಳ ಸದ್ದು ಮಾಡುತ್ತಿರುವ ಬೆನ್ನಲ್ಲೇ ಆಂಧ್ರಪ್ರದೇಶ(Andra Pradesh)ದಲ್ಲೊಂದು ಶಾಕಿಂಗ್‌ ಘಟನೆ ಬೆಳಕಿಗೆ ಬಂದಿದೆ. ವಿದ್ಯಾರ್ಥಿನಿಯರ ಹಾಸ್ಟೆಲ್‌(Girls Hostel)ನ ಶೌಚಾಲಯದಲ್ಲಿ ಹಿಡನ್‌ ಕ್ಯಾಮೆರಾ(Hidden Camera) ಪತ್ತೆಯಾಗಿರುವ ಆಘಾತಕಾರಿ ಘಟನೆ ಆಂಧ್ರಪ್ರದೇಶದಲ್ಲಿ ನಡೆದಿದೆ. ಕೃಷ್ಣಾ ಜಿಲ್ಲೆಯ ಎಸ್‌. ಆರ್‌ ಗುಡ್ಲಾವೇರು ಎಂಜಿನಿಯರಿಂಗ್‌ ಕಾಲೇಜಿನಲ್ಲಿ ಗುರುವಾರ ಬಾಲಕಿಯರ ಹಾಸ್ಟೆಲ್‌ನ ವಾಶ್‌ರೂಮ್‌ನಲ್ಲಿ ಹಿಡನ್ ಕ್ಯಾಮೆರಾ ಪತ್ತೆಯಾಗಿದ್ದು, ಘಟನೆ ಬಗ್ಗೆ ವರದಿಯಾಗುತ್ತಿದ್ದಂತೆ ಭಾರಿ ಪ್ರತಿಭಟನೆ ನಡೆದಿದೆ. ಹಾಸ್ಟೆಲ್‌ನಲ್ಲಿ ನೂರಾರು ವಿದ್ಯಾರ್ಥಿನಿಯರು ಧರಣಿ ಕುಳಿತು “ನಮಗೆ ನ್ಯಾಯ ಬೇಕು” ಎಂಬ ಘೋಷಣೆಗಳನ್ನು ಕೂಗಿ, ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಒತ್ತಾಯಿಸಿದರು. ಅಲ್ಲದೇ  ಕ್ಯಾಂಪಸ್‌ನಲ್ಲಿ ಅವರ ಸುರಕ್ಷತೆಗೆ ಸೂಕ್ತ ಕ್ರಮ ಜರುಗಿಸಬೇಕೆಂದು ಆಗ್ರಹಿಸಿದರು.

ಇನ್ನು ಘಟನೆ ಸಂಬಂಧಿಸಿದಂತೆ ಆರೋಪಿಯನ್ನು ಅರೆಸ್ಟ್‌ ಮಾಡಲಾಗಿದ್ದು, ಬಂಧಿತನನ್ನು  ವಿಜಯ್‌ ಎಂದು ಗುರುತಿಸಲಾಗಿದೆ. ಈ ಅದೇ ಕಾಲೇಜಿನ ವಿದ್ಯಾರ್ಥಿ ಎಂಬುದು ತನಿಖೆಯಲ್ಲಿ ಬಯಲಾಗಿದೆ. ಬಂಧಿತನಿಂದ  ಲ್ಯಾಪ್‌ಟಾಪ್ ಹಾಗೂ 300 ಅಶ್ಲೀಲ ವೀಡಿಯೊಗಳನ್ನು ವಶಪಡಿಸಿಕೊಳ್ಳಲಾಗಿದೆ. ಈತ ಈ ವಿಡಿಯೋಗಳನ್ನು ಕೆಲವು  ವಿದ್ಯಾರ್ಥಿಗಳಿಗೆ ಮಾರಾಟ ಮಾಡಿರು ಶಂಕೆ ವ್ಯಕ್ತವಾಗಿದೆ ಎಂದು  ಪೊಲೀಸರು ಹೇಳಿದ್ದಾರೆ.

https://x.com/MilagroMovies/status/1829369358109323607

ಈ ಘಟನೆ ಖಂಡಿಸಿ ರಾಜ್ಯದ ಅಲ್ಲಲ್ಲಿ ಪ್ರತಿಭಟನೆಗಳನ್ನು ಭುಗಿಲೆದ್ದಿರುವ ಬೆನ್ನಲ್ಲೇ ಮುಖ್ಯಮಂತ್ರಿ ನಾರಾ ಚಂದ್ರಬಾಬು ನಾಯ್ಡು ಪ್ರಕರಣದ ತನಿಖೆಗೆ ಆದೇಶಿಸಿದ್ದಾರೆ. ಈ ಬಗ್ಗೆ ತೆಲುಗು ದೇಶಂ ಪಕ್ಷ ಮಾಹಿತಿ ನೀಡಿದೆ.
ಹಾಸ್ಟೆಲ್‌ನಲ್ಲಿ ಹಿಡನ್ ಕ್ಯಾಮೆರಾ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿಯವರು ತನಿಖೆಗೆ ಆದೇಶಿಸಿದ್ದಾರೆ. ಜಿಲ್ಲಾ ಸಚಿವ ಕೊಲ್ಲು ರವೀಂದ್ರ ಅವರೊಂದಿಗೆ ಜಿಲ್ಲಾಧಿಕಾರಿ ಮತ್ತು ಎಸ್‌ಪಿ ಅವರು ತಕ್ಷಣ ಸ್ಥಳಕ್ಕೆ ಹೋಗುವಂತೆ ಅವರು ಆದೇಶಿಸಿದ್ದಾರೆ ಎನ್ನಲಾಗಿದೆ. ಇನ್ನು ಪಕ್ಷದ ಪ್ರಧಾನ ಕಾರ್ಯದರ್ಶಿ ಮತ್ತು ಚಂದ್ರಬಾಬು ನಾಯ್ಡು ಪುತ್ರ ನಾರಾ ಲೋಕೇಶ್ ಅವರು ಎಕ್ಸ್ ಪೋಸ್ಟ್‌ನಲ್ಲಿ ಘಟನೆಯನ್ನು ಖಂಡಿಸಿದ್ದಾರೆ. “ಕೃಷ್ಣಾ ಜಿಲ್ಲೆಯ ಗುಡ್ವಲ್ಲೇರು ಎಂಜಿನಿಯರಿಂಗ್ ಕಾಲೇಜಿನಲ್ಲಿ ವಿದ್ಯಾರ್ಥಿನಿಯರ ಪ್ರತಿಭಟನೆಯ ಬಗ್ಗೆ ನಾನು ಅಧಿಕಾರಿಗಳನ್ನು ವಿವರಗಳನ್ನು ಕೇಳಿದೆ. ಹಿಡನ್ ಕ್ಯಾಮೆರಾಗಳ ಆರೋಪದ ಬಗ್ಗೆ ತನಿಖೆಗೆ ಆದೇಶಿಸಿದ್ದೇನೆ. ತನಿಖೆಯಲ್ಲಿ ತಪ್ಪಿತಸ್ಥರು ಮತ್ತು ತಪ್ಪಿತಸ್ಥರು ತಪ್ಪು ಮಾಡಿರುವುದು ಕಂಡುಬಂದರೆ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಕಾಲೇಜುಗಳಲ್ಲಿ ರಾಗಿಂಗ್‌ ಮತ್ತು ಕಿರುಕುಳವಾಗದಂತೆ ಕಾಲೇಜು ಆಡಳಿತ ಮಂಡಳಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು,” ಎಂದು ಹೇಳಿದರು.

https://youtu.be/TztyB9_MEVo?si=f6-9LB9a7PgI-MDO