Sunday, 27th October 2024

ಮಾದಕ ವಸ್ತುಗಳ ಜಾಲಕ್ಕೆ ಜಿಲ್ಲೆಯಲ್ಲಿ ಕಡಿವಾಣ ಹಾಕಲೇಬೇಕು: ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಸಿ.ಸುಧಾಕರ್

ಚಿಕ್ಕಬಳ್ಳಾಪುರ: ಶಾಲಾ ಕಾಲೇಜು ವಿದ್ಯಾರ್ಥಿಗಳ ಆರೋಗ್ಯ ಮತ್ತು ಭವಿಷ್ಯಕ್ಕೆ ಮಾರಕವಾಗಿರುವ ಗಾಂಜಾ ಮತ್ತಿತರ ಮಾದಕ ವಸ್ತುಗಳಿಗೆ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಸಂಪೂರ್ಣ ಕಡಿವಾಣ ಹಾಕುವಂತೆ ಪೊಲೀಸ್ ಇಲಾಖೆಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ ಎಂದು ಉನ್ನತ ಶಿಕ್ಷಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಸಿ.ಸುಧಾಕರ್ ಅವರು ತಿಳಿಸಿದರು.

ನಗರ ಹೊರವಲಯ ಜಿಲ್ಲಾ ಪಂಚಾಯತ್ ಸರ್‌ಎಂವಿ ಸಭಾಂಗಣದಲ್ಲಿ ಶುಕ್ರವಾರ ನಡೆಸಿದ ಜಿಲ್ಲಾ ಮಟ್ಟದ ಪೊಲೀಸ್ ಅಧಿಕಾರಿಗಳ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು.

ಜಿಲ್ಲೆಯಲ್ಲಿ ಮಾತ್ರವಲ್ಲದೇ ರಾಜ್ಯದಲ್ಲಿ ಗಾಂಜಾ ಅವ್ಯಾಹತವಾಗಿ ಬಳಕೆಯಾಗುತ್ತಿರುವ ಬಗ್ಗೆ ಸಾಕಷ್ಟು ದೂರುಗಳಿವೆ. ಇದರ ವಿಚಾರದಲ್ಲಿ ದೊಡ್ಡ ಮಟ್ಟದಲ್ಲಿ ನಾನಾ ಜಾಲಗಳು ಕೆಲಸ ಮಾಡುತ್ತಿವೆ ಎನ್ನಲಾಗಿದೆ. ಗಾಂಜಾ ಮಾರಾಟ ಜಾಲಗಳಿಗೆ ಹೆಚ್ಚಾಗಿ ಕಾಲೇಜು ವಿದ್ಯಾರ್ಥಿಗಳೇ ಆಕರ್ಷಿತರಾಗಿ ಅದಕ್ಕೆ ಬಲಿಯಾಗುತ್ತಿರುವುದು ದುರದೃಷ್ಟಕರ. ಯುವಜನರ ಮೇಲೆ ಗಾಂಜಾ ಮತ್ತಿತರ ಮಾದಕ ವಸ್ತುಗಳು ದುಷ್ಪರಿಣಾಮ ಬೀರುತ್ತಿರುವ ಕಾರಣ ಅದಕ್ಕೆ ಸಂಪೂರ್ಣ ಕಡಿವಾಣ ಹಾಕುವಂತೆ ಜಿಲ್ಲಾ ಪೊಲೀಸ್ ಇಲಾಖೆಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ ಎಂದರು.

ಪರಿಶಿಷ್ಟ ಜಾತಿ ಪಂಗಡದವರ ಮೇಲೆ ಆಗುತ್ತಿರುವ ದೌರ್ಜನ್ಯ ತಡೆ ಬಗ್ಗೆ, ಕಾಲಕಾಲಕ್ಕೆ ಕುಂದುಕೊರತೆಗಳ ಸಭೆ ನಡೆಸುವಂತೆ ಸೂಚನೆ ನೀಡಲಾಗಿದೆ.ಅಪರಾಧ ಕೃತ್ಯದಲ್ಲಿ ಪೊಲೀಸರೂ ಶಾಮೀಲಾಗಿರುವುದು ಕಂಡುಬAದಲ್ಲಿ ಅಂತವರ ವಿರುದ್ಧವೂ ಕಠಿಣ ಕ್ರಮ ಜರುಗಿಸಲಾಗುವುದು. ಜಿಲ್ಲೆಯ ಕಾರಾಗೃಹಗಳಲ್ಲಿ ಅಕ್ರಮ ಚಟುವಟಿಕೆಗಳು ನಡೆಯದಂತೆ ನಿಗಾವಹಿಸಿ  ಕಡಿವಾಣ ಹಾಕಲು ಸೂಚನೆ ನೀಡಲಾಗಿದೆ. ಸೈಬರ್ ಕ್ರೆöÊಮ್ ಬಗ್ಗೆ ತಿಳುವಳಿಕೆ ನೀಡುವಂತೆ ೧೯೩೦ ಸಂಖ್ಯೆಯ ಬಗ್ಗೆ ಅರಿವು ಮೂಡಿಸಲು ನಿರ್ದೇಶನ ನೀಡಲಾಗಿದೆ ಎಂದರು.

ಜಿಲ್ಲೆಯಲ್ಲಿ  ಮಟ್ಕಾ, ಜೂಜಾಟ, ಕ್ರಿಕೆಟ್ ಬೆಟ್ಟಿಂಗ್, ಕೋಳಿ ಪಂದ್ಯ ಮತ್ತಿತರ ಅಕ್ರಮಗಳು ಎಲ್ಲೂ ನಡೆಯಬಾರದು. ಸೈಬರ್ ಅಪರಾಧಗಳ ಜಾಲಕ್ಕೆ ಯುವಜನತೆ ಸಿಲುಕದಂತೆ ಅರಿವು ಮೂಡಿಸಬೇಕು. ಮಹಿಳೆ ಮತ್ತು ಮಕ್ಕಳ ಮೇಲೆ ದೌರ್ಜನ್ಯ ಪ್ರಕರಣಗಳು ಕಡಿಮೆ ಆಗಬೇಕು.ಬಾಲ್ಯ ವಿವಾಹ ಪ್ರಕರಣಗಳು ಜಿಲ್ಲೆಯಲ್ಲಿ ಹೆಚ್ಚಾಗಿ ಬೆಳಕಿಗೆ ಬರುತ್ತಿರುವುದು ಗಮನಕ್ಕೆ ಬಂದಿದೆ.ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಕಾರಿ ಗಳನ್ನು ಮತ್ತು ಇತರ ಇಲಾಖೆ ಅಧಿಕಾರಿಗಳ ಸಹಕಾರ ಪಡೆದು ಸಂಪೂರ್ಣವಾಗಿ ತಡೆಗಟ್ಟುವ ಕೆಲಸ ಆಗಬೇಕು. ಒಟ್ಟಾರೆಯಾಗಿ ಕಾನೂನು ವ್ಯವಸ್ಥೆಯನ್ನು ಸಮರ್ಪಕವಾಗಿ ಕಾಪಾಡಬೇಕು ಎಂದು ಅಧಿಕಾರಿಗಳಿಗೆ ಸಲಹೆ ನೀಡಿದರು.

ಸಂಚಾರಿ ನಿಯಮಗಳನ್ನು ಉಲ್ಲಂಘಿಸುವವರ ಮೇಲೆ ದಿನನಿತ್ಯ ನಿಗಾ ಇಟ್ಟು ದಂಡ ವಸೂಲಿ ಮಾಡುವ ಮತ್ತು ಪ್ರಕರಣ ದಾಖಲಿಸುವ ಕೆಲಸ ದಿನನಿತ್ಯ ನಡೆಯಬೇಕು. ಪ್ರತಿಯೊಬ್ಬ ಸವಾರರು (ಹೆಲ್ಮೆಟ್) ಶಿರಸ್ತಾçಣ ವನ್ನು  ಧರಿಸಿ ವಾಹನ ಚಲಾಯಿಸುವಂತೆ ನೋಡಿಕೊಳ್ಳಬೇಕು. ಮೊದಲು ಸರ್ಕಾರಿ ನೌಕರರು ಅಧಿಕಾರಿಗಳು ಶಿರಸ್ತಾçಣ ಧರಿಸಿ ವಾಹನ ಚಲಾಯಿಸುವ ಮೂಲಕ ಜನರಲ್ಲಿ ಅರಿವು ಮೂಡಿಸಲು ಮುಂದಾಗಬೇಕು. ಆಗ ಮಾತ್ರ ಅಮಾಯಕರ ಪ್ರಾಣಗಳನ್ನು ರಕ್ಷಿಸಲು ಸಾಧ್ಯವಾಗುತ್ತದೆ ಎಂದರು.

ಜಿಲ್ಲೆಯಲ್ಲಿ ಹೆಚ್ಚು ಅಪಘಾತಗಳು ಸಂಭವಿಸುವ ಬ್ಲಾಕ್ ಸ್ಪಾಟ್ ಗಳನ್ನು ಗುರುತಿಸಿ  ಅಪಘಾತಗಳ ತಡೆಗಟ್ಟಲು ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ತುರ್ತಾಗಿ ಕೈಗೊಳ್ಳಬೇಕು.ಯಾವುದೇ ರೀತಿಯ ಕಾನೂನು ಉಲ್ಲಂಘನೆ ಪ್ರಕರಣಗಳು ಕಂಡು ಬಂದಲ್ಲಿ ತ್ವರಿತವಾಗಿ ಭೇದಿಸಿ ತಪ್ಪಿತಸ್ತರನ್ನು ಕಾನೂನು ಕ್ರಮಕ್ಕೆ ಒಳಪಡಿಸಬೇಕು. ಎಂದು ಜಿಲ್ಲಾ ಉಸ್ತುವಾರಿ ಸಚಿವರು ಕಟ್ಟುನಿಟ್ಟಿನ ಸೂಚನೆಗಳನ್ನು ನೀಡಿರುವುದಾಗಿ ತಿಳಿಸಿದರು.

ಹಪ್ತಾ ವಸೂಲಿಗೆ ಬ್ರೇಕ್
ಜಿಲ್ಲೆಯಲ್ಲಿ ಎಲ್ಲಾ ಪೊಲೀಸ್ ಠಾಣೆಗಳಲ್ಲಿ ಪೊಲೀಸರು ದಸರಾ, ಗಣೇಶೋತ್ಸವದ ಹೆಸರಿನಲ್ಲಿ ಕೈಗಾರಿಕೆಗಳು, ಕ್ರರ‍್ಸ್ ಮಾಲಿಕರು, ಸಂಘಸ0ಸ್ಥೆಗಳು, ನಗರಸಭಾ ಸದಸ್ಯರಿಂದ ಹಫ್ತಾ ವಸೂಲಿ ಮಾಡುತ್ತಿದ್ದಾರೆ ಎಂಬ ಮಾಹಿತಿ ಬಂದಿದೆ. ಯಾವ ಪೊಲೀಸರು ಇದರಲ್ಲಿ ಭಾಗಿಯಾಗುವರೋ ಅಂತಹವರ ವಿರುದ್ಧ ಕಠಿಣ ಕ್ರಮತೆಗೆದುಕೊಳ್ಳಲಾಗುವುದು ಎಂದು ಎಚ್ಚರಿಸಿದ ಸಚಿವರು ಈಬಗ್ಗೆ ಗಮನ ಹರಿಸುವಂತೆ ಎಸ್ಪಿ ಅವರಿಗೆ ಸೂಚಿಸಿದ್ದೇನೆ ಎಂದರು.

ಈ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕುಶಲ್ ಚೌಕ್ಸೆ, ಅಪರ ಜಿಲ್ಲಾಧಿಕಾರಿ ಡಾ.ಎನ್. ಭಾಸ್ಕರ್, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಆರ್.ಐ.ಕಾಸಿಂ ಹಾಗೂ ಪೊಲೀಸ್ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.