ತುಮಕೂರು: ಮಧುಗಿರಿ ತಾಲೂಕಿನ ಬುಳ್ಳಸಂದ್ರದಲ್ಲಿ ವಾಂತಿ ಭೇದಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೋರ್ವ ವಿರುದ್ಧ ಮೃತಪಟ್ಟಿದ್ದಾರೆ.
ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದ ಮುದ್ದೇನಹಳ್ಳಿ ಗ್ರಾಮದ ತಿಪ್ಪೇರಾಯಣ್ಣ(70) ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ. ಮತ್ತಿಬ್ಬರನ್ನು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ.
ಬುಳ್ಳಸಂದ್ರ ಗ್ರಾಮದಲ್ಲಿ ವಾಂತಿಭೇದಿಯಿಂದ ಅಸ್ವಸ್ಥಗೊಂಡಿದ್ದ 31 ಜನರ ಪೈಕಿ ಮೂವರು ಈಗಾಗಲೇ ಮೃತಪಟ್ಟಿದ್ದಾರೆ. ಈಗ ವೃದ್ಧರೊಬ್ಬರು ಮೃತಪಟ್ಟಿದ್ದು, ಮೃತರ ಸಂಖ್ಯೆ ನಾಲ್ಕಕ್ಕೇರಿದೆ.
ಆಗಸ್ಟ್ 26ರಂದು ಗ್ರಾಮದ ಎರಡು ಮನೆಗಳಲ್ಲಿ ಊಟ ಮಾಡಿ ವಾಂತಿಭೇದಿಯಿಂದ ಅಸ್ವಸ್ಥಗೊಂಡ ಏಳು ಮಂದಿಯನ್ನು ವಿವಿಧ ಆಸ್ಪತ್ರೆಗಳಿಗೆ ಸೇರಿಸಲಾಗಿದೆ. ಗ್ರಾಮಕ್ಕೆ ಜಿಲ್ಲಾಧಿಕಾರಿ ಸೇರಿದಂತೆ ಅನೇಕ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದ್ದಾರೆ.