ತುಮಕೂರು: ಸರಕಾರಿ ಶಾಲೆಗಳನ್ನು ಉಳಿಸಿ, ಬೆಳೆಸುವಲ್ಲಿ ಶಿಕ್ಷಕರ ಪಾತ್ರ ಪ್ರಮುಖವಾಗಿದೆ ಎಂದು ಶಾಸಕ ಜಿ.ಬಿ. ಜ್ಯೋತಿಗಣೇಶ್ ಹೇಳಿದರು.
ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ಶಾಲಾ ಶಿಕ್ಷಣ ಇಲಾಖೆ ಹಾಗೂ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲ್ಲೂಕು ಶಾಖೆ ವತಿಯಿಂದ ಶಿಕ್ಷಕರ ದಿನಾಚರಣೆ ಪ್ರಯುಕ್ತ ಹಮ್ಮಿಕೊಂಡಿದ್ದ ಪ್ರಾಥಮಿಕ ಶಾಲಾ ಶಿಕ್ಷಕರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಸರ್ಕಾರಿ ಶಾಲೆಗಳಲ್ಲಿ ಬಡವರ ಮಕ್ಕಳೇ ಹೆಚ್ಚಿನ ಸಂಖ್ಯೆಯಲ್ಲಿ ವ್ಯಾಸಂಗ ಮಾಡುತ್ತಾರೆ. ಹಾಗಾಗಿ ಆ ಮಕ್ಕಳಿಗೆ ಪಾಠ ಬೋಧನೆಯಲ್ಲಿ ಕಿಂಚಿತ್ತೂ ಲೋಪವಾಗದಂತೆ ಪಾಠ ಮಾಡಬೇಕು. ಈ ನಿಟ್ಟಿನಲ್ಲಿ ಶಿಕ್ಷಕರ ಪಾತ್ರ ಮಹತ್ತರವಾಗಿದೆ. ಇದನ್ನು ಪ್ರತಿಯೊಬ್ಬ ಶಿಕ್ಷಕರು ಅರ್ಥೈಸಿಕೊಂಡು ಕಾರ್ಯೋನ್ಮುಖರಾಗಬೇಕು ಎಂದರು.
ಮಕ್ಕಳನ್ನು ಉತ್ತಮ ನಾಗರಿಕ ಪ್ರಜೆಗಳನ್ನಾಗಿ ರೂಪಿಸುವ ಜವಾಬ್ದಾರಿ ಶಿಕ್ಷಕರ ಮೇಲಿದೆ. ಮಕ್ಕಳಿಗೆ ಉತ್ತಮ ಭವಿಷ್ಯ ರೂಪಿಸುವ ಹೊಣೆಗಾರಿಕೆಯೂ ಶಿಕ್ಷಕರದ್ದೇ. ಪೋಷಕರ ಪಾತ್ರ ಎಷ್ಟು ಇರುತ್ತದೆಯೇ ಅಷ್ಟೇ ಪಾತ್ರವೂ ಶಿಕ್ಷಕರದ್ದು ಇರುತ್ತದೆ. ಇದನ್ನು ಅರ್ಥೈಸಿಕೊಂಡು ಶಿಕ್ಷಕರು ತಮ್ಮ ಜವಾಬ್ದಾರಿಯನ್ನು ನಿರ್ವಹಿಸಬೇಕು ಎಂದು ಅವರು ಸಲಹೆ ನೀಡಿದರು.
ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಕ್ಷೇತ್ರ ಶಿಕ್ಷಣಾಧಿಕಾರಿ ಎಂ. ಹನುಮಂತಪ್ಪ ಮಾತನಾಡಿ, ಶಿಕ್ಷಕರು ಕ್ರೀಡಾಕೂಟ, ಸಾಂಸ್ಕöÈತಿಕ ಚಟುವಟಿಕೆಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವ ಮೂಲಕ ಮಕ್ಕಳಿಗೆ ಮಾದರಿಯಾಗಬೇಕು ಎಂದರು.
ಅಧ್ಯಕ್ಷತೆ ವಹಿಸಿದ್ದ ರಾಜ್ಯ ಪ್ರಾಥಮಿಕ ಶಿಕ್ಷಕರ ಸಂಘದ ತಾಲ್ಲೂಕು ಅಧ್ಯಕ್ಷ ಪಿ.ಜಿ.ತಿಮ್ಮೇಗೌಡ ಮಾತನಾಡಿ, ಕಳೆದ 10 ವರ್ಷಗಳಿಂದ ನಿರಂತರವಾಗಿ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಕ್ರೀಡಾಕೂಟ ಮತ್ತು ಸಾಂಸ್ಕöÈತಿಕ ಸ್ಪರ್ಧೆಗಳನ್ನು ಆಯೋಜಿಸಲಾಗುತ್ತಿದೆ. ಇದು ಶಿಕ್ಷಕರಲ್ಲಿ ಅಡಗಿರುವ ಪ್ರತಿಭೆಗಳನ್ನು ಗುರುತಿಸಲು ಸಹಕಾರಿಯಾಗಿದೆ ಎಂದರು.
ಸಮಾರಂಭದಲ್ಲಿ ಶಿಕ್ಷಕರುಗಳಾದ ಪಿ.ಎಸ್. ಅನುಸೂಯದೇವಿ, ಗಂಗಹನುಮಯ್ಯ, ಬಿ.ಆರ್. ಅನ್ನಪೂರ್ಣ, ಪಿ.ಎನ್. ದಿನೇಶ್, ಸಿ. ಶಿವಕುಮಾರ್, ಪದ್ಮರಾಜ್ ಡಿ., ಕೆ.ಎ. ಮಂಜುಳ, ಮಂಜಣ್ಣ, ಲಕ್ಷಿ÷್ಮÃದೇವಿ, ಮಹದೇವಯ್ಯ, ಹನುಮಂತರಾಯಪ್ಪ, ಲೋಕೇಶ್, ಕೋಮಲ, ಶಾಂತಕುಮಾರಿ, ಯಶೋಧಮ್ಮ, ಷಡಕ್ಷರಿ, ಚನ್ನಿಗರಾಯ, ರಾಜಕುಮಾರ್, ದೊಡ್ಡರಂಗಪ್ಪ, ಪ್ರವೀಣ್‌ಕುಮಾರ್, ಸಿದ್ದಮ್ಮ, ಮುಸ್ತಾಕ್ ಅಹಮದ್, ಗಂಗೇಶ್, ಚಿಕ್ಕಣ್ಣ ಮತ್ತಿತರರು ಉಪಸ್ಥಿತರಿದ್ದರು.
ಇದೇ ಸಂದರ್ಭದಲ್ಲಿ ವಾಲಿಬಾಲ್, ಷಟಲ್ ಬಾಡ್ಮಿಂಟನ್, ಕ್ರಿಕೆಟ್, 100 ಮೀ., 200 ಮೀ ಓಟ, ರಿಲೇ ಓಟ, ಥ್ರೋಬಾಲ್, ಸಾಂಸ್ಕöÈತಿಕ ಕಾರ್ಯಕ್ರಮಗಳಾದ ಭಾವಗೀತೆ, ಜಾನಪದಗೀತೆ ಸೇರಿದಂತೆ ಇನ್ನಿತರೆ ಕಾರ್ಯಕ್ರಮಗಳು ನಡೆದವು.