Friday, 22nd November 2024

Physical Abuse: ಟ್ರೈನಿ ವೈದ್ಯೆ ಹತ್ಯೆ ಬೆನ್ನಲ್ಲೇ ಪ.ಬಂಗಾಳದ ಮತ್ತೊಂದು ಆಸ್ಪತ್ರೆಯಲ್ಲಿ ಹೀನ ಕೃತ್ಯ ಬೆಳಕಿಗೆ

Physical abuse

ಕೋಲ್ಕತ್ತಾ: ಕೋಲ್ಕತ್ತಾದ ಟ್ರೈನಿ ವೈದ್ಯೆಯ ಅತ್ಯಾಚಾರ ಮತ್ತು ಕೊಲೆ ಪ್ರಕರಣ(Kolkata Doctor Murder Case) ಮಾಸುವ ಮುನ್ನವೇ ಪಶ್ಚಿಮ ಬಂಗಾಳ(West Bengal)ದ ಮತ್ತೊಂದು ಆಸ್ಪತ್ರೆಯಲ್ಲಿ ನಡೆದಿರುವ ಹೀನಕೃತ್ಯವೊಂದು ಬೆಳಕಿಗೆ ಬಂದಿದೆ. ರಾತ್ರಿ ಪಾಳಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ನರ್ಸ್‌ ಮೇಲೆ ರೋಗಿಯಿಂದಲೇ ಲೈಂಗಿಕ ದೌರ್ಜನ್ಯ(Physical Abuse) ನಡೆದಿರುವ ಆಘಾತಕಾರಿ  ಘಟನೆಯೊಂದು ವರದಿಯಾಗಿದೆ.

ಬಿರಾಬುಮ್‌ ಜಿಲ್ಲೆಯಲ್ಲಿರುವ ಇಲಾಂ ಬಜಾರ್‌ ಆರೋಗ್ಯ ಕೇಂದ್ರದಲ್ಲಿ ಈ ಭೀಕರ ಘಟನೆ ನಡೆದಿದ್ದು, ಚಿಕಿತ್ಸೆ ವೇಳೆ ರೋಗಿಯೊಬ್ಬ ನರ್ಸ್ ಜೊತೆ ಅಸಭ್ಯವಾಗಿ ವರ್ತಿಸಿದ್ದಾನೆ ಎನ್ನಲಾಗಿದೆ. ಚಿಕಿತ್ಸೆಗೆಂದು ರೋಗಿಯನ್ನು ಆಸ್ಪತ್ರೆಗೆ ಕರೆತರಲಾಗಿತ್ತು. ಆತನಿಗೆ ಗ್ಲೂಕೋಸ್‌ ನೀಡುವ ವೇಳೆ ನರ್ಸ್‌ ಮೈ ಮುಟ್ಟಿ ಅಸಭ್ಯವಾಗಿ ವರ್ತಿಸಿದ್ದಾನೆ ಎನ್ನಲಾಗಿದೆ. ಘಟನೆ ನಡೆದ ಸಂದರ್ಭದಲ್ಲಿ ಆತನ ಕುಟುಂಬಸ್ಥರೂ ಜೊತೆಗಿದ್ದರು. ವೈದ್ಯತರ ಸೂಚನೆಯಂತೆ ಆತನಿಗೆ ಚಿಕಿತ್ಸೆ ನೀಡುತ್ತಿದೆ. ಈ ವೇಳೆ ಆತನ ನನ್ನ ಖಾಸಗಿ ಅಂಗವನ್ನು ಮುಟ್ಟಿ ಅಸಭ್ಯವಾಗಿ ವರ್ತಿಸಿದ್ದು ಮಾತ್ರವಲ್ಲದೇ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾನೆ ಎಂದು ನರ್ಸ್‌ ದೂರಿದ್ದಾರೆ.

ಇಂತಹ ಘಟನೆಗಳು ಭಧ್ರತೆ ಕೊರತೆಯ ಕಾರಣದಿಂದ ನಡೆಯತ್ತಿದೆ. ಇಲ್ಲದಿದ್ದರೆ ಒಬ್ಬ ರೋಗಿ ಕರ್ತವ್ಯದಲ್ಲಿರುವ ನರ್ಸ್‌ ಜೊತೆ ಕುಟುಂಬಸ್ಥರ ಎದುರು ಈ ರೀತಿ ವರ್ತಿಸಲು ಹೇಗೆ ಸಾಧ್ಯ? ಎಂದು ಆಕೆ ಪ್ರಶ್ನಿಸಿದ್ದಾಳೆ. ಇನ್ನು ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಸ್‌ ದಾಖಲಾಗಿದ್ದು, ಆರೋಪಿಯನ್ನು ಪೊಲೀಸರು ಅರೆಸ್ಟ್‌ ಮಾಡಿದ್ದಾರೆ.

ವಿಡಿಯೋಗಾಗಿ ಇಲ್ಲಿ ಕ್ಲಿಕ್‌ ಮಾಡಿ: https://x.com/amitmalviya/status/1830105235169185862

ಪಶ್ಚಿಮ ಬಂಗಾಳದ ಕೋಲ್ಕತಾದಲ್ಲಿನ ಸರ್ಕಾರಿ ಸ್ವಾಮ್ಯದ ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಸೆಮಿನಾರ್ ಹಾಲ್‌ನಲ್ಲಿ ಆಗಸ್ಟ್‌ 9ರಂದು ಟ್ರೈನಿ ವೈದ್ಯೆಯ ಶವ ಪತ್ತೆಯಾಗಿತ್ತು. ಎರಡನೇ ವರ್ಷದ ಸ್ನಾತಕೋತ್ತರ ವೈದ್ಯಕೀಯ ಪದವಿ ವಿದ್ಯಾರ್ಥಿಯಾಗಿದ್ದ ಆಕೆ, ಆಗಸ್ಟ್‌ 8ರ ರಾತ್ರಿ ತಡವಾಗಿ ಊಟ ಮುಗಿಸಿ ಕ್ಯಾಂಪಸ್‌ನ ಮೂರನೇ ಮಹಡಿಯಲ್ಲಿನ ಸೆಮಿನಾರ್ ಹಾಲ್‌ಗೆ ಓದುವ ಸಲುವಾಗಿ ತೆರಳಿದ್ದರು. ಮರುದಿನ ಬೆಳಿಗ್ಗೆ ಅವರ ಶವ ಪತ್ತೆಯಾಗಿತ್ತು. ಮರಣೋತ್ತರ ಪರೀಕ್ಷೆಯಲ್ಲಿ ವೈದ್ಯೆಯ ಮೇಲೆ ಅತ್ಯಾಚಾರ ಎಸಗಿ ಕ್ರೂರವಾಗಿ ಹತ್ಯೆಗೈದಿರುವುದು ಬೆಳಕಿಗೆ ಬಂದಿತ್ತು. ಕುತ್ತಿಗೆ ಮುರಿದ ಸ್ಥಿತಿಯಲ್ಲಿ ಕಂಡು ಬಂದಿತ್ತು. ಈ ಪ್ರಕರಣ ದೇಶಾದ್ಯಂತ ಸಂಚಲನ ಸೃಷ್ಟಿಸಿದೆ. ಇನ್ನು ವೈದ್ಯೆ ಕೊಲೆ ಪ್ರಕರಣದ ತನಿಖೆ ನಡೆಸಲು ಸುಪ್ರೀಂಕೋರ್ಟ್‌ ರಾಷ್ಟ್ರೀಯ ಕಾರ್ಯಪಡೆಯನ್ನು ನೇಮಕ ಮಾಡಿದೆ. ಈ ಕಾರ್ಯಪಡೆಯಲ್ಲಿ ಸರ್ಜನ್‌ ವೈಸ್‌ ಅಡ್ಮಿರಲ್‌ ಆರ್‌.ಕೆ. ಸರಿನ್‌, ಏಷ್ಯನ್ ಇನ್ಸ್ಟಿಟ್ಯೂಟ್ ಆಫ್ ನ್ಯಾಷನಲ್ ಗ್ಯಾಸ್ಟ್ರೋಲಜಿ ವ್ಯವಸ್ಥಾಪಕ ನಿರ್ದೇಶಕ ಡಾ. ನಾಗೇಶ್ವರ ರೆಡ್ಡಿ ಇದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ(Mamata Banerjee) ಮತ್ತೆ ಪ್ರಧಾನಿ ನರೇಂದ್ರ ಮೋದಿ(PM Narendra Modi) ಅವರಿಗೆ ಪತ್ರ ಬರೆದಿದ್ದು, ಕೊಲೆ ಅತ್ಯಾಚಾರದಂತಹ ಹೀನ ಕೃತ್ಯದ ವಿರುದ್ಧ ಕಟ್ಟುನಿಟ್ಟಿನ ಕಾನೂನು ಜಾರಿಗೊಳಿಸುವಂತೆ ಮನವಿ ಮನವಿ ಮಾಡಿದ್ದಾರೆ. ಕೆಲವು ದಿನಗಳ ಹಿಂದೆಯಷ್ಟೇ ನಾನು ಅತ್ಯಾಚಾರ ಪ್ರಕರಣಗಳ ವಿರುದ್ಧ ಕೇಂದ್ರ ಕಾನೂನಿನ ಅಗತ್ಯತೆ ಬಗ್ಗೆ ಕೋರಿ ನಿಮಗೆ ಪತ್ರ ಬರೆದಿದ್ದೆ. ಆದರೆ ನಿಮ್ಮಿಂದ ಇದುವರೆಗೆ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ದಯಮಾಡಿ ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿ ಸೂಕ್ರ ಕ್ರಮ ಜರುಗಿಸುವಂತೆ ಮನವಿ ಮಾಡುತ್ತಿದ್ದೇನೆ ಎಂದು ಮಮತಾ ಬ್ಯಾನರ್ಜಿ ತಮ್ಮ ಎರಡನೇ ಪತ್ರದಲ್ಲಿ ತಿಳಿಸಿದ್ದಾರೆ. ಇನ್ನು ಈ ಬಗ್ಗೆ ಅವರು ಟ್ವೀಟ್‌ನಲ್ಲಿ ಪೋಸ್ಟ್‌ವೊಂದನ್ನೂ ಮಾಡಿದ್ದಾರೆ.