ತುಮಕೂರು: ಶೈಕ್ಷಣಿಕ ನಾಡು ತುಮಕೂರಿನಲ್ಲಿ ಗುಣಮಟ್ಟದ ಶಿಕ್ಷಣ ದೊರೆಯುತ್ತಿದೆ ಇದರ ಸದುಪಯೋಗವನ್ನು ನೀವೆಲ್ಲರೂ ಪಡೆದುಕೊಳ್ಳಬೇಕೆಂದು ಕೆ.ಎಸ್.ಆಗ್ರೋ ಕೆಮಿಕಲ್ಸ್ ಮಾಲೀಕ ಶಶಿಧರ ಶೆಟ್ಟಿ ತಿಳಿಸಿದರು.
ನಗರದ ಕನ್ನಡ ಭವನದಲ್ಲಿ ದಕ್ಷಿಣ ಕನ್ನಡ ಮಿತ್ರ ವೃಂದದವತಿಯಿಂದ ಶ್ರೀಕೃಷ್ಣ ಜನ್ಮಾಷ್ಠಮಿ ಅಂಗವಾಗಿ ರಾಧಾ ಕೃಷ್ಣ ವೇಷ ಭೂಷಣ ಸ್ಪರ್ಧೆ, ಪ್ರತಿಭಾ ಪುರಸ್ಕಾರ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಪುಟ್ಟ ಮಕ್ಕಳು ಅವಕಾಶಗಳು ಇವೆ.ತಾವುಗಳು ಕಲೆಯನ್ನು ಬೆಳೆಸಿಕೊಂಡು, ಉಳಿಸಿಕೊಂಡು, ಮುಂದಿನಪೀಳಿಗೆಗೆ ರವಾನಿಸಿ ಎಂಬ ಸಂದೇಶವನ್ನು ನೀಡಿದರು.
ಅಭಿನಂದನೆ ಸ್ವೀಕರಿಸಿ ಮಾತನಾಡಿದ ಸಮಾಜ ಸೇವಕ ಎಚ್.ಜಿ.ಚಂದ್ರಶೇಖರ್, ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಉದ್ಯಮಿ ಸದಾಶಿವ ಅಮಿನ್, ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ದಕ್ಷಿಣ ಕನ್ನಡ ಮಿತ್ರ ವೃಂದದ ಜಿಲ್ಲಾಧ್ಯಕ್ಷ ಅಮರನಾಥಶೆಟ್ಟಿ ಮಾತನಾಡಿದರು.
ಸಮಾರಂಭದಲ್ಲಿ ಕೃಷ್ಣಾ ಜನ್ಮಾಷ್ಠಮಿ ಪ್ರಯುಕ್ತ ಏರ್ಪಡಿಸಿದ್ದ ರಾಧಾ ಕೃಷ್ಣ ವೇಷಧಾರಿಗಳ ಸ್ಪರ್ಧೆಯಲ್ಲಿ ವಿಜೇತರಾದ ಮಕ್ಕಳಿಗೆ ಬಹುಮಾನ ವಿತರಿಸಲಾಯಿತು. 2023-24ನೇ ಸಾಲಿನ ಎಸ್.ಎಸ್.ಎಲ್.ಸಿ ಮತ್ತು ಪಿಯುಸಿಯಲ್ಲಿ ಅತಿ ಹೆಚ್ಚು ಅಂಕ ಪಡೆದ ದಕ್ಷಿಣ ಕನ್ನಡ ಮಿತ್ರ ವೃಂದದ ಸದಸ್ಯರುಗಳ ಕುಟುಂಬದ ಮಕ್ಕಳನ್ನು ಅಭಿನಂದಿಸಲಾಯಿತು.
ಕಾರ್ಯಕ್ರಮದಲ್ಲಿ ಉದ್ಯಮಿ ವಿ.ಬಿ.ಮೊರೀಸ್,ವೈದ್ಯರಾದ ದುರ್ಗಾದಾಸ್ ಅಸ್ರಣ್ಣ,ದಕ್ಷಿಣ ಕನ್ನಡ ಮಿತ್ರ ವೃಂದದ ಕಾರ್ಯದರ್ಶಿ ವೆಂಕಟೇಶ್ ಎಂ..ಎಸ್.ಕಾರಂತ್,ಉಪಾಧ್ಯಕ್ಷರಾದ ಸುಧೀರ್ ಹೆಗ್ಡೆ, ವೆಂಕಟೇಶ್ ಕಾರಂತ.ಎಂ.ಎಸ್,ಖಜಾಂಚಿ ನರಸಿಂಹನಾಯಕ್, ಜಂಟಿ ಕಾರ್ಯದರ್ಶಿ ಸುಶೀಲಾ ರಮೇಶ್, ಸಂಘಟನಾ ಕಾರ್ಯದರ್ಶಿ ವಿಶ್ವನಾಥ ಸೇರಿದಂತೆ ಎಲ್ಲಾ ನಿರ್ದೇಶಕರುಗಳು ಭಾಗವಹಿಸಿದ್ದರು.