ಮುಂಬೈ: ಬಾಲಿವುಡ್ ಸೆಲೆಬ್ರಿಟಿಗಳು ಹಾಗೂ ಡ್ರಗ್ ಪೆಡ್ಲರ್ಗಳ ನಡುವಿನ ಸಂಬಂಧದ ನಟಿ ದೀಪಿಕಾ ಪಡುಕೋಣೆ ಮ್ಯಾನೇಜರ್ ಕರೀಷ್ಮಾ ಪ್ರಕಾಶ್ಗೆ ವಿಚಾರಣೆಗೆ ಹಾಜರಾಗುವಂತೆ ಎನ್ಸಿಬಿ ನೋಟಿಸ್ ನೀಡಿದೆ. ಕರೀಷ್ಮಾ ಬುಧವಾರ ವಿಚಾರಣೆಗೆ ಹಾಜರಾಗುವ ಸಾಧ್ಯತೆಯಿದೆ.
ಕಳೆದ ಮಂಗಳವಾರ ಕರೀಷ್ಮಾ ಪ್ರಕಾಶ್ ಅವರ ವರ್ಸೋವಾ ನಿವಾಸದ ಮೇಲೆ ಎನ್ಸಿಬಿ ದಾಳಿ ನಡೆಸಿ 1.8 ಗ್ರಾಂ ಹಶೀಶ್ ಅನ್ನು ವಶಪಡಿಸಿಕೊಂಡಿತ್ತು. ಬಳಿಕ ಹೆಚ್ಚಿನ ತನಿಖೆಗಾಗಿ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ಜಾರಿ ಮಾಡಿತ್ತು.
ಕಳೆದ ತಿಂಗಳು ಡ್ರಗ್ ನಂಟು ವಿಚಾರವಾಗಿ ದೀಪಿಕಾ ಪಡುಕೋಣೆ, ಸಾರಾ ಅಲಿ ಖಾನ್, ಶ್ರದ್ಧಾ ಕಪೂರ್ ಮತ್ತು ರಕುಲ್ ಪ್ರೀತ್ ಸಿಂಗ್ ಸೇರಿ ಹಲವರನ್ನು ಎನ್ಸಿಬಿ ವಿಚಾರಣೆ ನಡೆಸಿತ್ತು.