Thursday, 19th September 2024

RG KAR Hospital : ಪಶ್ಚಿಮ ಬಂಗಾಳ ಸರ್ಕಾರದ ವಿರುದ್ಧ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ ಕೇಂದ್ರ ಸರ್ಕಾರ

RG KAR Hospital

ಕೋಲ್ಕತಾ: ವೈದ್ಯ ವಿದ್ಯಾರ್ಥಿನಿಯೊಬ್ಬಳನ್ನು ಅತ್ಯಾಚಾರ ಮಾಡಿ ಕೊಲೆ ಮಾಡಿರುವ ಇಲ್ಲನ  ಆರ್‌ಜಿ ಕಾರ್ ಆಸ್ಪತ್ರೆಯಲ್ಲಿ (RG KAR Hospital) ನಿಯೋಜಿಸಲಾದ ಕೇಂದ್ರ ಕೈಗಾರಿಕಾ ಭದ್ರತಾ ಪಡೆ (ಸಿಐಎಸ್ಎಫ್) ಸಿಬ್ಬಂದಿಗೆ ನೀಡಲಾಗುತ್ತಿರುವ ಅಸಮರ್ಪಕ ವ್ಯವಸ್ಥೆಗಳ ಬಗ್ಗೆ ಕಳವಳ ವ್ಯಕ್ತಪಡಿಸಿ ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ. ಉನ್ನತ ನ್ಯಾಯಾಲಯದ ಆದೇಶವನ್ನು ಅನುಸರಿಸಿ ಈ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಆದರೆ ಆದೇಶವನ್ನು ಅನುಸರಿಸಲು ವಿಫಲವಾದ ಪಶ್ಚಿಮ ಬಂಗಾಳ ಸರ್ಕಾರದ ವಿರುದ್ಧ ನ್ಯಾಯಾಂಗ ನಿಂದನೆ ಪ್ರಕರಣ ದಾಲಿಸಬೇಕು ಎಂದು ಸುಪ್ರೀಂ ಕೋರ್ಟ್‌ ಅಭಿಪ್ರಾಯಪಟ್ಟಿದೆ. ಸರ್ಕಾರದ ಪ್ರಕಾರ, ಆರ್ಜಿ ಕಾರ್ ಆಸ್ಪತ್ರೆಯಲ್ಲಿ 54 ಮಹಿಳಾ ಸಿಬ್ಬಂದಿ ಸೇರಿದಂತೆ 92 ಸಿಐಎಸ್ಎಫ್ ಸಿಬ್ಬಂದಿ ವಸತಿ ಸೇರಿದಂತೆ ನಾನಾ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ.

ಆಗಸ್ಟ್ 21 ರಂದು ಸುಪ್ರೀಂ ಕೋರ್ಟ್ ವೈದ್ಯರಿಗೆ ಭದ್ರತೆ ಒದಗಿಸಲು ಆರ್ಜಿ ಕಾರ್ ಆಸ್ಪತ್ರೆಯಲ್ಲಿ ಸಿಐಎಸ್ಎಫ್ ನಿಯೋಜಿಸಲು ಆದೇಶಿಸಿತ್ತು. ರಾತ್ರಿ ಪಾಳಿಯಲ್ಲಿದ್ದಾಗ ಆಸ್ಪತ್ರೆಯ ಸೆಮಿನಾರ್ ಹಾಲ್‌ನಲ್ಲಿ ತರಬೇತಿ ವೈದ್ಯೆಯ ಮೇಲೆ ಅತ್ಯಾಚಾರ ನಡೆಸಿ ಕೊಲೆ ಮಾಡಿದ ಕೆಲವು ದಿನಗಳ ನಂತರ ಈ ಆದೇಶ ಹೊರಬಿದ್ದಿತ್ತು. ಅತ್ಯಾಚಾರ ಘಟನೆ ನಡೆದ ಕೆಲವೇ ದಿನಗಳಲ್ಲಿ ಆಸ್ಪತ್ರೆಯನ್ನು ದುಷ್ಕರ್ಮಿಗಳ ಗುಂಪು ಧ್ವಂಸಗೊಳಿಸಿತ್ತು.  ನ್ಯಾಯಾಲಯವು ಎರಡು ಘಟನೆಗಳನ್ನು ಗಮನಿಸಿ ಭದ್ರತಾ ಪಡೆಗಳನ್ನು ನಿಯೋಜಿಸಲು ಆದೇಶಿಸಿತ್ತು. ರಾಜ್ಯ ಸರ್ಕಾರವು ಭದ್ರತಾ ಪಡೆಗಳಿಗೆ ವಿಶೇಷವಾಗಿ ಮಹಿಳಾ ತುಕಡಿಗೆ ಸರಿಯಾದ ವಸತಿ ಸೌಲಭ್ಯಗಳು, ಸಾರಿಗೆ ಅಥವಾ ಸುರಕ್ಷಿತ ವ್ಯವಸ್ಥೆ ನೀಡಿಲ್ಲ ಎಂದು ಕೇಂದ್ರ ಸರ್ಕಾರ ಆರೋಪಿಸಿದೆ.

ಈ ಸುದ್ದಿಯನ್ನೂ ಓದಿ: Stone Baby: ಮಹಿಳೆಯ ಹೊಟ್ಟೆಯಲ್ಲಿತ್ತು ಮಗುವಿನ ಅಸ್ಥಿ ಪಂಜರ!

ಕೇಂದ್ರದ ಅರ್ಜಿಯು ಸಾಕಷ್ಟು ಸೌಲಭ್ಯಗಳ ಅಗತ್ಯದ ಬೇಡಿಕೆಯನ್ನು ಮುಂದಿಟ್ಟುಕೊಂಡಿದೆ. ಪಶ್ಚಿಮ ಬಂಗಾಳ ಸರ್ಕಾರದಿಂದ ಸಹಕಾರದ ಕೊರತೆಯು ಅಪಾಯಕಾರಿ. ವಿಶೇಷವಾಗಿ ರಾಜ್ಯದ ಪ್ರಸ್ತುತ ಸೂಕ್ಷ್ಮ ಪರಿಸ್ಥಿತಿ ಗಮನಿಸಿದರೆ. ವೈದ್ಯರ ಸುರಕ್ಷತೆ ಮತ್ತು ಭದ್ರತೆ, ವಿಶೇಷವಾಗಿ ಮಹಿಳಾ ವೈದ್ಯರು ರಾಜ್ಯ ಸರ್ಕಾರದ ಮೊದಲ ಆದ್ಯತೆಯಾಗಿರಬೇಕು ಎಂದು ಕೇಂದ್ರ ಸರ್ಕಾರ ವಾದಿಸಿದೆ. ಈ ಬಗ್ಗೆ ವಿನಂತಿಸಿದರೂ ಪಶ್ಚಿಮ ಬಂಗಾಳ ಸರ್ಕಾರದ ಸರಿಯಾಗಿ ಪ್ರತಿಕ್ರಿಯಿಸುತ್ತಿಲ್ಲ ಎಂಬುದಾಗಿ ಕೇಂದ್ರ ಸರ್ಕಾರ ವಾದಿಸಿದೆ.

ಬಂಗಾಳ ಸರ್ಕಾರದ ಕೆಲವೊಂದು ನಿರ್ಧಾರಗಳು ಸುಪ್ರೀಂ ಕೋರ್ಟ್‌ನ ಆದೇಶಗಳನ್ನು ಉದ್ದೇಶಪೂರ್ವಕವಾಗಿ ನಿರ್ಲಕ್ಷಿಸಿದಂತಾಗುತ್ತದೆ. ಪಶ್ಚಿಮ ಬಂಗಾಳ ಸರ್ಕಾರವು ಉದ್ದೇಶಪೂರ್ವಕವಾಗಿ ಸಮಸ್ಯೆ ಸೃಷ್ಟಿಸುತ್ತಿದೆ. ಸುಪ್ರೀಂ ಕೋರ್ಟ್ ಕೊಟ್ಟಿರುವ ಪರಿಹಾರ ಮಾದರಿಯನ್ನು ನಿರ್ಲಕ್ಷಿಸಿದೆ ಎಂದು ಸುಪ್ರೀಂ ಕೋರ್ಟ್‌ ಆದೇಶಿಸಿದೆ.

Leave a Reply

Your email address will not be published. Required fields are marked *