Friday, 22nd November 2024

Modern Anganwadi: ರಾಜ್ಯದಲ್ಲಿ ಆಧುನಿಕ ಮಾದರಿಯ 17 ಸಾವಿರ ಅಂಗನವಾಡಿ ಕೇಂದ್ರ; ಕೇಂದ್ರದಿಂದ ಮಂಜೂರಾತಿ

Modern Anganwadi

ಬೆಂಗಳೂರು: ರಾಜ್ಯದಲ್ಲಿ ಮುಂದಿನ ವರ್ಷಗಳಲ್ಲಿ ಆಧುನಿಕ ಮಾದರಿಯ 17 ಸಾವಿರ ಅಂಗನವಾಡಿ ಕೇಂದ್ರ (Modern Anganwadi) ತೆರೆಯಲು ಕೇಂದ್ರ ಸರ್ಕಾರ ಮಂಜೂರಾತಿ ನೀಡಿದ್ದು, ಅದಕ್ಕಾಗಿ 104 ಕೋಟಿ ರೂ. ಅನುದಾನ ಬಿಡುಗಡೆ ಮಾಡಿದೆ. ಮುಂದಿನ ದಿನಗಳಲ್ಲಿ ಅಂಗನವಾಡಿ ಕೇಂದ್ರಗಳಲ್ಲೇ ಎಲ್‌ಕೆಜಿ, ಯುಕೆಜಿ ಆರಂಭಿಸಲು ಉದ್ದೇಶಿಸಲಾಗಿದೆ ಎಂದು ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ತಿಳಿಸಿದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಪ್ರಗತಿ ಪರಿಶೀಲನೆ ಸಭೆಯಲ್ಲಿ ಸಚಿವೆ ಮಾತನಾಡಿದ್ದು, ತುಮಕೂರು ಜಿಲ್ಲೆಯಲ್ಲಿ 234 ಅಂಗನವಾಡಿ ಕೇಂದ್ರಗಳಲ್ಲಿ ಸರ್ಕಾರಿ ಮಾಂಟೆಸ್ಸರಿ ಆರಂಭಿಸಲಾಗುವುದು. ತುಮಕೂರು ನಗರದಲ್ಲಿ ಸಿಎ ಸೈಟ್ ಸಿಕ್ಕರೆ ಅಂಗನವಾಡಿ ಕಟ್ಟಡಗಳನ್ನು ನಿರ್ಮಿಸಲು ಇಲಾಖೆಯ ಅಧಿಕಾರಿಗಳಿಗೆ ಸಚಿವರು ಸೂಚನೆ ನೀಡಿದರು.

https://x.com/KarnatakaVarthe/status/1831316456765579446

ಗಣಪತಿ ಹಬ್ಬದ ಒಳಗೆ ಸಂಬಳ

ಅಂಗನವಾಡಿ ಕಾರ್ಯಕರ್ತೆಯರಿಗೆ ಸಂಬಳ ಆಗದ ವಿಚಾರ ಪ್ರತಿಕ್ರಿಯಿಸಿ, ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರದ ಅನುದಾನದಲ್ಲಿ ಸಂಬಳ ಕೊಡಲಾಗುತ್ತದೆ. ಈ ರೀತಿಯ ಸಮಸ್ಯೆ ಆಗುತ್ತಿರುವುದು ಇದೇ ಮೊದಲಲ್ಲ. ಕೇಂದ್ರ‌ ಸರ್ಕಾರ ಬಿಡುಗಡೆ ಮಾಡಿದಾಗ ನಾವು ರಾಜ್ಯ ಸರ್ಕಾರದ ಮೊತ್ತ ಸೇರಿಸಿ ಸಂಬಳ ನೀಡಬೇಕಾಗುತ್ತದೆ. ಕೇಂದ್ರದಿಂದ ಹಣ ಇನ್ನೂ ಬಂದಿಲ್ಲ. ಈಗಾಗಲೇ ನಾವು ಮೂರು ನಾಲ್ಕು ಬಾರಿ ಪತ್ರ ಬರೆದಿದ್ದೇವೆ. ನಮ್ಮ ಇಲಾಖೆ ನಿರ್ದೇಶಕರು ಮೊನ್ನೆಯಷ್ಟೇ ದೆಹಲಿಗೆ ಹೋಗಿ ಬಂದಿದ್ದಾರೆ. ಆದಷ್ಟು ಬೇಗ ನೀಡಲಾಗುವುದು. ಗಣಪತಿ ಹಬ್ಬದ ಒಳಗೆ ಸಂಬಳ ನೀಡುವ ಪ್ರಯತ್ನಿಸಲಾಗುವುದು ಎಂದು ತಿಳಿಸಿದ್ದಾರೆ.

ನಮ್ಮ ಇಲಾಖೆಯಲ್ಲಿ ಬಹಳಷ್ಟು ಯೋಜನೆಗಳಿಗೆ ಎರಡೂ ಸರ್ಕಾರದ ಅನುದಾನ ಬಳಕೆ ಆಗುತ್ತದೆ. ವಿಳಂಬ ಮೊದಲಿನಿಂದಲೂ ಆಗಿದೆ, ಇನ್ಮುಂದೆ ಈ ರೀತಿ ಆಗದ ಹಾಗೆ ನೋಡಿಕೊಳ್ಳಲಾಗುವುದು ಎಂದು ಸಚಿವೆ ಹೇಳಿದ್ದಾರೆ.

ದಕ್ಷಿಣ ಭಾರತಕ್ಕೆ‌ ಬಂದ ಜರ್ಮನಿಯ ‘ಫ್ಲಿಕ್ಸ್‌ಬಸ್’: ಸಚಿವ ಎಂ.ಬಿ. ಪಾಟೀಲ್‌ ಹಸಿರು ನಿಶಾನೆ

ಬೆಂಗಳೂರು: ಪ್ರಮುಖ ನಗರಗಳ ನಡುವೆ ಬಸ್ ಸಂಚಾರ ಒದಗಿಸುವ ಜರ್ಮನಿ ಮೂಲದ ಫ್ಲಿಕ್ಸ್‌ಬಸ್ ಸಂಚಾರಕ್ಕೆ ಭಾರಿ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂಬಿ ಪಾಟೀಲ ಮಂಗಳವಾರ ಹಸಿರು ನಿಶಾನೆ ತೋರಿದರು. ಇದರೊಂದಿಗೆ, ಫ್ಲಿಕ್ಸ್ ಬಸ್ ಸೇವೆಯು ದಕ್ಷಿಣ ಭಾರತಕ್ಕೆ ಪದಾರ್ಪಣೆ ಮಾಡಿದೆ.

ಸಚಿವರು ಈ ಸಂದರ್ಭದಲ್ಲಿ ಸಚಿವರು ಮಾತನಾಡಿ, ಭಾರತವೂ ಸೇರಿದಂತೆ 43 ದೇಶಗಳಲ್ಲಿ ಕಾರ್ಯಾಚರಿಸುತ್ತಿರುವ ಫ್ಲಿಕ್ಸ್‌ಬಸ್ ಸೇವೆಯು ದಕ್ಷಿಣ ಭಾರತದಲ್ಲಿ ಜನರ ಪ್ರಯಾಣದ ಅನುಭವವನ್ನು ಹೊಸ ಎತ್ತರಕ್ಕೆ ಕೊಂಡೊಯ್ಯಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಖಾಸಗಿ ಬಸ್ ನಿರ್ವಾಹಕರ ಸಹಯೋಗದಲ್ಲಿ ಸಂಚಾರ ಜಾಲ ವಿಸ್ತರಿಸಿಕೊಳ್ಳುವ ಯೋಜನೆಯನ್ನು ಫ್ಲಿಕ್ಸ್‌ಬಸ್ ಹೊಂದಿದೆ. ಹೆಚ್ಚಿನ ಅನುಕೂಲ, ಸುರಕ್ಷತೆ ಹಾಗೂ ಹೊರೆ ಎನ್ನಿಸದ ದರಗಳ ಮೂಲಕ ಬಸ್ ಪ್ರಯಾಣಿಕರ ವಿಶ್ವಾಸ ಗಳಿಸುವ ಗುರಿ ಹೊಂದಿದೆ ಎಂದರು.

ಬಸ್ ಸಂಚಾರದಲ್ಲಿ ಭಾರತವು ಜಗತ್ತಿನ ಎರಡನೇ ದೊಡ್ಡ ಮಾರುಕಟ್ಟೆಯಾಗಿದೆ. ಪರಿಸರ ಸ್ನೇಹಿ ಇಂಧನಗಳ ಬಳಕೆಗೆ ಒತ್ತು ನೀಡಿ ದೇಶದಲ್ಲಿ ಸುಸ್ಥಿರ ಸಂಚಾರಕ್ಕೆ ಕೊಡುಗೆ ನೀಡಲು ಸಂಸ್ಥೆಯು ಆದ್ಯತೆ ನೀಡಬೇಕೆಂದು ಸಚಿವರು ಅಭಿಪ್ರಾಯಪಟ್ಟರು.

ಜರ್ಮನಿಯ ಡೆಪ್ಯುಟಿ ಕಾನ್ಸುಲ್ ಜನರಲ್ ಅನೆಟ್ ಬೆಸಿಯರ್, ಫ್ಲಿಕ್ಸ್ ಬಸ್ ಸಹ-ಸ್ಥಾಪ ಡೇನಿಯಲ್ ಕ್ರೌಸ್, ಫ್ಲಿಕ್ಸ್ ಬಸ್ ಇಂಡಿಯಾದ ವ್ಯವಸ್ಥಾಪಕ ನಿರ್ದೇಶಕ ಸೂರ್ಯ ಖುರಾನ ಅವರು ಇದ್ದರು.