ಬೆಂಗಳೂರು: ಬಿಬಿಎಂಪಿ, ಜಲ ಸಂಪನ್ಮೂಲ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸೇರಿ ವಿವಿಧ ಇಲಾಖೆಗಳಲ್ಲಿನ ಗ್ರೂಪ್-ಬಿ ಹುದ್ದೆಗಳ ನೇಮಕಾತಿ ಪರೀಕ್ಷೆಯನ್ನು ಸೆ.14 ಮತ್ತು 15ರಂದು ಕೆಪಿಎಸ್‌ಸಿ (KPSC Group B Recruitment) ನಿಗದಿಪಡಿಸಿದೆ. ಅಭ್ಯರ್ಥಿಗಳಿಗೆ ಸೆ.5ರಿಂದ ಪ್ರವೇಶ ಪತ್ರ ಬಿಡುಗಡೆ ಮಾಡಲಾಗಿತ್ತು. ಆದರೆ, ತಾಂತ್ರಿಕ ಕಾರಣಗಳಿಂದ ಸದ್ಯ ತಾತ್ಕಾಲಿಕವಾಗಿ ಪ್ರವೇಶ ಪತ್ರ ಡೌನ್ ಲೋಡ್ ಮಾಡಿಕೊಳ್ಳುವುದನ್ನು ಸ್ಥಗಿತಗೊಳಿಸಲಾಗಿದೆ.
ಈ ಬಗ್ಗೆ ಕರ್ನಾಟಕ ಲೋಕಸೇವಾ ಆಯೋಗ ಪ್ರಕಟಣೆ ಹೊರಡಿಸಿದೆ. 2024ರ ಮಾರ್ಚ್ 13ರಂದು ಅಧಿಸೂಚಿಸಿರುವ ವಿವಿಧ ಗ್ರೂಪ್ ಬಿ ಹುದ್ದೆಗಳಿಗೆ ಸೆ.14 ಮತ್ತು 15ರಂದು ನಡೆಸಲಿರುವ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸೆ.5ರಂದುಪ್ರವೇಶ ಪತ್ರಗಳನ್ನು ಡೌನ್ ಲೋಡ್ ಮಾಡಿಕೊಳ್ಳಲು ಅವಕಾಶ ಕಲ್ಪಿಸಲಾಗಿತ್ತು. ಆದರೆ, ತಾಂತ್ರಿಕ ಕಾರಣದಿಂದಾಗಿ ಕೆಲವು ಅಭ್ಯರ್ಥಿಗಳ ಪರೀಕ್ಷಾ ಉಪಕೇಂದ್ರಗಳ ಹಂಚಿಕೆಯಲ್ಲಿ ವ್ಯತ್ಯಾಸ ಕಂಡು ಬಂದಿದ್ದರಿಂದ, ತಾತ್ಕಾಲಿಕವಾಗಿ ಪ್ರವೇಶ ಪತ್ರವನ್ನು ಡೌನ್ ಲೋಡ್ ಮಾಡಿಕೊಳ್ಳುವುದನ್ನು ಸ್ಥಗಿತಗೊಳಿಸಲಾಗಿದೆ. ಶೀಘ್ರದಲ್ಲಿಯೇ ಸಮಸ್ಯೆ ಬಗೆಹರಿಸಲಾಗುವುದು. ಆ ನಂತರ ಅಭ್ಯರ್ಥಿಗಳು ಹೊಸದಾಗಿ ಮತ್ತೊಮ್ಮೆ ಪ್ರವೇಶ ಪತ್ರವನ್ನು ಡೌನ್ ಲೋಡ್ ಮಾಡಿಕೊಳ್ಳಬೇಕು ಎಂದು ಆಯೋಗ ತಿಳಿಸಿದೆ.
— Secretary KPSC (@secretarykpsc) September 6, 2024
ಬಿಬಿಎಂಪಿ, ಜಲ ಸಂಪನ್ಮೂಲ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸೇರಿ ವಿವಿಧ ಇಲಾಖೆಗಳಲ್ಲಿನ ಒಟ್ಟು 277 ಗ್ರೂಪ್-ಬಿ ಹುದ್ದೆಗಳಿಗೆ ಸೆ.14 ಮತ್ತು 15ರಂದು ಸ್ಪರ್ಧಾತ್ಮಕ ಪರೀಕ್ಷೆ ನಡೆಯಲಿದೆ.
ಕಡ್ಡಾಯ ಕನ್ನಡ ಪರೀಕ್ಷೆ
ಈ ಹುದ್ದೆಗಳಿಗೆ ಕರ್ನಾಟಕ ನಾಗರಿಕ ಸೇವಾ (ನೇರ ನೇಮಕಾತಿ) (ಸಾಮಾನ್ಯ) ನಿಯಮಗಳು 2021ರ ನಿಯಮ ಉಪ ನಿಯಮ-7 ರಲ್ಲಿ ನಿರ್ದಿಷ್ಟ ಪಡಿಸಲಾದಂತೆ, ಅಭ್ಯರ್ಥಿಗಳು ಕನ್ನಡ ಭಾಷಾ ಪರೀಕ್ಷೆಯಲಿ ಅರ್ಹತೆಯನ್ನು ಪಡೆಯದ ಹೊರತು ಆಯ್ಕೆಗೆ ಅರ್ಹರಾಗುವುದಿಲ್ಲ. ಈ ಪರೀಕ್ಷೆಯು ಗರಿಷ್ಠ 150 ಅಂಕಗಳ ಒಂದು ಪ್ರಶ್ನೆ ಪತ್ರಿಕೆಯನ್ನು ಒಳಗೊಂಡಿದ್ದು, ಅಭ್ಯರ್ಥಿಯು ಈ ಪತ್ರಿಕೆಯಲ್ಲಿ ಅರ್ಹತೆ ಹೊಂದಲು ಕನಿಷ್ಠ 50 ಅಂಕಗಳನ್ನು ಗಳಿಸಬೇಕು. ಈ ಪ್ರಶ್ನೆ, ಪತ್ರಿಕೆಯನ್ನು ಎಸ್.ಎಸ್.ಎಲ್.ಸಿ. ಹಂತದಲ್ಲಿನ ಪ್ರಥಮ ಭಾಷೆ ಕನ್ನಡವನ್ನು ಮಾನದಂಡವನ್ನಾಗಿಟ್ಟುಕೊಂಡು ಸಿದ್ಧಪಡಿಸಲಾಗುತ್ತದೆ.
ವಿಶೇಷ ಸೂಚನೆ: ಕನ್ನಡ ಭಾಷಾ ಪರೀಕ್ಷೆಗೆ ಸಂಬಂಧಿಸಿದಂತೆ ಅಭ್ಯರ್ಥಿಗಳು 29-11-2022ರ ನಂತರ ನಡೆಸಿರುವ ಕನ್ನಡ ಭಾಷಾ ಪರೀಕ್ಷೆ ಫಲಿತಾಂಶವನ್ನು ಈ ಅಧಿಸೂಚನೆಯಲ್ಲಿನ ಹುದ್ದೆಗಳ ಕನ್ನಡ ಭಾಷಾ ಪರೀಕ್ಷೆಗೂ ಪರಿಗಣಿಸಲಾಗುವುದು. ಆದ್ದರಿಂದ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವಾಗ ಆನ್ ಲೈನ್ ಅರ್ಜಿಯ ನಿಗದಿತ ಅಂಕಣದಲ್ಲಿ ಕನ್ನಡ ಭಾಷಾ ಪರೀಕ್ಷೆ ಕುರಿತಂತೆ ಕೇಳಿರುವ ಮಾಹಿತಿಯನ್ನು ತಪ್ಪದೇ ನಮೂದಿಸಿರಬೇಕು.
ಸ್ಪರ್ಧಾತ್ಮಕ ಪರೀಕ್ಷಾ ವಿಧಾನ:
ಪರೀಕ್ಷೆಯು ತಲಾ 300 ಅಂಕಗಳ ಎರಡು ಪ್ರಶ್ನೆ ಪತ್ರಿಕೆ (ಸಾಮಾನ್ಯ ಪತ್ರಿಕೆ-1, ನಿರ್ದಿಷ್ಟ ಪತ್ರಿಕೆ -2) ಒಳಗೊಂಡಿರುತ್ತದೆ. ಪತ್ರಿಕೆ-1ರಲ್ಲಿ ಪ್ರಚಲಿತ ವಿದ್ಯಮಾನ, ಸಾಮಾನ್ಯ ವಿಜ್ಞಾನ, ಭಾರತ ಹಾಗೂ ಕರ್ನಾಟಕದ ಇತಿಹಾಸ, ಭೂಗೋಳ ಶಾಸ್ತ್ರ, ಸಮಾಜ ವಿಜ್ಞಾನ, ಬೌದ್ಧಿಕ ಸಾಮರ್ಥ್ಯ, ದೈನಂದಿನ ಗ್ರಹಿಕೆ ವಿಷಯಗಳು ಇರಲಿವೆ. ಇನ್ನು ಪತ್ರಿಕೆ-2 ನಿರ್ದಿಷ್ಟ ಪತ್ರಿಕೆಯಾಗಿದ್ದು, ಆಯಾ ಇಲಾಖೆಯ ಹುದ್ದೆಗಳಿಗೆ ಸಂಬಂಧಿಸಿದಂತೆ ಪಠ್ಯಕ್ರಮ ನೀಡಲಾಗಿದ್ದು, ಕೆಪಿಎಸ್‌ಸಿ ಅಧಿಸೂಚನೆಯಲ್ಲಿ ಪಠ್ಯಕ್ರಮ ನೀಡಲಾಗಿದೆ.
ವಿವಿಧ ಹುದ್ದೆಗಳ ಭರ್ತಿಗೆ ಯುಪಿಎಸ್‌ಸಿಯಿಂದ ಅರ್ಜಿ ಆಹ್ವಾನ; ಹೀಗೆ ಅಪ್ಲೈ ಮಾಡಿ
ಬೆಂಗಳೂರು: ಯೂನಿಯನ್ ಪಬ್ಲಿಕ್ ಸರ್ವಿಸ್ ಕಮಿಷನ್ (Union Public Service Commission) ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಅಸಿಸ್ಟಂಟ್ ಹೈಡ್ರೋಜಿಯಾಲಜಿಸ್ಟ್, ಜಿಯಾಲಜಿಸ್ಟ್ (ಭೂ ವಿಜ್ಞಾನಿ) ಸೇರಿ 85 ಹುದ್ದೆಗಳು ಖಾಲಿ ಇವೆ (UPSC Recruitment 2024). ಸ್ನಾತಕೋತ್ತರ ಪದವಿ ಓದಿದವರು ಅರ್ಜಿ ಸಲ್ಲಿಸಬಹುದು. ಆಸಕ್ತರು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಿದ್ದು, ಕೊನೆಯ ದಿನ ಸೆಪ್ಟೆಂಬರ್ 24 (Job Guide).
ಹುದ್ದೆಗಳ ವಿವರ ಮತ್ತು ವಿದ್ಯಾರ್ಹತೆ
ಜಿಯಾಲಜಿಸ್ಟ್ – 16 ಹುದ್ದೆ, ವಿದ್ಯಾರ್ಹತೆ: ಸ್ನಾತಕೋತ್ತರ ಪದವಿ
ಭೂಭೌತಶಾಸ್ತ್ರಜ್ಞ (Geophysicist) – 6 ಹುದ್ದೆ, ವಿದ್ಯಾರ್ಹತೆ: ಎಂ.ಎಸ್‌ಸಿ
ಕೆಮಿಸ್ಟ್ – 2 ಹುದ್ದೆ, ವಿದ್ಯಾರ್ಹತೆ: ಎಂ.ಎಸ್‌ಸಿ
ಸೈಂಟಿಸ್ಟ್ ಬಿ (ಹೈಡ್ರೋಜಿಯಾಲಜಿ) – 13 ಹುದ್ದೆ, ವಿದ್ಯಾರ್ಹತೆ: ಸ್ನಾತಕೋತ್ತರ ಪದವಿ
ಸೈಂಟಿಸ್ಟ್ ಬಿ (ಕೆಮಿಕಲ್) – 1 ಹುದ್ದೆ, ವಿದ್ಯಾರ್ಹತೆ: ಎಂ.ಎಸ್‌ಸಿ
ಸೈಂಟಿಸ್ಟ್ ಬಿ (ಜಿಯೋಫಿಸಿಕ್ಸ್) – 1 ಹುದ್ದೆ, ವಿದ್ಯಾರ್ಹತೆ: ಎಂ.ಎಸ್‌ಸಿ
ಅಸಿಸ್ಟಂಟ್ ಹೈಡ್ರೋಜಿಯಾಲಜಿಸ್ಟ್ – 31 ಹುದ್ದೆ, ವಿದ್ಯಾರ್ಹತೆ: ಸ್ನಾತಕೋತ್ತರ ಪದವಿ
ಅಸಿಸ್ಟಂಟ್ ಕೆಮಿಸ್ಟ್ – 4 ಹುದ್ದೆ, ವಿದ್ಯಾರ್ಹತೆ: ಎಂ.ಎಸ್‌ಸಿ
ಅಸಿಸ್ಟಂಟ್ ಜಿಯೋಫಿಸಿಸ್ಟ್- 11 ಹುದ್ದೆ, ವಿದ್ಯಾರ್ಹತೆ: ಎಂ.ಎಸ್‌ಸಿ
ವಯೋಮಿತಿ ಮತ್ತು ಅರ್ಜಿ ಶುಲ್ಕ
ಅಭ್ಯರ್ಥಿಗಳ ಕನಿಷ್ಠ ವಯಸ್ಸು 21 ವರ್ಷ ಮತ್ತು ಗರಿಷ್ಠ ವಯಸ್ಸು 32 ವರ್ಷ. ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಲಭ್ಯ. ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ ಮತ್ತು ಎಸ್‌ಸಿ / ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷಗಳ ರಿಯಾಯಿತಿ ಇದೆ. ಎಸ್‌ಸಿ / ಎಸ್‌ಟಿ / ಪಿಡಬ್ಲ್ಯುಬಿಡಿ / ಮಹಿಳಾ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕವಿಲ್ಲ. ಉಳಿದ ಅಭ್ಯರ್ಥಿಗಳು ಅರ್ಜಿ ಶುಲ್ಕವಾಗಿ 200 ರೂ. ಪಾವತಿಸಬೇಕು.
ಆಯ್ಕೆ ವಿಧಾನ
ಪ್ರಾಥಮಿಕ ಪರೀಕ್ಷೆ, ಮುಖ್ಯ ಪರೀಕ್ಷೆ, ಪರ್ಸನಾಲಿಟಿ ಟೆಸ್ಟ್ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.
ಅರ್ಜಿ ಸಲ್ಲಿಸುವ ವಿಧಾನ
- ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ (https://upsconline.nic.in/upsc/OTRP/index.php)
- ಇಮೇಲ್ ಐಡಿ ಅಥವಾ ಫೋನ್ ನಂಬರ್ ನಮೂದಿಸಿ ಪಾಸ್‌ವರ್ಡ್ ತಯಾರಿಸಿ.
- ಹೊಸ ಪಾಸ್‌ವರ್ಡ್ ಬಳಸಿ ಲಾಗಿನ್ ಆಗಿ.
- ಈಗ ಕಂಡುಬರುವ ಅಪ್ಲಿಕೇಷನ್ ಫಾರಂ ಅನ್ನು ಎಚ್ಚರಿಕೆಯಿಂದ ಭರ್ತಿ ಮಾಡಿ.
- ವೈಯಕ್ತಿಕ ಮಾಹಿತಿ ಜೊತೆಗೆ ಶೈಕ್ಷಣಿಕ ವಿವರಗಳನ್ನು ನಮೂದಿಸಿ.
- ಅಗತ್ಯ ದಾಖಲೆ, ಫೋಟೋಗಳನ್ನು ಸೂಕ್ತ ಅಳತೆಯಲ್ಲಿ ಅಪ್‌ಲೋಡ್ ಮಾಡಿ.
- ಆನ್‌ಲೈನ್ ಮೂಲಕ ಅರ್ಜಿ ಶುಲ್ಕ ಪಾವತಿಸಿ (ಅಗತ್ಯವಿದ್ದವರು ಮಾತ್ರ).
- ಭರ್ತಿ ಮಾಡಿದ ವಿವರಗಳನ್ನು ಮತ್ತೊಮ್ಮೆ ಪರಿಶೀಲಿಸಿ ಎಲ್ಲವೂ ಸರಿ ಇದ್ದರೆ Submit ಬಟನ್ ಕ್ಲಿಕ್ ಮಾಡಿ.
- ರಿಕ್ವೆಸ್ಟ್ ನಂಬರ್ ಅಥವಾ ಅಪ್ಲಿಕೇಷನ್ ನಂಬರ್ ನೋಟ್ ಮಾಡಿಟ್ಟುಕೊಳ್ಳಿ.
ಹೆಚ್ಚಿನ ವಿವರಗಳಿಗೆ, ಸಂಶಯ ನಿವಾರಣೆಗೆ ದೂರವಾಣಿ ಸಂಖ್ಯೆ: 011-23385271/011-23381125/011-23098543ಕ್ಕೆ ಕರೆ ಮಾಡಿ. ಅಧಿಕೃತ ವೆಬ್‌ಸೈಟ್: upsc.gov.inಗೆ ಭೇಟಿ ನೀಡಿ.
ಈ ಸುದ್ದಿಯನ್ನೂ ಓದಿ: Railway Jobs: ಕೊಂಕಣ ರೈಲ್ವೆಯಲ್ಲಿ ಕರ್ನಾಟಕದವರಿಗೆ 190 ಉದ್ಯೋಗ, ಸರ್ಜಿ ಸಲ್ಲಿಸುವುದು ಹೀಗೆ