Friday, 20th September 2024

CM Siddaramaiah: ಕರ್ನಾಟಕವು ಕುವೆಂಪು, ಅಂಬೇಡ್ಕರ್, ಬಸವಣ್ಣನವರ ಮಾನವೀಯ ಮೌಲ್ಯದ ನೆಲೆ: ಸಿಎಂ

CM Siddaramaiah

ಬೆಂಗಳೂರು: ಕರ್ನಾಟಕ ರಾಜ್ಯ ಕುವೆಂಪು, ಅಂಬೇಡ್ಕರ್, ಬಸವಣ್ಣನವರ ಮಾನವೀಯ ಮೌಲ್ಯದ ನೆಲೆಯಾಗಿದೆ. ಕಪಟಿಗಳ ದ್ವೇಷದ ಪಿತೂರಿಗೆ ಮಹನೀಯರ ಮಾನವೀಯ ಆಶಯಗಳು ಬಲಿಯಾಗಬಾರದು. ಪರಸ್ಪರ ಸಹಬಾಳ್ವೆ, ಸೌಹಾರ್ದದ ಬೆಸುಗೆಯನ್ನು ನಾವೆಲ್ಲರೂ ಗಟ್ಟಿಗೊಳಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಕರೆ ನೀಡಿದ್ದಾರೆ.

ಶಿವಾಜಿನಗರದ ಐತಿಹಾಸಿಕ ಬೆಸಿಲಿಕಾ ಚರ್ಚ್‌ನಲ್ಲಿ ನಡೆದ ಸೇಂಟ್ ಮೇರಿ ಅಮ್ಮನವರ ಹುಟ್ಟು ಹಬ್ಬದ ಆಚರಣೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಶಿವಾಜಿನಗರದ ಬೆಸಿಲಿಕಾ ಮಂದಿರ ಚಾರಿತ್ರಿಕವಾಗಿ ಸೌಹಾರ್ದ ಮಂದಿರವಾಗಿದೆ. ಎಲ್ಲಾ ಜಾತಿಯ, ಎಲ್ಲಾ ಧರ್ಮದವರು ಈ ಪ್ರಾರ್ಥನಾ ಮಂದಿರಕ್ಕೆ ನಿರಂತರವಾಗಿ ಬಂದು ಹೋಗುತ್ತಿರುವುದೇ ಈ ಮಂದಿರದ ಸೌಹಾರ್ದ ಪರಂಪರೆಗೆ ಸಾಕ್ಷಿ ಎಂದರು.

ಆರೋಗ್ಯ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ಕ್ರೈಸ್ತ ಧರ್ಮ ಗುರುಗಳ ಮತ್ತು ಸಂಸ್ಥೆಗಳ ಕೊಡುಗೆಯನ್ನು ಪ್ರತಿಯೊಬ್ಬರೂ ಮೆಚ್ಚಿಕೊಳ್ಳುತ್ತಾರೆ. ಇವರ ಈ ಸಾಮಾಜಿಕ‌ ಕಾರ್ಯ ಪ್ರತಿಯೊಬ್ಬರಿಗೂ ಮಾದರಿಯಾಗಲಿ ಎಂದು ಹರೈಸಿದರು. ಇದೇ ವೇಳೆ ಬೆಸಿಲಿಕಾ ಚರ್ಚ್‌ನ ಪುನರುಜ್ಜೀವನಕ್ಕೆ 5 ಕೋಟಿ ನೆರವನ್ನು ನೀಡಲಾಗುವುದು ಎಂದು ಭರವಸೆ ನೀಡಿದರು.

ಈ ಸುದ್ದಿಯನ್ನೂ ಓದಿ | Ganesh Chaturthi: ಕಚೇರಿಯಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪಿಸಿ, ಪೂಜೆ ಸಲ್ಲಿಸಿದ ಬೆಳಗಾವಿ ಡಿಸಿ ಮೊಹಮ್ಮದ್‌ ರೋಷನ್‌

ಶಾಸಕರಾದ ರಿಜ್ವಾನ್ ಅರ್ಷದ್ ಅವರು ಅಧ್ಯಕ್ಷತೆ ವಹಿಸಿದ್ದ ಕಾರ್ಯಕ್ರಮದಲ್ಲಿ ಆರ್ಚ್ ಬಿಷಪ್ ಡಾ.ಪೀಟರ್ ಮಚಾಡೊ ಅವರು ದಿವ್ಯ ಸಾನ್ನಿಧ್ಯ ವಹಿಸಿದ್ದರು. ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು ಮುಖ್ಯ ಅತಿಥಿಗಳಾಗಿದ್ದರು.

Basavaraj Bommai: ಮಹದಾಯಿ ಹಿನ್ನಡೆಗೆ ಕಾಂಗ್ರೆಸ್‌ನವರೇ ಕಾರಣ: ಬಸವರಾಜ ಬೊಮ್ಮಾಯಿ

ಹಾವೇರಿ: ಮಹದಾಯಿ ಯೋಜನೆಗೆ ಕಾಂಗ್ರೆಸ್‌ನವರಿಂದಲೇ ಹಿನ್ನಡೆಯಾಗಿದೆ. ಕರ್ನಾಟಕಕ್ಕೆ ಮಹಾದಾಯಿಯ ಹನಿ ನೀರನ್ನು ಕೊಡುವುದಿಲ್ಲ ಎಂದು 2009 ರಲ್ಲಿ ಅಂದಿನ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಹೇಳಿದ್ದರು. ಟ್ರಿಬ್ಯುನಲ್ ಮಾಡುವ ಅಗತ್ಯ ಇಲ್ಲದಿದ್ದರೂ ಟ್ರಿಬ್ಯುನಲ್ ಮಾಡಿದರು ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ (Basavaraj Bommai) ಹೇಳಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಹಾದಾಯಿ ವಿಚಾರವಾಗಿ ಕೇಂದ್ರಕ್ಕೆ ಸರ್ವಪಕ್ಷ ನಿಯೋಗ ಕರೆದೊಯ್ಯುವುದಾಗಿ ಕಾನೂನು ಸಚಿವ ಎಚ್.ಕೆ. ಪಾಟೀಲ್ ನೀಡಿರುವ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಮಹಾದಾಯಿ ಯೋಜನೆಗೆ ಹಿನ್ನಡೆ ಮಾಡಿದ್ದರೆ ಅದು ಕಾಂಗ್ರೆಸ್. ಮಹಾದಾಯಿ ಹನಿ ನೀರನ್ನು ರಾಜ್ಯಕ್ಕೆ ಕೊಡುವುದಿಲ್ಲ ಎಂದು ಹಿಂದೆ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಹೇಳಿದ್ದರು. ಮಹದಾಯಿ ನೀರಿನ ಹಂಚಿಕೆಗೆ ಟ್ರಿಬ್ಯುನಲ್ ಮಾಡುವ ಅಗತ್ಯ ಇಲ್ಲದಿದ್ದರೂ ಟ್ರಿಬ್ಯುನಲ್ ಮಾಡಿದರು. ಟ್ರಿಬ್ಯುನಲ್ ಅಧ್ಯಕ್ಷರಿಗೆ ನಾಲ್ಕೈದು ವರ್ಷ ಒಂದು ಆಫೀಸ್ ಕೂಡ ಕೊಡಲಿಲ್ಲ, ವಿಳಂಬ ಮಾಡಿದರು. ಟ್ರಿಬ್ಯುನಲ್‌ನಲ್ಲಿ ತಾವೇ ಬರೆದು ಕೊಟ್ಟು, ನಾವು ನಿರ್ಮಿಸಿದ ಇಂಟಲ್ ಲಿಂಕಿಂಗ್ ಕೆನಾಲ್‌ಗೆ ಗೋಡೆ ಕಟ್ಟಿದರು, ಇದೆಲ್ಲಾ ಇತಿಹಾಸದಲ್ಲಿದೆ ಎಂದು ಹೇಳಿದರು.

ಈಗ ವನ್ಯ ಜೀವಿ ಮಂಡಳಿಯ ಅನುಮತಿ ತೆಗೆದುಕೊಳ್ಳಬೇಕು. ಅದಕ್ಕೆ ಈಗಾಗಲೇ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿಯವರು ಉತ್ತರ ಕೊಟ್ಟಿದಾರೆ. ನಮಗೆ ಅನುಮತಿ ಸಿಗುವ ವಿಶ್ವಾಸ ಇದೆ ಎಂದರು. 11 ವಿಧೇಯಕಗಳನ್ನು ವಾಪಸ್ ಕಳಿಸಿದ್ದಕ್ಕೆ ರಾಜ್ಯಪಾಲರ ವಿರುದ್ಧ ರಾಜ್ಯ ಸರ್ಕಾರದಿಂದ ಕಾನೂನು ಹೋರಾಟ ಮಾಡುವ ಚಿಂತನೆ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಕಾನೂನು ಹೋರಾಟ ಮಾಡಲು ಅವಕಾಶ ಇದೆ ಮಾಡಲಿ, ವಿಧೇಯಕಗಳನ್ನು ಯಾಕೆ ವಾಪಾಸ್ ಕಳಿಸಲಾಯಿತು ಎಂಬುದು ಬಹಿರಂಗ ಆಗುತ್ತದೆ. ಬೆಂಗಳೂರಿನಲ್ಲಿ ಬಿಲ್ಡಿಂಗ್ ಮೇಲೆ ಶೇ.40 ಹೆಚ್ಚಿಗೆ ಬಿಲ್ಡಿಂಗ್ ಕಟ್ಟಲು ಅನುಮತಿ ಕೊಟ್ಟಿದಾರೆ. ಅದಕ್ಕೆ ಅತ್ಯಂತ ಕಡಿಮೆ ದರ ನಿಗದಿ ಮಾಡಿದ್ದಾರೆ. ಹೀಗಾದಾಗ ಒಳಚರಂಡಿ, ರಸ್ತೆಗಳಿಗೆ ಎಲ್ಲಾ ಸಮಸ್ಯೆ ಆಗುತ್ತದೆ. ಅದು ನಗರಾಭಿವೃದ್ಧಿ ಇಲಾಖೆಯ ಕಾನೂನಿನ ವಿರುದ್ಧ ಇದೆ. ನಾವು ಅಧಿಕಾರದಲ್ಲಿದ್ದಾಗ ಅದನ್ನು ತಿರಸ್ಕಾರ ಮಾಡಿದ್ದೆವು, ಸಾರ್ವಜನಿಕರ ಹಿತದೃಷ್ಟಿಯಿಂದ ವಿಧೇಯಕಗಳನ್ನು ವಾಪಸ್ ಕಳುಹಿಸಿದ್ದಾರೆ ಎಂದು ಹೇಳಿದರು.

ಈ ಸುದ್ದಿಯನ್ನೂ ಓದಿ | Vinesh Phogat Contest: ಪತಿಯ ಪೂರ್ವಜರ ಗ್ರಾಮದಿಂದ ವಿನೇಶ್‌ ಫೋಗಟ್‌ ಚುನಾವಣಾ ಪ್ರಚಾರ

ಇನ್ನು ಬೆಂಗಳೂರಿಗೆ ಶರಾವತಿ ನೀರು ತರುವ ಯೋಜನೆ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿ, ಶರಾವತಿ ನದಿ ನೀರಿನ ಬಗ್ಗೆ ನಾನು ಏನೂ ಮಾತನಾಡಲ್ಲ. ಮಾತನಾಡುವುದಿಲ್ಲ ಅಂದರೆ ಅದಕ್ಕೆ ಅರ್ಥ ಇದೆ ಎಂದು ಹೇಳಿದರು.