Friday, 22nd November 2024

HD Kumaraswamy: ಶಿರೂರು ಗುಡ್ಡ ಕುಸಿತದಲ್ಲಿ ಕಣ್ಮರೆಯಾದ ವ್ಯಕ್ತಿಯ ಪುತ್ರಿಗೆ ಸರ್ಕಾರಿ ಉದ್ಯೋಗ, ಮಾತು ಪಾಲಿಸಿದ ಎಚ್‌ಡಿಕೆ

HD Kumaraswamy

ಕಾರವಾರ: ಶಿರೂರು ಗುಡ್ಡ ಕುಸಿತ (Shiruru landslide) ಪ್ರಕರಣದಲ್ಲಿ ಕಣ್ಮರೆಯಾಗಿರುವ ಜಗನ್ನಾಥ ನಾಯ್ಕ ಅವರ ಪುತ್ರಿಗೆ ಕೇಂದ್ರ ಕೈಗಾರಿಕಾ ಸಚಿವ ಎಚ್.ಡಿ. ಕುಮಾರಸ್ವಾಮಿ (HD Kumaraswamy) ಅವರು ಕೈಗಾದ (kaiga) ಕಂಪನಿಯೊಂದರಲ್ಲಿ ಉದ್ಯೋಗ (government job) ಕೊಡಿಸಿದ್ದಾರೆ.

ಜಗನ್ನಾಥ ನಾಯ್ಕ ಅವರ ಪುತ್ರಿ ಕೃತಿಕಾಗೆ ಕೈಗಾ ಅಣು ವಿದ್ಯುತ್ ಯೋಜನೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಬಿಎಚ್ಇಎಲ್ ಕಂಪನಿಯಲ್ಲಿ ಉದ್ಯೋಗ ಒದಗಿಸಲಾಗಿದೆ. ಈ ವಿಷಯವನ್ನು ಕುಮಾರಸ್ವಾಮಿ ಅವರು ಖಚಿತಪಡಿಸಿದ್ದು, ಕಂಪನಿ ಸಹ ನೌಕರಿ ಕೊಟ್ಟ ಬಗ್ಗೆ ದೃಢಪಡಿಸಿದೆ.

ಶಿರೂರು ಗುಡ್ಡಕುಸಿತ ವೀಕ್ಷಣೆಗೆ ಎಚ್‌.ಡಿ.ಕುಮಾರಸ್ವಾಮಿ ಆಗಮಿಸಿದಾಗ ಜಗನ್ನಾಥ ನಾಯ್ಕ ಪುತ್ರಿಗೆ ಉದ್ಯೋಗದ ಭರವಸೆ ನೀಡಿದ್ದರು. ಜಗನ್ನಾಥ ನಾಯ್ಕ ಅವರ ಇನ್ನೊಬ್ಬ ಪುತ್ರಿಗೆ ಕಳೆದವಾರ ಪ್ರವಾಸೋದ್ಯಮ ಇಲಾಖೆಯಲ್ಲಿ ಹೊರಗುತ್ತಿಗೆ ಆಧಾರದಲ್ಲಿ ರಾಜ್ಯ ಸರ್ಕಾರ ಉದ್ಯೋಗ ಕಲ್ಪಿಸಿತ್ತು.

ಬಿಜೆಪಿ ಅವಧಿಯ ಹಗರಣಗಳ ತನಿಖೆಗೆ ಸಮಿತಿ

ಬೆಂಗಳೂರು: ಬಿಜೆಪಿ, ಜೆಡಿಎಸ್ ಸರ್ಕಾರದ ಅವಧಿಯಲ್ಲಿ ನಡೆದಿರುವ ಭ್ರಷ್ಟಾಚಾರ ಆರೋಪಗಳಿಗೆ ಸಂಬಂಧಿಸಿದಂತೆ ರಚಿಸಿರುವ ವಿವಿಧ ತನಿಖಾ ಸಂಸ್ಥೆೆಗಳ ಪ್ರಗತಿ ಪರಿಶೀಲನೆ ಮಾಡಲು ಗೃಹ ಸಚಿವ ಡಾ.ಜಿ. ಪರಮೇಶ್ವರ್ ಅಧ್ಯಕ್ಷತೆಯಲ್ಲಿ ಸಮಿತಿ (Committee To Probe Scams) ರಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ರಾಜ್ಯದಲ್ಲಿ ಕಾಂಗ್ರೆೆಸ್ ಅಧಿಕಾರಕ್ಕೆೆ ಬರುತ್ತಿದ್ದಂತೆ ವಿವಿಧ ಅಕ್ರಮ ಆರೋಪಕ್ಕೆೆ ಸಂಬಂಧಿಸಿದಂತೆ ಹಲವು ಸಮಿತಿಗಳನ್ನು ರಚಿಸಲಾಗಿದೆ. ಇವುಗಳಲ್ಲಿ ಅನೇಕ ಸಮಿತಿಗಳಿಂದ ನಿರೀಕ್ಷಿತ ವೇಗದಲ್ಲಿ ಕಾರ್ಯನಡೆಯುತ್ತಿಲ್ಲ ಎನ್ನುವ ಅಸಮಾಧಾನವನ್ನು ಹಿರಿಯ ಸಚಿವರುಗಳೇ ಹೊರಹಾಕಿದ್ದರು. ಆದ್ದರಿಂದ ಈ ಎಲ್ಲ ಸಮಿತಿಗಳ ತನಿಖೆಯ ಪ್ರಗತಿ, ಸಮನ್ವಯ ಸೇರಿ ಮುಂದಿನ ಕಾರ್ಯವಿಧಾನದ ಬಗ್ಗೆೆ ಚರ್ಚಿಸಲು ಸಮಿತಿಯನ್ನು ರಚಿಸಿ ಸಿಎಂ ಸಿದ್ದರಾಮಯ್ಯ ಆದೇಶ ಹೊರಡಿಸಿದ್ದಾರೆ.

ಗೃಹ ಸಚಿವ ಡಾ.ಜಿ. ಪರಮೇಶ್ವರ್ ಈ ಸಮಿತಿಗೆ ಅಧ್ಯಕ್ಷರಾಗಿದ್ದು, ಎಚ್.ಕೆ. ಪಾಟೀಲ್, ಎಂ.ಬಿ. ಪಾಟೀಲ್, ಪ್ರಿಯಾಂಕ್ ಖರ್ಗೆ, ಕೃಷ್ಣಬೈರೇಗೌಡ ಹಾಗೂ ಸಂತೋಷ್ ಲಾಡ್ ಸದಸ್ಯರಾಗಿದ್ದಾರೆ.

ಈ ಸುದ್ದಿಯನ್ನೂ ಓದಿ | Cyber Security: ಆನ್‌ಲೈನ್‌ ವಂಚನೆ ತಡೆಯಲು ಕೇಂದ್ರ ಸರ್ಕಾರದಿಂದ 5000 ಸೈಬರ್‌ ಕಮಾಂಡೊಗಳ ನೇಮಕ!