Friday, 22nd November 2024

Karnataka Weather: ಇಂದು ಕೂಡ ಕರಾವಳಿ ಜಿಲ್ಲೆಗಳಲ್ಲಿ ಆರ್ಭಟಿಸಲಿದೆ ಮಳೆ

Karnataka Weather

ಬೆಂಗಳೂರು: ಸೆ. 12ರಂದು ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಇನ್ನು ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಹಗುರ ಮಳೆಯಾಗುವ (Karnataka Weather) ಸಾಧ್ಯತೆಯಿದೆ ಎಂದು ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇನ್ನು ಸೆ.13ರಂದು ಕೂಡ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಒಳನಾಡಿನ ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ. ಇದೇ ರೀತಿಯ ಹವಾಮಾನ, ಸೆ. 17ರವರೆಗೆ ಮುಂದುವರಿಯಲಿದೆ.

ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳ ಮುನ್ಸೂಚನೆ:
ಮುಂದಿನ 48 ಗಂಟೆಗಳ ಕಾಲ ಭಾಗಶಃ ಮೋಡ ಕವಿದ ವಾತಾವರಣವಿರುತ್ತದೆ. ಒಣ ಹವಾಮಾನ ಸಾಧ್ಯತೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 30 ° C ಮತ್ತು 20° C ಆಗಿರಬಹುದು.

ಈ ಸುದ್ದಿಯನ್ನೂ ಓದಿ | Healthy Milk: ಹಾಲಿನ ಕಲಬೆರಕೆ ಪತ್ತೆ ಹಚ್ಚುವುದು ಹೇಗೆ? ಇಲ್ಲಿದೆ ವಿಡಿಯೊ ಸಹಿತ ಟಿಪ್ಸ್‌