Friday, 22nd November 2024

Narendra Modi: ಸುಪ್ರೀಂ ಕೋರ್ಟ್‌ ಸಿಜೆಐ ನಿವಾಸದಲ್ಲಿ ಪ್ರಧಾನಿ ಮೋದಿ ಗಣೇಶ ಚತುರ್ಥಿ ಆಚರಣೆ-ಇಲ್ಲಿದೆ ವಿಡಿಯೋ

pm Narendra Modi

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ(Narendra Modi)ಯವರು ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್(Chief Justice DY Chandrachud) ಅವರ ಮನೆಯಲ್ಲಿ ಗಣೇಶ ಚತುರ್ಥಿ(Ganesh Chaturthi celebration) ಆಚರಣೆ ಮಾಡಿದ್ದಾರೆ. ನಿನ್ನೆ ಸಿಜೆಐ ಚಂದ್ರಚೂಡ್‌ ಅವರ ನಿವಾಸಕ್ಕೆ ಆಗಮಿಸಿದ ಪ್ರಧಾನಿ ಮೋದಿ ಗಣಪತಿ ಪೂಜೆ ನಡೆಸಿದ್ದಾರೆ. ಇನ್ನು ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್‌ ಅಗುತ್ತಿದೆ.

ಗಣೇಶ ಚತುರ್ಥಿ ಆಚರಣೆಯಲ್ಲಿ ಪಾಲ್ಗೊಳ್ಳಲು ಪ್ರಧಾನಿ ನರೇಂದ್ರ ಮೋದಿ ಅವರು ನಿನ್ನೆ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಅವರ ಮನೆಗೆ ಆಗಮಿಸಿದರು. ವಿಡಿಯೋದಲ್ಲಿ, ಮುಖ್ಯ ನ್ಯಾಯಮೂರ್ತಿ ಮತ್ತು ಅವರ ಪತ್ನಿ ಪ್ರಧಾನಿ ಮೋದಿಯನ್ನು ತಮ್ಮ ನಿವಾಸಕ್ಕೆ ಸ್ವಾಗತಿಸುತ್ತಿರುವುದು ಮತ್ತು ಗಣಪತಿ ಆರತಿ ಬೆಳಗಿ ಪೂಜೆ ಸಲ್ಲಿಸುತ್ತಿರುವುದನ್ನು ಕಾಣಬಹುದಾಗಿದೆ.

ಮಹಾರಾಷ್ಟ್ರದ ಸಾಂಪ್ರದಾಯಿಕ ಟೋಪಿಯನ್ನು ಧರಿಸಿದ ಪ್ರಧಾನಿ ಮೋದಿ, ಡಿವೈ ಚಂದ್ರಚೂಡ್ ಮತ್ತು ಅವರ ಪತ್ನಿಯೊಂದಿಗೆ ಗಣೇಶನ ಮೂರ್ತಿಯ ಆರತಿ ಮತ್ತು ಪ್ರಾರ್ಥನೆ ಸಲ್ಲಿಸಿದರು.
ಈ ಬಗ್ಗೆ ಟ್ವಿಟರ್‌ನಲ್ಲಿ ಸಾಮಾಜಿಕ ಮಾಧ್ಯಮ ಪ್ಲಾಟ್‌ಫಾರ್ಮ್ ಎಕ್ಸ್‌ನಲ್ಲಿ ಪೋಸ್ಟ್‌ನಲ್ಲಿ ಸಂಭ್ರಮಾಚರಣೆಯ ನೋಟವನ್ನು ಹಂಚಿಕೊಂಡ ಪ್ರಧಾನಿ ಮೋದಿ, “ಸಿಜೆಐ, ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಜಿ ಅವರ ನಿವಾಸದಲ್ಲಿ ಗಣೇಶ ಪೂಜೆಯಲ್ಲಿ ಪಾಲ್ಗೊಂಡಿದೇನೆ. ಭಗವಾನ್ ಶ್ರೀ ಗಣೇಶ ನಮಗೆಲ್ಲರಿಗೂ ಸಂತೋಷ, ಅದ್ಭುತ ಆರೋಗ್ಯ ಮತ್ತು ಸಮೃದ್ಧಿಯನ್ನು ನೀಡಲಿ ಎಂದು ಹಾರೈಸಿದ್ದಾರೆ.

ಶನಿವಾರದಂದು ಭಾರತದಾದ್ಯಂತ ಭವ್ಯವಾದ ಗಣೇಶ ಚತುರ್ಥಿ ಆಚರಣೆಗಳು ಅದ್ಧೂರಿಯಾಗಿ ಪ್ರಾರಂಭವಾದವು. ಹತ್ತು ದಿನಗಳ ಕಾಲ ನಡೆಯುವ ಈ ಉತ್ಸವವು ಸೆಪ್ಟೆಂಬರ್ 17 ರವರೆಗೆ ನಡೆಯಲಿದ್ದು, ಭಕ್ತರು ಗಣೇಶನ ಮೂರ್ತಿಗಳನ್ನು ವಿಸರ್ಜನೆ ಮಾಡುವ ಮೂಲಕ ಬೀಳ್ಕೊಡುತ್ತಾರೆ.

ಗಣೇಶೋತ್ಸವ ಅಥವಾ ವಿನಾಯಕ ಚತುರ್ಥಿ ಎಂದೂ ಕರೆಯಲ್ಪಡುವ ಗಣೇಶ ಚತುರ್ಥಿಯನ್ನು ಭಾರತದಾದ್ಯಂತ ಆಚರಿಸಲಾಗುತ್ತದೆ, ಇದು ಮಹಾರಾಷ್ಟ್ರದ ದೊಡ್ಡ ಹಬ್ಬಗಳಲ್ಲಿ ಒಂದಾಗಿದೆ. ಇಂದು, ಹಬ್ಬದ ಆರನೇ ದಿನ, ಮುಂಬೈನಲ್ಲಿ 2,500 ಕ್ಕೂ ಹೆಚ್ಚು ಗಣೇಶ ಮೂರ್ತಿಗಳನ್ನು ವಿಸರ್ಜನೆ ಮಾಡಲಾಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ಸುದ್ದಿಯನ್ನೂ ಓದಿ: Mandya Violence: ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಉದ್ದೇಶ ಪೂರ್ವಕವಾಗಿಯೇ ಅನ್ಯ ಕೋಮಿನ ಪುಂಡರಿಂದ ದಾಂಧಲೆ; ಎಚ್‌ಡಿಕೆ ವಾಗ್ದಾಳಿ