Thursday, 19th September 2024

Mandya Violence: ಕರ್ನಾಟಕವನ್ನು ಪಾಕಿಸ್ತಾನ ಮಾಡುತ್ತಿದೆ ಕಾಂಗ್ರೆಸ್ ಸರ್ಕಾರ; ಜೋಶಿ ಆಕ್ರೋಶ

Pralhad Joshi

ನವದೆಹಲಿ: ರಾಜ್ಯ ಕಾಂಗ್ರೆಸ್ ಸರ್ಕಾರ (Congress Government) ಕರ್ನಾಟಕವನ್ನು ಅಕ್ಷರಶಃ ಪಾಕಿಸ್ತಾನ ಮಾಡಲು ಹೊರಟಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ (Pralhad Joshi) ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಂಡ್ಯದ ನಾಗಮಂಗಲ ಘಟನೆ (Mandya Violence) ಕುರಿತು ಪ್ರತಿಕ್ರಿಯಿಸಿರುವ ಸಚಿವರು, ಗಣಪತಿ ವಿಸರ್ಜನೆ ವೇಳೆ ನಡೆದ ಈ ದುಷ್ಕೃತ್ಯವನ್ನು ತೀವ್ರವಾಗಿ ಖಂಡಿಸಿದ್ದಾರೆ. ಸರ್ವ ಜನಾಂಗದ ಶಾಂತಿಯ ತೋಟ ಎಂಬಂತಿರುವ ಕರ್ನಾಟಕವನ್ನು ಕಾಂಗ್ರೆಸ್ ಸರ್ಕಾರ ರಾಜಕೀಯ ತುಷ್ಟೀಕರಣಕ್ಕಾಗಿ ಮತ್ತೊಂದು ಪಾಕಿಸ್ತಾನ ಮಾಡಲು ಹೊರಟಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಈ ಸುದ್ದಿಯನ್ನೂ ಓದಿ | Virat Kohli: 147 ವರ್ಷಗಳ ಕ್ರಿಕೆಟ್ ಇತಿಹಾಸದಲ್ಲಿ ವಿಶ್ವ ದಾಖಲೆ ಬರೆಯಲು ಸಜ್ಜಾದ ಕಿಂಗ್‌ ಕೊಹ್ಲಿ

ಕಾಂಗ್ರೆಸ್‌ನ ಓಲೈಕೆ ಆಡಳಿತದಿಂದಾಗಿ ನಮ್ಮ ಕರ್ನಾಟಕದ ಪರಿಸ್ಥಿತಿ ಎಲ್ಲಿಗೆ ಬಂದು ನಿಂತಿದೆ? ಎಂದು ಪ್ರಶ್ನಿಸಿರುವ ಸಚಿವರು, ನಾಗಮಂಗಲ ಗಲಭೆ ಸೇರಿದಂತೆ ಇತ್ತೀಚಿನ ಘಟನೆಗಳ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ.

ಮಸೀದಿ ಮುಂದೆ ಗಣೇಶ ಮೆರವಣಿಗೆ ಹೋಗಬಾರದೆ?

ಮಸೀದಿ ಮುಂದೆ ಗಣಪತಿ ಮೆರವಣಿಗೆ ಹೋಗಬಾರದು ಎಂಬ ಕಾನೂನು, ನಿಯಮ ಎಲ್ಲಿದೆ? ಗಣೇಶ ಮೂರ್ತಿ ಇದ್ದರೂ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿ ಬೆಂಕಿ ಹಚ್ಚಿದ್ದಾರೆ. ಇದೆಂಥ ನಾಗರೀಕತೆ? ಎಂದು ಸಚಿವ ಜೋಶಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮತಾಂಧ ಶಕ್ತಿ ಹತ್ತಿಕ್ಕಲು ಸರ್ಕಾರಕ್ಕೆ ಆಗ್ರಹ

ಹಿಂದೂ ಹಬ್ಬಗಳು ಎಂದರೆ ಕಾಂಗ್ರೆಸ್ ಪಕ್ಷಕ್ಕೆ ಯಾಕಿಷ್ಟು ತಾತ್ಸಾರ? ಕಾಂಗ್ರೆಸ್ ಸರ್ಕಾರ ವೋಟ್ ಬ್ಯಾಂಕ್ ನೀತಿ ಅನುಸರಿಸದೆ ಮತಾಂಧ ಶಕ್ತಿಯನ್ನು ಹತ್ತಿಕ್ಕಬೇಕು ಎಂದು ಅವರು ಆಗ್ರಹಿಸಿದ್ದಾರೆ.

ಈ ಸುದ್ದಿಯನ್ನೂ ಓದಿ | Team India: ಇಂದು ಚೆನ್ನೈಗೆ ಭಾರತ ತಂಡ ಆಗಮನ; ನಾಳೆಯಿಂದ ಅಭ್ಯಾಸ ಆರಂಭ

ಕಾಂಗ್ರೆಸ್‌ನ ಹಿಂದೂ ವಿರೋಧಿ ನೀತಿಯಿಂದ ಈ ರೀತಿ ಗಲಭೆ, ಘಟನೆಗಳು ಸಂಭವಿಸುತ್ತಿವೆ ಎಂದು ಆರೋಪಿಸಿರುವ ಸಚಿವ ಪ್ರಲ್ಹಾದ್‌ ಜೋಶಿ, ನಾಗಮಂಗಲದ ಈ ಘಟನೆಗೆ ರಾಜ್ಯ ಕಾಂಗ್ರೆಸ್ ಸರ್ಕಾರವೇ ಹೊಣೆ ಎಂದು ವಾಗ್ದಾಳಿ ನಡೆಸಿದ್ದಾರೆ.