Friday, 20th September 2024

Sitaram Yechury Death: ಸಿಪಿಎಂ ನಾಯಕ, ಮಾಜಿ ರಾಜ್ಯಸಭಾ ಸದಸ್ಯ ಸೀತಾರಾಮ ಯಚೂರಿ ನಿಧನ

Sitaram Yechury

ನವದೆಹಲಿ: ದೀರ್ಘಕಾಲದ ಅನಾರೋಗ್ಯದಿಂದ ದೆಹಲಿಯ ಏಮ್ಸ್ ಗೆ ದಾಖಲಾಗಿದ್ದ ಸಿಪಿಎಂ ಪ್ರಧಾನ ಕಾರ್ಯದರ್ಶಿ ಸೀತಾರಾಮ್ ಯೆಚೂರಿ (Sitaram Yechury) ಗುರುವಾರ ನಿಧನರಾದರು ಎಂದು ಪಕ್ಷ ಮತ್ತು ಆಸ್ಪತ್ರೆ ಮೂಲಗಳನ್ನು ಉಲ್ಲೇಖಿಸಿವೆ. ನ್ಯುಮೋನಿಯಾ ತರಹದ ಎದೆ ಸೋಂಕಿನ ಚಿಕಿತ್ಸೆಗಾಗಿ ಯೆಚೂರಿ ಅವರನ್ನು ಆಗಸ್ಟ್ 19 ರಂದು ಏಮ್ಸ್ ಗೆ ದಾಖಲಿಸಲಾಗಿತ್ತು. ಅಲ್ಲಿನ ತೀವ್ರ ನಿಗಾ ಘಟಕದಲ್ಲಿ (ಐಸಿಯು) ಚಿಕಿತ್ಸೆ ಪಡೆಯುತ್ತಿದ್ದರು.

ಆಗಸ್ಟ್ 12, 1952 ರಂದು ಚೆನ್ನೈನಲ್ಲಿ ಜನಿಸಿದ ಯೆಚೂರಿ ದೆಹಲಿ ವಿಶ್ವವಿದ್ಯಾಲಯದಲ್ಲಿ ಪದವಿ ಪಡೆದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದಿಂದ ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿದ್ದರು. ಅವರು ಪತ್ನಿ ಸೀಮಾ ಚಿಸ್ತಿ ಯೆಚೂರಿ ಮತ್ತು ಇಬ್ಬರು ಮಕ್ಕಳನ್ನು ಅಗಲಿದ್ದಾರೆ.

ಯೆಚೂರಿ ವೆಂಟಿಲೇಟರ್‌ ಬೆಂಬಲದಲ್ಲಿದ್ದಾರೆ ಮತ್ತು ಅವರ ಸ್ಥಿತಿ ಗಂಭೀರವಾಗಿದೆ ಎಂದು ಸಿಪಿಎಂ ಈ ಹಿಂದೆ ಸಾಮಾಜಿಕ ಮಾಧ್ಯಮ ಪೋಸ್ಟ್‌ನಲ್ಲಿ ತಿಳಿಸಿತ್ತು. ಅವರು ಇತ್ತೀಚೆಗೆ ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಯೆಚೂರಿ ಅವರ ನಿಧನಕ್ಕೆ ಸಂತಾಪ ಸೂಚಿಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಸಿಪಿಎಂ ನಾಯಕರೊಂದಿಗೆ ನಡೆಸುತ್ತಿದ್ದ ಸುದೀರ್ಘ ಚರ್ಚೆಗಳು ಇನ್ನು ಮುಂದೆ ಇರುವುದಿಲ್ಲ ಎಂದ ಹೇಳಿದ್ದಾರೆ.

ಸೀತಾರಾಮ್ ಯೆಚೂರಿ ಅವರು ನನ್ನ ಸ್ನೇಹಿತರಾಗಿದ್ದರು. ನಮ್ಮ ದೇಶದ ಬಗ್ಗೆ ಆಳ ತಿಳುವಳಿಕೆ ಹೊಂದಿರುವ ಭಾರತದ ಕಲ್ಪನೆಯ ರಕ್ಷಕ. ನಾವು ನಡೆಸುತ್ತಿದ್ದ ದೀರ್ಘ ಚರ್ಚೆಗಳನ್ನು ನಾನು ಮಿಸ್ ಮಾಡಿಕೊಳ್ಳುತ್ತೇನೆ. ಈ ದುಃಖದ ಸಮಯದಲ್ಲಿ ಅವರ ಕುಟುಂಬ, ಸ್ನೇಹಿತರು ಮತ್ತು ಅನುಯಾಯಿಗಳಿಗೆ ನನ್ನ ಪ್ರಾಮಾಣಿಕ ಸಂತಾಪಗಳು ಎಂದು ರಾಹುಲ್‌ ಗಾಂಧಿ ಹೇಳಿದ್ದಾರೆ.

ವಿದ್ಯಾರ್ಥಿ ನಾಯಕ

ಯೆಚೂರಿ ಸುಮಾರು 50 ವರ್ಷಗಳ ಹಿಂದೆ ವಿದ್ಯಾರ್ಥಿ ನಾಯಕರಾಗಿ ಸಿಪಿಎಂಗೆ ಸೇರಿದ್ದರು. ಅವರು 2005 ರಿಂದ 2015 ರವರೆಗೆ ಸತತ ಮೂರು ಅವಧಿಗೆ ಸಿಪಿಎಂ ಪಕ್ಷದ ಪ್ರಧಾನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದಾರೆ. ಅವರು 2018ರಲ್ಲಿ ಮತ್ತೆ ಈ ಹುದ್ದೆಗೆ ಆಯ್ಕೆಯಾಗಿದ್ದರು. ಯೆಚೂರಿ 2005 ರಿಂದ 2017 ರವರೆಗೆ ರಾಜ್ಯಸಭಾ ಸದಸ್ಯರಾಗಿಯೂ ಸೇವೆ ಸಲ್ಲಿಸಿದ್ದಾರೆ.

ಇದನ್ನೂ ಓದಿ: Arms found in JK: ಜಮ್ಮು-ಕಾಶ್ಮೀರದಲ್ಲಿ ಯುದ್ಧಕ್ಕೆ ಸಾಕಾಗುವಷ್ಟು ಅಕ್ರಮ ಶಸ್ತ್ರಾಸ್ತ್ರ ಪತ್ತೆ- ಮೋದಿ ಭೇಟಿ ವೇಳೆ ವಿಧ್ವಂಸಕ ಕೃತ್ಯಕ್ಕೆ ಭಾರೀ ಸಂಚು?

2021 ರಲ್ಲಿ, ಯೆಚೂರಿ ಅವರ ಮಗ ಆಶಿಶ್ ಯೆಚೂರಿ ತಮ್ಮ 34 ನೇ ವಯಸ್ಸಿನಲ್ಲಿ ಕೋವಿಡ್ -19ರ ಎರಡನೇ ಅಲೆಯ ಸಮಯದಲ್ಲಿ ನಿಧನ ಹೊಂದಿದ್ದರು. 1996 ರಲ್ಲಿ ಆಗಿನ ಯುನೈಟೆಡ್ ಫ್ರಂಟ್ ಸರ್ಕಾರಕ್ಕೆ ಸಾಮಾನ್ಯ ಕನಿಷ್ಠ ಕಾರ್ಯಕ್ರಮವನ್ನು ರೂಪಿಸಲು ಅವರು ಕಾಂಗ್ರೆಸ್ ಮುಖಂಡ ಪಿ.ಚಿದಂಬರಂ ಅವರೊಂದಿಗೆ ಕೆಲಸ ಮಾಡಿದ್ದರು.

2004 ರಲ್ಲಿ ಯುಪಿಎ ಸರ್ಕಾರದ ಸಮ್ಮಿಶ್ರ-ನಿರ್ಮಾಣ ಪ್ರಯತ್ನಗಳಲ್ಲಿ ಅವರು ನಿರ್ಣಾಯಕ ಪಾತ್ರ ವಹಿಸಿದ್ದರು. 1975 ರಲ್ಲಿ ಇಂದಿರಾ ಗಾಂಧಿ ಹೇರಿದ ತುರ್ತು ಪರಿಸ್ಥಿತಿಯ ಸಮಯದಲ್ಲಿ ಅವರು ಬಂಧನಕ್ಕೆ ಒಳಗಾಗಿದ್ದರು.