Monday, 25th November 2024

Job Guide: ಸೈಂಟಿಸ್ಟ್‌ ಹುದ್ದೆಗಳ ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಿಸಿದ ಸೆಂಟ್ರಲ್‌ ಸಿಲ್ಕ್‌ ಬೋರ್ಡ್‌: ಇಲ್ಲಿದೆ ಹೊಸ ಟೈಮ್‌ ಟೇಬಲ್‌

Job Guide

ಬೆಂಗಳೂರು: ಬೆಂಗಳೂರಿನಲ್ಲೇ ಉದ್ಯೋಗ ನಿರ್ವಹಿಸಬೇಕು ಎನ್ನುವವರಿಗೆ ಇಲ್ಲಿದೆ ಉತ್ತಮ ಅವಕಾಶ. 122 ಸೈಂಟಿಸ್ಟ್‌ ಬಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದ ಸಿಲ್ಕ್‌ ಬೋರ್ಡ್‌ (Central Silk Board) ಕೊನೆಯ ದಿನಾಂಕವನ್ನು ವಿಸ್ತರಿಸಿದೆ (CSB Recruitment 2024). ಈ ಹಿಂದೆ ಅರ್ಜಿ ಸಲ್ಲಿಸಲು ಸೆಪ್ಟೆಂಬರ್‌ 5 ಕೊನೆಯ ದಿನಾಂಕ ಎಂದು ಹೇಳಲಾಗಿತ್ತು. ಇದೀಗ ಈ ದಿನವನ್ನು ವಿಸ್ತರಿಸಿದ್ದು, ಸೆಪ್ಟೆಂಬರ್‌ 19ರವರೆಗೆ ಅವಕಾಶ ನೀಡಲಾಗಿದೆ. ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕು (Job Guide).

ಹುದ್ದೆಗಳ ವಿವರ ಮತ್ತು ವಿದ್ಯಾರ್ಹತೆ

ಸಿಎಸ್‌ಬಿಯ ಈ ವಿಜ್ಞಾನಿ ಹುದ್ದೆಗೆ ಅರ್ಜಿ ಸಲ್ಲಿಸುವವರು ಅಂಗೀಕೃತ ಶಿಕ್ಷಣ ಮಂಡಳಿ ಅಥವಾ ವಿಶ್ವ ವಿದ್ಯಾನಿಲಯದಿಂದ ವಿಜ್ಞಾನ / ಕೃಷಿ ವಿಜ್ಞಾನ (Science/Agricultural Science) ವಿಷಯದಲ್ಲಿ ಸ್ನಾತಕೋತ್ತರ ಪದವಿ (Master’s Degree) ಪಡೆದಿರಬೇಕು. ಸಾಮಾನ್ಯ ವರ್ಗಕ್ಕೆ-50, ಎಸ್‌ಸಿ-20, ಎಸ್‌ಟಿ-9, ಒಬಿಸಿ-31, ಇಡಬ್ಲ್ಯುಎಸ್‌-12 ಮತ್ತು ಪಿಡಬ್ಲ್ಯುಬಿಡಿ ವರ್ಗಕ್ಕೆ 8 ಹುದ್ದೆಗಳಿವೆ.

ವಯೋಮಿತಿ

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು 35 ವರ್ಷ ಮೀರಿರಬಾರದು. ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಇದೆ. ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಎಸ್‌ಸಿ / ಎಸ್‌ಟಿ / ಪಿಡಬ್ಲ್ಯುಬಿಡಿ ಅಭ್ಯರ್ಥಿಗಳಿಗೆ 5 ವರ್ಷ, ಪಿಡಬ್ಲ್ಯುಬಿಡಿ ಅಭ್ಯರ್ಥಿಗಳಿಗೆ 8-10 ವರ್ಷಗಳ ರಿಯಾಯಿತಿ ಲಭ್ಯ.

ಅರ್ಜಿ ಶುಲ್ಕ ಮತ್ತು ಆಯ್ಕೆ ವಿಧಾನ

ಅರ್ಜಿ ಶುಲ್ಕವಾಗಿ ಸಾಮಾನ್ಯ ವಿಭಾಗ / ಒಬಿಸಿ / ಇಡಬ್ಲ್ಯುಎಸ್‌ / ಮಾಜಿ ಯೋಧರು 1,000 ರೂ. ಪಾವತಿಸಬೇಕು. ಎಸ್‌ಸಿ / ಎಸ್‌ಟಿ / ಪಿಡಬ್ಲ್ಯುಬಿಡಿ / ಮಹಿಳಾ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕವಿಲ್ಲ. ಪಾವತಿ ವಿಧಾನ: ಪೋಸ್ಟ್‌ ಆಫೀಸ್‌.

ಆಯ್ಕೆ ವಿಧಾನ ಮತ್ತು ಮಾಸಿಕ ವೇತನ

ಅಭ್ಯರ್ಥಿಗಳು ಜೆಆರ್‌ಎಫ್‌ ಹಾಗೂ ಎಸ್‌ಆರ್‌ಎಫ್‌ ಅಥವಾ ಪಿಎಚ್‌ಡಿ ಪ್ರವೇಶಕ್ಕಾಗಿ ಇಂಡಿಯನ್ ಕೌನ್ಸಿಲ್ ಆಫ್‌ ಅಗ್ರಿಕಲ್ಚರ್ ರಿಸರ್ಚ್‌ (ICAR) ನಡೆಸುವ ಆಲ್‌ ಇಂಡಿಯಾ ಕಾಂಪಿಟೇಟಿವ್ ಎಕ್ಸಾಮ್‌ (AICE) ಅನ್ನು ಬರೆದಿರಬೇಕು. ಈ ಪರೀಕ್ಷೆಯಲ್ಲಿ ಗಳಿಸಿದ ಅಂಕಗಳ ಆಧಾರದಲ್ಲಿ ಶಾರ್ಟ್ ಲಿಸ್ಟ್‌ ಮಾಡಿ, ನೇಮಕ ಮಾಡಿಕೊಳ್ಳಲಾಗುತ್ತದೆ. ಆಯ್ಕೆಯಾದವರಿಗೆ 56,100 ರೂ. – 1,77,500 ರೂ. ಮಾಸಿಕ ವೇತನ ದೊರೆಯಲಿದೆ.

ಅರ್ಜಿ ಸಲ್ಲಿಸುವ ವಿಧಾನ

  • ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್‌ ಮಾಡಿ (https://karnemaka.kar.nic.in/CSB_rec_24/)
  • SUBMIT APPLICATION ಆಯ್ಕೆಯನ್ನು ಕ್ಲಿಕ್‌ ಮಾಡಿ.
  • ಇಲ್ಲಿ ಕಂಡುಬರುವ ಅಪ್ಲಿಕೇಷನ್‌ ಫಾರಂ ಅನ್ನು ಎಚ್ಚರಿಕೆಯಿಂದ ಭರ್ತಿ ಮಾಡಿ.
  • ಅಗತ್ಯ ದಾಖಲೆಗಳನ್ನು ಅಪ್‌ಲೋಡ್‌ ಮಾಡಿ.
  • ಭರ್ತಿ ಮಾಡಿದ ವಿವರಗಳನ್ನು ಮತ್ತೊಮ್ಮೆ ಪರಿಶೀಲಿಸಿ ಎಲ್ಲವೂ ಸರಿ ಇದ್ದರೆ Submit ಬಟನ್‌ ಕ್ಲಿಕ್‌ ಮಾಡಿ.
  • ಭವಿಷ್ಯದ ಅಗತ್ಯಗಳಿಗೆ ಅಪ್ಲಿಕೇಷನ್‌ ಫಾರಂನ ಪ್ರಿಂಟ್‌ಔಟ್‌ ತೆಗೆದಿಡಿ.

ಹೆಚ್ಚಿನ ವಿವರಗಳಿಗೆ ದೂರವಾಣಿ ಸಂಖ್ಯೆ: 011-4075 9000, 011-6922770ಕ್ಕೆ ಕರೆ ಮಾಡಿ ಅಥವಾ ವೆಬ್‌ಸೈಟ್‌ ವಿಳಾಸ csb.gov.inಗೆ ಭೇಟಿ ನೀಡಿ.

ಈ ಸುದ್ದಿಯನ್ನೂ ಓದಿ: Job Guide: BISನಲ್ಲಿದೆ ಉದ್ಯೋಗಾವಕಾಶ; 10ನೇ ತರಗತಿ ಪಾಸಾದವರು ಅರ್ಜಿ ಸಲ್ಲಿಸಿ