Thursday, 21st November 2024

Bengaluru News: ಬೆಂಗಳೂರಿನಲ್ಲಿ ಶ್ರೀ ಬಂಡೆ ವಿನಾಯಕ ದೇವಸ್ಥಾನ ಲೋಕಾರ್ಪಣೆ; ದೇವೇಗೌಡ, ಎಚ್‌ಡಿಕೆ ಭಾಗಿ

Bengaluru News

ಬೆಂಗಳೂರು: ನಗರದ ಹೆಣ್ಣೂರು ಬಂಡೆ ಬಳಿ ನೂತನವಾಗಿ ನಿರ್ಮಾಣವಾಗಿರುವ ಶ್ರೀ ಬಂಡೆ ವಿನಾಯಕ ದೇವಸ್ಥಾನದ (Sri Bande Vinayaka Temple) ಪ್ರಾಣ ಪ್ರತಿಷ್ಠಾಪನಾ ಕಾರ್ಯಕ್ರಮ ಶುಕ್ರವಾರ ನೆರವೇರಿತು. ಆದಿಚುಂಚನಗಿರಿ ಮಠದ ಶ್ರೀ ನಿರ್ಮಲಾನಂದ ನಾಥ ಮಹಾಸ್ವಾಮೀಜಿ ಹಾಗೂ ಶ್ರೀ ನಂಜಾವಧೂತ ಸ್ವಾಮೀಜಿ ಅವರ ಸಾನ್ನಿಧ್ಯದಲ್ಲಿ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ (Former PM HD Deve Gowda) ಅವರು ನೂತನ ದೇವಾಲಯವನ್ನು ಲೋಕಾರ್ಪಣೆ ಮಾಡಿದರು. ಕೇಂದ್ರದ ಭಾರೀ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಎಚ್.ಡಿ. ಕುಮಾರಸ್ವಾಮಿ (HD Kumaraswamy) ಕಾರ್ಯಕ್ರಮದಲ್ಲಿ (Bengaluru News) ಭಾಗಿಯಾಗಿದ್ದರು.

ಜೆಡಿಎಸ್ ಬೆಂಗಳೂರು ನಗರ ಘಟಕದ ಅಧ್ಯಕ್ಷ ಎಚ್.ಎಂ. ರಮೇಶ್ ಗೌಡ ಅವರ ಅಧ್ಯಕ್ಷತೆಯ ಬಂಡೆ ವಿನಾಯಕ ದೇವಸ್ಥಾನ ಟ್ರಸ್ಟ್ ವತಿಯಿಂದ ಈ ಭವ್ಯ ದೇಗುಲವನ್ನು ನಿರ್ಮಾಣ ಮಾಡಲಾಗಿದೆ.

ಈ ಸಂದರ್ಭದಲ್ಲಿ ಮಾಜಿ ಪ್ರಧಾನಿಗಳು ಹಾಗೂ ಕೇಂದ್ರ ಸಚಿವರು ವಿನಾಯಕ ದೇವರ ದರ್ಶನ ಮಾಡಿಕೊಂಡು, ಎಲ್ಲರಿಗೂ ಒಳ್ಳೆಯದಾಗಲಿ ಎಂದು ಶುಭ ಹಾರೈಸಿದರು.

ಈ ಸುದ್ದಿಯನ್ನೂ ಓದಿ | Bengaluru Power Cut: ಗಮನಿಸಿ, ಬೆಂಗಳೂರಿನ ಈ ಪ್ರದೇಶಗಳಲ್ಲಿ ನಾಳೆ ಕರೆಂಟ್‌ ಇರಲ್ಲ!

ಬಳಿಕ ವೇದಿಕೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ, ರಮೇಶ್ ಗೌಡ ಅವರ ನೇತೃತ್ವದಲ್ಲಿ ವಿನಾಯಕ ದೇವರಿಗೆ ಭವ್ಯ ದೇಗುಲ ನಿರ್ಮಾಣ ಮಾಡಲಾಗಿದೆ. ಅವರಿಗೆ ನನ್ನ ಅಭಿನಂದನೆಗಳು. ಇಲ್ಲಿ ನಿರಂತರವಾಗಿ ದೈವ ಕಾರ್ಯಗಳು ನಡೆಯಲಿ. ಎಲ್ಲರಿಗೂ ಆ ದೇವರು ಒಳ್ಳೆಯದು ಮಾಡಲಿ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಕೋಲಾರದ ಸಂಸದ ಮಲ್ಲೇಶ್ ಬಾಬು, ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಸಂಸದ ಡಾ.ಸಿ.ಎನ್.ಮಂಜುನಾಥ್, ಮಾಜಿ ಶಾಸಕ ಚೌಡರೆಡ್ಡಿ ತೂಪಲ್ಲಿ, ಹಿರಿಯ ಮುಖಂಡ ಪದ್ಮನಾಭ ರೆಡ್ಡಿ ಸೇರಿದಂತೆ ಅನೇಕ ಗಣ್ಯರು ಪಾಲ್ಗೊಂಡಿದ್ದರು.

ಈ ಸುದ್ದಿಯನ್ನೂ ಓದಿ | KPSC Group B Exam: ಸೆ.14, 15ರ ಕೆಪಿಎಸ್‌ಸಿ ಗ್ರೂಪ್‌ ಬಿ ಹುದ್ದೆಗಳ ಪರೀಕ್ಷೆ ಮುಂದೂಡಿಕೆ!

ಶ್ರೀ ಬಂಡೆ ವಿನಾಯಕ ದೇವಸ್ಥಾನದ ಪ್ರಾಣ ಪ್ರತಿಷ್ಠಾಪನಾ ಕಾರ್ಯಕ್ರಮದಲ್ಲಿ ಸಾವಿರಾರು ಭಕ್ತಾದಿಗಳು ಪಾಲ್ಗೊಂಡಿದ್ದರು. ಎಲ್ಲರಿರೂ ಅನ್ನ ಸಂತರ್ಪಣೆ, ಪ್ರಸಾದ ವಿನಿಯೋಗ ನಡೆಯಿತು.