Friday, 22nd November 2024

KN Rajanna: ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ಸಚಿವ ಕೆ.ಎನ್‌.ರಾಜಣ್ಣ

KN Rajanna

ತುಮಕೂರು: ಮಧುಗಿರಿಯ ಕಾಂಗ್ರೆಸ್ ಶಾಸಕ, ಸಹಕಾರ ಸಚಿವ ಕೆ.ಎನ್ ರಾಜಣ್ಣ ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಣೆ ಮಾಡಿದ್ದಾರೆ. ಆದರೆ, ಕ್ಷೇತ್ರದಲ್ಲಿ ಬೇಕಾದವರನ್ನು ಗೆಲ್ಲಿಸುವುದು, ಬೇಡವಾದವರನ್ನು ಸೋಲಿಸುವ ಕೆಲಸ ಮಾಡುತ್ತೇನೆ ಎಂದು ಸಚಿವ ಕೆ.ಎನ್ ರಾಜಣ್ಣ (KN Rajanna) ಹೇಳಿದ್ದಾರೆ.

ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಂದಿನ ದಿನಗಳಲ್ಲಿ ವಿಧಾನಸಭೆ ಸೇರಿ ಯಾವುದೇ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ. ಚುನಾವಣಾ ರಾಜಕೀಯದಿಂದ ಹಿಂದೆ ಸರಿಯುತ್ತೇನೆ. ಕ್ಷೇತ್ರದ ಅಭಿವೃದ್ಧಿ ಕಾಮಗಾರಿಗಳನ್ನು ಮಾಡಿಸುತ್ತೇನೆ, ಮುಂದಿನ ಚುನಾವಣಾ ದೃಷ್ಟಿಯಿಂದ ಈ ಕೆಲಸ ಮಾಡುತ್ತಿಲ್ಲ ಎಂದು ತಿಳಿಸಿದ್ದಾರೆ.

ಇನ್ನು ನಾನು ಪ್ರತಿನಿಧಿಸುವ ಮಧುಗಿರಿಯನ್ನು ಜಿಲ್ಲಾ ಕೇಂದ್ರ ಮಾಡುವ ಪ್ರಯತ್ನ ಮುಂದುವರಿಸುತ್ತೇನೆ. ನನ್ನ ಅಧಿಕಾರ ಮುಗಿಯುವುದರ ಒಳಗೆ ಜಿಲ್ಲಾ ಕೇಂದ್ರ ಮಾಡಿಸುತ್ತೇನೆ ಹೇಳಿದ್ದಾರೆ.

2023ರ ವಿಧಾನಸಭಾ ಚುನಾವಣೆಯಲ್ಲಿ ಮಧುಗಿರಿ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕೆ.ಎನ್. ರಾಜಣ್ಣ 91,166 ಮತಗಳನ್ನು ಪಡೆದು, ಜೆಡಿಎಸ್‌ ಅಭ್ಯರ್ಥಿ ಎಂ.ವಿ.ವೀರಭದ್ರಯ್ಯ (55,643 ಮತ) ವಿರುದ್ಧ ಗೆಲುವು ಪಡೆದಿದ್ದರು. ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದ ಆರಂಭದಲ್ಲಿ ತಮ್ಮ ಹೇಳಿಕೆಗಳಿಂದಲೇ ರಾಜಣ್ಣ ಸುದ್ದಿಯಲ್ಲಿರುತ್ತಿದ್ದರು. ರಾಜ್ಯದಲ್ಲಿ ಮೂವರು ಡಿಸಿಎಂಗಳನ್ನು ಮಾಡಬೇಕು ಎಂದು ನಿರಂತರವಾಗಿ ಒತ್ತಾಯ ಮಾಡುತ್ತಲೇ ಬರುತ್ತಿದ್ದರು. ಆದರೆ, ಇದೀಗ ಚುನಾವಣಾ ರಾಜಕೀಯದಿಂದ ನಿವೃತ್ತಿ ಪಡೆಯುವ ನಿರ್ಧಾರ ಮಾಡಿದ್ದಾರೆ.

ಈ ಸುದ್ದಿಯನ್ನೂ ಓದಿ | CM Siddaramaiah: ಮೋದಿ ಅವಧಿಯಲ್ಲಿ ದೇಶದ ಸಾಲ 182 ಲಕ್ಷ ಕೋಟಿಗೆ ತಲುಪಿದೆ: ಸಿಎಂ ಸಿದ್ದರಾಮಯ್ಯ ಕಿಡಿ

ಬಿಜೆಪಿ ಶಾಸಕ ಮುನಿರತ್ನ ಮೇಲೆ ಕೊಲೆ ಬೆದರಿಕೆ, ಜಾತಿನಿಂದನೆ ಎಫ್‌ಐಆರ್

Munirathna

ಬೆಂಗಳೂರು: ಬಿಜೆಪಿ ಶಾಸಕ ಮುನಿರತ್ನ (Munirathna) ವಿರುದ್ದ ಎರಡು ಪೊಲೀಸ್‌ ದೂರು ದಾಖಲು ಮಾಡಲಾಗಿದೆ. ಒಂದು ಕೊಲೆ ಬೆದರಿಕೆ (Murder Attempt) ಹಾಗೂ ಇನ್ನೊಂದು ಜಾತಿ ನಿಂದನೆ (Atrocity) ದೂರುಗಳಾಗಿವೆ.

ಕಸ ನಿರ್ವಹಣೆ ಹಾಗೂ ವಿಲೇವಾರಿ ಸಂಬಂಧ ಲಂಚ ನೀಡುವಂತೆ ಶಾಸಕ ಮುನಿರತ್ನ ಒತ್ತಾಯಿಸಿದ್ದಾರೆ. ಹಾಗೂ ಜೀವ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿ ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ಶಾಸಕ ಮುನಿರತ್ನ ವಿರುದ್ಧ ನಗರ ಪೊಲೀಸ್ ಆಯುಕ್ತರಿಗೆ ಬಿಬಿಎಂಪಿ ಗುತ್ತಿಗೆದಾರ ಚೆಲುವರಾಜು ಎಂಬವರು ದೂರು ನೀಡಿದ್ದಾರೆ.

ಇನ್ನೊಂದು ಜಾತಿನಿಂದನೆ ಕಾಯಿದೆಯಡಿ ದೂರು ಆಗಿದ್ದು, ವೈಯಾಲಿಕಾವಲ್‌ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಮಾಡಲಾಗಿದೆ. ಕೊಲೆ ಬೆದರಿಕೆ, ಜಾತಿ ನಿಂದನೆ ಮಾಡಿರುವುದಾಗಿ ಆರೋಪಿಸಿರುವ ಚೆಲುವರಾಜು, ಶಾಸಕ ಮುನಿರತ್ನ ವಿರುದ್ಧ ಕಾನೂನು ಕ್ರಮ ಕೈಗೊಂಡು ರಕ್ಷಣೆ ನೀಡಬೇಕೆಂದು ಪೊಲೀಸರಿಗೆ ನೀಡಿರುವ ದೂರಿನಲ್ಲಿ ಮನವಿ ಮಾಡಿದ್ದಾರೆ.