Thursday, 19th September 2024

Physical Abuse: ವಿದ್ಯಾರ್ಥಿನಿಯರ ಖಾಸಗಿ ಅಂಗ ಮುಟ್ಟಿ, ದೌರ್ಜನ್ಯ ಎಸಗಿದ್ದ ಶಿಕ್ಷಕ ಮೊಹಮ್ಮದ್ ಸಾದಿಕ್ ಬಂಧನ

Physical Abuse

ಬೆಳಗಾವಿ: ವಿದ್ಯಾರ್ಥಿನಿಯರ ಖಾಸಗಿ ಅಂಗಗಳನ್ನು ಮುಟ್ಟಿ ದೌರ್ಜನ್ಯ ಎಸಗಿದ್ದ ಶಿಕ್ಷಕನನ್ನು ಪೊಲೀಸರು ಬಂಧಿಸಿರುವ ಘಟನೆ (Physical Abuse) ಚಿಕ್ಕೋಡಿಯಲ್ಲಿ ನಡೆದಿದೆ. ವಿದ್ಯಾರ್ಥಿನಿಯರ ಜತೆ ಅನುಚಿತವಾಗಿ ವರ್ತಿಸಿ, ಶೌಚಕ್ಕೆ ಹೋದಾಗ ಖಾಸಗಿ ಫೋಟೊಗಳನ್ನು ತೆಗೆದುಕೊಂಡು ಬರುವಂತೆ ಪೀಡಿಸುತ್ತಿದ್ದ ಆರೋಪದ ಹಿನ್ನೆಲೆಯಲ್ಲಿ ಶಿಕ್ಷಕನ ಬಂಧಿಸಲಾಗಿದೆ.

ಹಾವೇರಿ ಜಿಲ್ಲೆಯ ಶಿಗ್ಗಾವಿಯ ಶಿಕ್ಷಕ ಮೊಹಮ್ಮದ್ ಸಾದಿಕ್‌ ಬಂಧಿತ ಶಿಕ್ಷಕ. ಕಳೆದ ಐದು ವರ್ಷಗಳಿಂದ ಚಿಕ್ಕೋಡಿಯ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರಾಗಿ ಕಾರ್ಯ ನಿರ್ವಹಿಸುತ್ತಿದ್ದ ಈತ, ಸಾದಿಕ್ ವಿದ್ಯಾರ್ಥಿನಿಯರ ಖಾಸಗಿ ಅಂಗ ಮುಟ್ಟಿ, ವಿಕೃತಿ ಮೆರೆಯುತ್ತಿದ್ದ. ಜತೆಗೆ ಶೌಚಕ್ಕೆ ಹೋಗುತ್ತಿದ್ದಾಗ ಖಾಸಗಿ ಅಂಗಗಳ ಪೋಟೊ ತೆಗೆದುಕೊಂಡು ಬರುವಂತೆಯೂ ವಿದ್ಯಾರ್ಥಿನಿಯರಿಗೆ ಹೇಳುತ್ತಿದ್ದನು. ಇವೆಲ್ಲವನ್ನು ತನ್ನ ಮೊಬೈಲ್‌ನಲ್ಲಿ ಸೇವ್ ಮಾಡಿಟ್ಟುಕೊಂಡಿದ್ದ.

ಈ ರೀತಿ ಕಳೆದ ಒಂದು ವರ್ಷದಿಂದ 30ಕ್ಕೂ ಹೆಚ್ಚು ವಿದ್ಯಾರ್ಥಿನಿಯರ ಮೇಲೆ ಶಿಕ್ಷಕ ದೌರ್ಜನ್ಯ ಎಸಗಿದ ಆರೋಪ ಕೇಳಿಬಂದಿತ್ತು. ಈ ನಡುವೆ ಒಬ್ಬ ವಿದ್ಯಾರ್ಥಿನಿ ತಾಯಿ ಮುಂದೆ ಶಿಕ್ಷಕನ ದುಷ್ಕೃತ್ಯವನ್ನು ಹೇಳಿದಾಗ, ಪ್ರಕರಣ ಬೆಳಕಿಗೆ ಬಂದಿತ್ತು. ಸದ್ಯ ಚಿಕ್ಕೋಡಿಯ ಪೊಲೀಸರು ಶಿಕ್ಷಕನ ವಿರುದ್ಧ ಪೋಕ್ಸೊ ಕೇಸ್ ದಾಖಲಿಸಿ, ಬಂಧಿಸಿದ್ದಾರೆ. ಹೀಗಾಗಿ ಶಿಕ್ಷಕನನ್ನು ಸೇವೆಯಿಂದ ಅಮಾನತು ಮಾಡಿ ಡಿಡಿಪಿಐ ಆದೇಶ ಹೊರಡಿಸಿದ್ದಾರೆ.

ಚಿಕ್ಕಮಗಳೂರಲ್ಲಿ ಪ್ಯಾಲೆಸ್ತೀನ್‌ ಧ್ವಜ ಹಿಡಿದು ಓಡಾಡಿದ ಅನ್ಯ ಕೋಮಿನ ಯುವಕರು!

Palestine flag

ಚಿಕ್ಕಮಗಳೂರು: ಕುಣಿಗಲ್‌ನಲ್ಲಿ ಪ್ಯಾಲೆಸ್ತೀನ್‌ ಧ್ವಜ (Palestine flag) ಹಾರಿಸಲು ಯುವಕರು ಯತ್ನಿಸಿದ ಘಟನೆ ನಡೆದ ಬೆನ್ನಲ್ಲೇ ಇದೀಗ ನಗರದಲ್ಲೂ ಪ್ಯಾಲಿಸ್ತೀನ್ ಧ್ವಜ ಹಿಡಿದು ಬೈಕ್‌ನಲ್ಲಿ ರೌಂಡ್ಸ್ ಹೊಡೆದಿರುವುದು ಕಂಡುಬಂದಿದೆ. ಈದ್ ಮಿಲಾದ್ ಮೆರವಣಿಗೆಗೆ ಸಿದ್ಧತೆ ನಡೆಯುತ್ತಿರುವ ಹೊತ್ತಿನಲ್ಲಿ ಚಿಕ್ಕಮಗಳೂರಿನ ಪ್ರಮುಖ ರಸ್ತೆಗಳಲ್ಲಿ ಅನ್ಯ ಕೋಮಿನ ಯುವಕರು, ಪ್ಯಾಲಿಸ್ತೀನ್ ಧ್ವಜ ಹಿಡಿದು ಬೈಕ್‌ನಲ್ಲಿ ಓಡಾಡಿದ್ದಾರೆ. ಇದಕ್ಕೆ ಹಿಂದುಪರ ಸಂಘಟನೆಗಳು ಅಕ್ರೋಶ ಹೊರಹಾಕಿವೆ.

ಈ ಸುದ್ದಿಯನ್ನೂ ಓದಿ | Viral Video: ಸಹೋದರಿಯ ಅತ್ಯಾಚಾರ ಮಾಡಿದವನ್ನುಕೊಂದು ನಗುತ್ತಲೇ ಜೈಲು ಸೇರಿದ ಯುವಕ, ವಿಡಿಯೊ ವೈರಲ್‌

ವಿಡಿಯೊ ವೈರಲ್ ಆಗುತ್ತಿದ್ದಂತೆ ನೂರಾರು ಹಿಂದುಪರ ಕಾರ್ಯಕರ್ತರು ಚಿಕ್ಕಮಗಳೂರು ನಗರ ಠಾಣೆ ಎದುರು ಪ್ರತಿಭಟನೆ ನಡೆಸಿ, ಪ್ಯಾಲಿಸ್ತೀನ್ ಧ್ವಜ ಹಿಡಿದು ಬೈಕ್‌ನಲ್ಲಿ ರೌಂಡ್ಸ್ ಹೊಡೆದ ಯುವಕರನ್ನು ಬಂಧಿಸುವಂತೆ ಆಗ್ರಹಿಸಿದ್ದಾರೆ. ಸ್ಥಳದಲ್ಲಿ ಬಿಗುವಿನ ವಾತಾವರಣ ಕೂಡ ಕಂಡು ಬಂದಿದೆ.