Friday, 22nd November 2024

Maharashtra Elections : ನವೆಂಬರ್ ಎರಡನೇ ವಾರದಲ್ಲಿ ಮಹಾರಾಷ್ಟ್ರ ವಿಧಾನ ಸಭೆ ಚುನಾವಣೆ? ಸಿಎಂ ಸೂಚನೆ

Maharashtra Election

ಬೆಂಗಳೂರು: ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಭಾನುವಾರ ರಾಜ್ಯ ವಿಧಾನಸಭಾ ಚುನಾವಣೆ ನವೆಂಬರ್ ಎರಡನೇ ವಾರ ನಡೆಯುವ ಸಾಧ್ಯತೆಗಳಿವೆ ಎಂದು ಹೇಳಿದ್ದಾರೆ. ಎರಡು ಹಂತಗಳಲ್ಲಿ ಚುನಾವಣೆ ನಡೆಯಬಹುದು ಎಂದು ಸುಳಿವು ನೀಡಿದ್ದಾರೆ. ಚುನಾವಣಾ ಆಯೋಗ ಇನ್ನೂ ಈ ಬಗ್ಗೆ ಅಧಿಕೃತ ಪ್ರಕಟಣೆ ಹೊರಡಿಸಿಲ್ಲ. ಆದರೆ ಸಿಎಂ ಏಕನಾಥ ಶಿಂಧೆ ಅವರು ಬಗ್ಗೆ ಹೇಳಿಕೆ ನೀಡಿದ್ದಾರೆ. ಮುಖ್ಯಮಂತ್ರಿಗಳ ಅಧಿಕೃತ ನಿವಾಸವಾದ ವರ್ಷಾದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡುವಾಗ ಶಿಂಧೆ ಈ ಹೇಳಿಕೆ ನೀಡಿದ್ದಾರೆ.

ಮಹಾರಾಷ್ಟ್ರ ವಿಧಾನಸಭೆಯ ಅವಧಿ ನವೆಂಬರ್ 26 ರಂದು ಕೊನೆಗೊಳ್ಳಲಿದ್ದು, ಹರಿಯಾಣದೊಂದಿಗೆ ಚುನಾವಣೆ ನಡೆಯುವ ನಿರೀಕ್ಷೆಯಿತ್ತು. ಆದಾಗ್ಯೂ, ಆಗಸ್ಟ್‌ನಲ್ಲಿ ಹರಿಯಾಣ ಮತ್ತು ಜಮ್ಮು ಮತ್ತು ಕಾಶ್ಮೀರಕ್ಕೆ ಚುನಾವಣಾ ವೇಳಾಪಟ್ಟಿ ಘೋಷಿಸುವಾಗ, ಜಮ್ಮು ಮತ್ತು ಕಾಶ್ಮೀರದ ಭದ್ರತಾ ಅವಶ್ಯಕತೆಗಳಿಂದಾಗಿ ಚುನಾವಣಾ ವೇಳಾಪಟ್ಟಿಯನ್ನು ನಂತರ ಪ್ರಕಟಿಸಲಾಗುವುದು ಎಂದು ಚುನಾವಣಾ ಆಯೋಗ ಘೋಷಿಸಿತ್ತು.

ನವೆಂಬರ್ ಎರಡನೇ ವಾರದಲ್ಲಿ ಚುನಾವಣೆ ನಡೆಯುವ ಸಾಧ್ಯತೆ ಇದೆ. ಎರಡು ಹಂತಗಳಲ್ಲಿ ಚುನಾವಣೆ ನಡೆಸುವುದು ಉತ್ತಮ. ಮಿತ್ರಪಕ್ಷಗಳ ನಡುವೆ ಸೀಟು ಹಂಚಿಕೆ ನಿರ್ಧಾರವಾಗಿಲ್ಲ ಎಂದು ಸಿಎಂ ಹೇಳಿದ್ದಾರೆ. ಮಹಾಯುತಿ ಮೈತ್ರಿ ಪಾಲುದಾರರಾದ ಬಿಜೆಪಿ, ಅಜಿತ್ ಪವಾರ್ ನೇತೃತ್ವದ ಎನ್ಸಿಪಿ ಮತ್ತು ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆ ಮುಂದಿನ 8 ರಿಂದ 10 ದಿನಗಳಲ್ಲಿ ಸೀಟು ಹಂಚಿಕೆ ಒಪ್ಪಂದ ಅಂತಿಮಗೊಳಿಸುವ ಸಾಧ್ಯತೆಯಿದೆ ಎಂದು ಏಕನಾಥ್ ಶಿಂಧೆ ಹೇಳಿದರು.

ಮಹಾಯುತಿ ಸರ್ಕಾರವು ಅಭಿವೃದ್ಧಿ ಮತ್ತು ಕಲ್ಯಾಣ ಕ್ರಮಗಳತ್ತ ಗಮನ ಹರಿಸುತ್ತಿದೆ. ಜನರಿಂದ ಉತ್ತಮ ಪ್ರತಿಕ್ರಿಯೆ ಪಡೆಯುತ್ತಿದೆ ಎಂದು ಮುಖ್ಯಮಂತ್ರಿ ಹೇಳಿದ್ದಾರೆ ಸರ್ಕಾರವು ಮಹಿಳೆಯರಿಂದ ನೆರವು ಕೂಡ ಪಡೆಯುತ್ತಿದೆ ಎಂದು ಹೇಳಿದರು.

ಇದನ್ನೂ ಓದಿ: Arvind Kejriwal: ಮುಖ್ಯಮಂತ್ರಿ ಹುದ್ದೆಗೆ ರಾಜೀನಾಮೆ ಘೋಷಿಸಿದ ಅರವಿಂದ್‌ ಕೇಜ್ರಿವಾಲ್‌

ಸರ್ಕಾರವು ಅಭಿವೃದ್ಧಿ ಮತ್ತು ಕಲ್ಯಾಣ ಯೋಜನೆಗಳ ನಡುವೆ ಸಮತೋಲನವನ್ನು ಸಾಧಿಸಿದೆ ಎಂದು ಹೇಳಿದ ಶಿಂಧೆ, ಮಹಿಳೆಯರು ಕೂಡ ಸರ್ಕಾರಕ್ಕೆ ಬೆಂಬಲ ನೀಡಬಹುದು. ಅವರಿಗೆ ಸಾಮಾನ್ಯ ಜನರ ಸರ್ಕಾರ ಬೇಕಾಗಿದೆ ಎಂದು ಪ್ರತಿಪಾದಿಸಿದರು. “ನಾವು 2.5 ಕೋಟಿ ಮಹಿಳೆಯರನ್ನು ತಲುಪಲು ಯೋಜಿಸಿದ್ದೇವೆ” ಎಂದು ಶಿಂಧೆ ಹೇಳಿದರು.