Thursday, 19th September 2024

Karnataka Weather: ಇಂದಿನ ಮಳೆ ಭವಿಷ್ಯ; ಶಿವಮೊಗ್ಗ, ಚಿಕ್ಕಮಗಳೂರು ಸೇರಿ ಹಲವೆಡೆ ಸಾಧಾರಣ ವರ್ಷಧಾರೆ

Karnataka Weather

ಬೆಂಗಳೂರು: ರಾಜ್ಯದಲ್ಲಿ ಕಳೆದೆರಡು ವಾರಗಳಿಂದ ಮುಂಗಾರು ಮಳೆ ಕ್ಷೀಣಿಸಿದ್ದು, ಒಣ ಹವೆಯ ವಾತವಾರಣವಿದೆ. ಇನ್ನು ಸೆ.16ರಂದು ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಬೆಳಗಾವಿ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಮತ್ತು ಕೊಡಗು ಜಿಲ್ಲೆಯಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ((Karnataka Weather) ಸಾಧ್ಯತೆ ಇದೆ. ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಹಗುರ ಮಳೆಯಾಗಲಿದೆ (Rain News) ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇನ್ನು ಮುಂದಿನ 5 ದಿನಗಳ ರಾಜ್ಯದ ಕರಾವಳಿ & ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಂತ ಮಲೆನಾಡು ಜಿಲ್ಲೆಗಳಿಗೆ ಅಲ್ಲಲ್ಲಿ ಚದುರಿದಂತೆ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡು ಜಿಲ್ಲೆಗಳಿಗೆ ಅಲ್ಲಲ್ಲಿ ಚದುರಿದಂತೆ ತುಂತುರು ಮಳೆಯಾಗುವ ಸಾಧ್ಯತೆಯಿದೆ.

ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳ ಮುನ್ಸೂಚನೆ:
ಮುಂದಿನ 48 ಗಂಟೆಗಳ ಕಾಲ ಭಾಗಶಃ ಮೋಡ ಕವಿದ ಆಕಾಶ. ಹಗುರ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 30°C ಮತ್ತು 20°C ಆಗಿರಬಹುದು.

ಅದೇ ರೀತಿ ಸೆ.17ರಂದು ಕೂಡ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಹಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಬೆಳಗಾವಿ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಮತ್ತು ಕೊಡಗು ಜಿಲ್ಲೆಗಳ ಒಂದು ಅಥವಾ ಎರಡು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಮುಖ್ಯವಾಗಿ ಒಣ ಹವೆಯ ಸಾಧ್ಯತೆಯಿದೆ. ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ ಎಂದು ಇಲಾಖೆ ಮಾಹಿತಿ ನೀಡಿದೆ. ಇದೇ ರೀತಿಯ ಹವಾಮಾನ ಸೆ. 21ರವರೆಗೆ ಇರಲಿದೆ.