ಮಂಗಳೂರು: ಮಂಗಳೂರಿನ ಹೊರವಲಯದ (Mangalore news) ಸುರತ್ಕಲ್ (Suratkal) ಬಳಿಯ ಕಾಟಿಪಳ್ಳದಲ್ಲಿ ಭಾನುವಾರ ರಾತ್ರಿ ಮಸೀದಿ (Masjid) ಮೇಲೆ ಕಲ್ಲು ತೂರಾಟ (Stone Pelting) ನಡೆದಿದೆ. ಇದು ಕೋಮು ಸೂಕ್ಷ್ಮ ಪ್ರದೇಶ (Communal tensions) ಎಂದು ಗುರುತಿಸಲ್ಪಟ್ಟಿದ್ದು, ಪ್ರಕರಣ ಆತಂಕಕ್ಕೆ ಕಾರಣವಾಗಿದೆ.
ಕಾಟಿಪಳ್ಳ 3ನೇ ಬ್ಲಾಕ್ನ ಬದ್ರಿಯಾ ಮಸೀದಿ ಮೇಲೆ ಕಲ್ಲೆಸೆತ ನಡೆದಿದೆ. ಕಲ್ಲು ತೂರಾಟದಿಂದ ಮಸೀದಿಯ ಗಾಜು ಪುಡಿ ಪುಡಿಯಾಗಿದೆ. ಈದ್ ಮಿಲಾದ್ ಮುನ್ನಾ ದಿನವೇ ಘಟನೆ ಸಂಭವಿಸಿದ್ದು, ಆತಂಕಕ್ಕೆ ಕಾರಣವಾಗಿದೆ. ಕಲ್ಲು ತೂರಾಟದ ಬಳಿಕ ಇಲ್ಲಿ ಜಮ ಜಮಾಯಿಸಿದರು.
ಭಾನುವಾರ ರಾತ್ರಿ 10.30ರ ಸುಮಾರಿಗೆ 2 ಬೈಕ್ಗಳಲ್ಲಿ ಬಂದಿದ್ದ ನಾಲ್ವರು ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿ ಪರಾರಿಯಾಗಿದ್ದಾರೆ. ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ಕಾಟಿಪಳ್ಳದ ಮಸೀದಿಗೆ ಸದ್ಯ ಬಿಗಿ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿದೆ.
ಮಂಡ್ಯದ ನಾಗಮಂಗಲದಲ್ಲಿ ನಡೆದಿರುವ ಕೋಮು ಗಲಭೆಯ ಕಿಚ್ಚು ಆರುವ ಮುನ್ನವೇ ಕೋಮು ಸೂಕ್ಷ್ಮ ಪ್ರದೇಶವಾಗಿರುವ ದಕ್ಷಿಣ ಕನ್ನಡ ಜಿಲ್ಲೆಯ ಕಾಟಿಪಳ್ಳದಲ್ಲಿ ಈ ಘಟನೆ ನಡೆದಿರುವುದು ಆತಂಕಕ್ಕೆ ಕಾರಣವಾಗಿದೆ. ಸದ್ಯ ಮಸೀದಿಗೆ ಬಿಗಿ ಭದ್ರತೆ ಕಲ್ಪಿಸಲಾಗಿದೆ.