ಚೆನ್ನೈ: ಆತಿಥೇಯ ಭಾರತ ಎದುರಿನ ಎರಡು ಪಂದ್ಯಗಳ ಟೆಸ್ಟ್(ind vs ban test) ಸರಣಿಯನ್ನಾಡಲು ಬಾಂಗ್ಲಾದೇಶ(IND vs BAN) ಆಟಗಾರರು ಭಾರತಕ್ಕೆ ಬಂದಿದ್ದಾರೆ. ಚೆನ್ನೈಗೆ ಬಂದಿಳಿದ ಆಟಗಾರರಿಗೆ ಭರ್ಜರಿ ಸ್ವಾಗತ ನೀಡಲಾಯಿತು. ಇಲ್ಲಿನ “ಎಂ.ಎ. ಚಿದಂಬರಂ ಸ್ಟೇಡಿಯಂನಲ್ಲಿ ಗುರುವಾರ ಮೊದಲ ಟೆಸ್ಟ್ ಆರಂಭಗೊಳ್ಳಲಿದೆ. ಭಾರತೀಯ ಆಟಗಾರರು ಕೆಲ ದಿನಗಳ ಹಿಂದೆಯೇ ಚೆನ್ನೈಗೆ ಆಗಮಿಸಿ ಅಭ್ಯಾಸ ನಡೆಸುತ್ತಿದ್ದಾರೆ. ಬಾಂಗ್ಲಾ ಆಟಗಾರರು ಇಂದಿನಿಂದ(ಸೋಮವಾರ) ಅಭ್ಯಾಸ ತೊಡಗಲಿದ್ದಾರೆ.
ಕಳೆದ ತಿಂಗಳಷ್ಟೇ ಪಾಕಿಸ್ತಾನವನ್ನು ಅವರದ್ದೇ ನೆಲದಲ್ಲಿ 2-0 ಅಂತರದಿಂದ ಮಣಿಸಿ ಸರಣಿ ಗೆದ್ದಿರುವ ಬಾಂಗ್ಲಾ ಇದೇ ಜೋಶ್‌ನಲ್ಲಿ ಭಾರತ ವಿರುದ್ಧವೂ ಸೆಣಸಾಡುವ ಆತ್ಮವಿಶ್ವಾಸದಲ್ಲಿದೆ. ಕಾರ್ಯತಂತ್ರವನ್ನು ಯಶಸ್ವಿಗೊಳಿಸಿದರೆ ಉತ್ತಮ ಫಲಿತಾಂಶ ಪಡೆಯಲು ಸಾಧ್ಯ ಎಂಬುದಾಗಿ ಬಾಂಗ್ಲಾದೇಶ ತಂಡದ ನಾಯಕ ನಜ್ಮುಲ್ ಹುಸೇನ್ ಶಾಂತೊ ಪಂದ್ಯ ಆರಂಭಕ್ಕೂ ಮುನ್ನವೇ ಹೇಳಿಕೆ ಕೊಟ್ಟಿದ್ದಾರೆ.
ಇದನ್ನೂ ಓದಿ IND vs BNG: ಬಾಂಗ್ಲಾ ಟಿ20 ಸರಣಿಗೆ ಭಾರತದ ಮೂವರು ಆಟಗಾರರಿಗೆ ವಿಶ್ರಾಂತಿ
ತೊಡೆಸಂದು ಗಾಯದಿಂದಾಗಿ ಪಾಕ್ ಸರಣಿಯಿಂದ ಹೊರಗುಳಿದಿದ್ದ ಆರಂಭಿಕ ಆಟಗಾರ ಮಹ್ಮದುಲ್ ಹಸನ್ ಜಾಯ್ ಮತ್ತೆ ತಂಡ ಸೇರಿದ್ದಾರೆ. ಆದರೆ, ಎಡಗೈ ಸೀಮರ್ ಶೋರಿಫುಲ್ ಇಸ್ಲಾಮ್ ಗಾಯದಿಂದಾಗಿ ಸರಣಿಯಿಂದ ಹೊರಗುಳಿದಿದ್ದಾರೆ. ಶಾರಿಫುಲ್ ಲಾಹೋರ್‌ನಲ್ಲಿ ಪಾಕಿಸ್ತಾನದ ವಿರುದ್ಧ ಆರಂಭಿಕ ಟೆಸ್ಟ್‌ನಲ್ಲಿ ಗಾಯಗೊಂಡಿದ್ದರು.
ಹಿಂದುಗಳ ಮೇಲಿನ ದಾಳಿಯ ನಂತರ ಬಾಂಗ್ಲಾದ ವಿರುದ್ಧ ಭಾರತದಲ್ಲಿ ಹೆಚ್ಚಿನ ಆಕ್ರೋಶವಿದೆ. ಹೀಗಾಗಿ ಬಾಂಗ್ಲಾ ತಂಡಕ್ಕೆ ಬಿಗಿ ಭದ್ರತಾ ವ್ಯವಸ್ಥೆಗಳನ್ನು ಮಾಡಲಾಗಿದೆ. ತಂಡಕ್ಕೆ ಸೂಕ್ತ ಭದ್ರತೆ ಒದಗಿಸುವ ಬಗ್ಗೆ ಬಿಸಿಸಿಐ ಕಾರ್ಯದರ್ಶಿ ಜಯ್ ಷಾ ಈಗಾಗಲೆ ಬಾಂಗ್ಲಾ ಕ್ರಿಕೆಟ್ ಮಂಡಳಿ ಮುಖ್ಯಸ್ಥ ಫಾರುಖ್ ಅಹ್ಮದ್ಗೆ ಭರವಸೆ ನೀಡಿದ್ದಾರೆ.
ಬಾಂಗ್ಲಾ ಟೆಸ್ಟ್ ತಂಡ
ನಜ್ಮುಲ್ ಹೊಸೈನ್ ಶಾಂಟೊ (ನಾಯಕ), ಮಹಮ್ಮದುಲ್ ಹಸನ್ ಜಾಯ್, ಝಾಕಿರ್ ಹಸನ್, ಶದ್ಮಾನ್ ಇಸ್ಲಾಂ, ಮೊಮಿನುಲ್ ಹಕ್, ಮುಶ್ಫಿಕರ್ ರಹೀಮ್, ಶಾಕಿಬ್ ಅಲ್ ಹಸನ್, ಲಿಟ್ಟನ್ ಕುಮಾರ್ ದಾಸ್, ಮೆಹಿದಿ ಹಸನ್ ಮಿರಾಜ್, ತೈಜುಲ್ ಇಸ್ಲಾಂ, ನಯೀಮ್ ಹಸನ್, ನಹಿದ್ ರಾಣಾ, ಹಸನ್ ಮಹಮ್ಮದ್, ತಾಸ್ ಮಹಮ್ಮದ್ ಸೈಯದ್ ಖಲೀದ್ ಅಹ್ಮದ್, ಜಾಕರ್ ಅಲಿ ಅನಿಕ್.
ಮೊದಲ ಪಂದ್ಯಕ್ಕೆ ಭಾರತ ತಂಡ
ರೋಹಿತ್ ಶರ್ಮಾ (ನಾಯಕ), ಯಶಸ್ವಿ ಜೈಸ್ವಾಲ್, ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಕೆಎಲ್ ರಾಹುಲ್, ಸರ್ಫರಾಜ್ ಖಾನ್, ರಿಷಭ್ ಪಂತ್ (ವಿಕೆಟ್ ಕೀಪರ್), ಧ್ರುವ್ ಜುರೆಲ್ (ವಿಕೆಟ್ ಕೀಪರ್), ಆರ್ ಅಶ್ವಿನ್, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಕುಲದೀಪ್ ಯಾದವ್, ಮೊಹಮ್ಮದ್ ಸಿರಾಜ್, ಆಕಾಶ್ ದೀಪ್, ಜಸ್ಪ್ರೀತ್ ಬುಮ್ರಾ, ಯಶ್ ದಯಾಳ್.