Thursday, 19th September 2024

Job Guide: 250 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದ NTPC; ಅಪ್ಲೈ ಮಾಡುವ ವಿಧಾನ ಇಲ್ಲಿದೆ

Job Guide

ಬೆಂಗಳೂರು: ನ್ಯಾಷನಲ್ ಥರ್ಮಲ್ ಪವರ್ ಕಾರ್ಪೊರೇಷನ್ ಲಿಮಿಟೆಡ್ (National Thermal Power Corporation) ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ (NTPC Recruitment 2024). 250 ಡೆಪ್ಯುಟಿ ಮ್ಯಾನೇಜರ್‌ (Deputy Manager) ಹುದ್ದೆ ಖಾಲಿ ಇದ್ದು, ಪದವಿ ವಿದ್ಯಾರ್ಹತೆ ಹೊಂದಿದವರು ಅರ್ಜಿ ಸಲ್ಲಿಸಬಹುದು. ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕಿದ್ದು, ಕೊನೆಯ ದಿನ ಸೆಪ್ಟೆಂಬರ್‌ 28 (Job Guide).

ಹುದ್ದೆಗಳ ವಿವರ ಮತ್ತು ವಿದ್ಯಾರ್ಹತೆ

ಎಲೆಕ್ಟ್ರಿಕಲ್‌ ಎರೆಕ್ಷನ್‌- 45 ಹುದ್ದೆ, ವಿದ್ಯಾರ್ಹತೆ: ಪದವಿ, ಬಿ.ಇ ಅಥವಾ ಬಿ.ಟೆಕ್‌ ಇನ್‌ ಎಲೆಕ್ಟ್ರಿಕಲ್‌/ಎಲೆಕ್ಟ್ರಿಕಲ್‌ & ಎಲೆಕ್ಟ್ರಾನಿಕ್ಸ್‌
ಮೆಕ್ಯಾನಿಕಲ್‌ ಎರೆಕ್ಷನ್‌-95 ಹುದ್ದೆ, ವಿದ್ಯಾರ್ಹತೆ: ಪದವಿ, ಬಿ.ಇ ಅಥವಾ ಬಿ.ಟೆಕ್‌ ಇನ್‌ ಮೆಕ್ಯಾನಿಕಲ್‌/ಪ್ರೊಡಕ್ಷನ್‌
ಸಿ & ಐ ಎರೆಕ್ಷನ್‌- 35 ಹುದ್ದೆ, ವಿದ್ಯಾರ್ಹತೆ: ಪದವಿ, ಬಿ.ಇ ಅಥವಾ ಬಿ.ಟೆಕ್‌ ಇನ್‌ ಎಲೆಕ್ಟ್ರಾನಿಕ್ಸ್‌/ಕಂಟ್ರೋಲ್‌ ಇನ್‌ಸ್ಟ್ರುಮೆಂಟೇಶನ್‌/ಇನ್‌ಸ್ಟ್ರುಮೆಂಟೇಶನ್‌
ಸಿವಿಲ್‌ ಕನ್‌ಸ್ಟ್ರಕ್ಷನ್‌-75 ಹುದ್ದೆ, ವಿದ್ಯಾರ್ಹತೆ: ಪದವಿ, ಬಿ.ಇ ಅಥವಾ ಬಿ.ಟೆಕ್‌ ಇನ್‌ ಸಿವಿಲ್‌/ಕನ್‌ಸ್ಟ್ರಕ್ಷನ್ಸ್‌

ವಯೋಮಿತಿ

NTPC Recruitment 2024 ಅಧಿಸೂಚನೆ ಪ್ರಕಾರ ಅಭ್ಯರ್ಥಿಗಳ ಗರಿಷ್ಠ ವಯಸ್ಸು 40 ವರ್ಷ. ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಲಭ್ಯ. ಒಬಿಸಿ ಆಭ್ಯರ್ಥಿಗಳಿಗೆ 3 ವರ್ಷ, ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ ಮತ್ತು ಪಿಡಬ್ಲ್ಯುಬಿಡಿ ಅಭ್ಯರ್ಥಿಗಳಿಗೆ 10 ವರ್ಷಗಳ ರಿಯಾಯಿತಿ ಇದೆ.

ಅರ್ಜಿ ಶುಲ್ಕ

ಎಸ್‌ಸಿ/ಎಸ್‌ಟಿ/ಪಿಡಬ್ಲ್ಯುಬಿಡಿ/ಮಾಜಿ ಯೋಧರು/ಮಹಿಳಾ ಅಭ್ಯರ್ಥಿಗಳು ಅರ್ಜಿ ಶುಲ್ಕ ಪಾವತಿಸಬೇಕಾಗಿಲ್ಲ. ಸಾಮಾನ್ಯ/ಇಡಬ್ಲ್ಯುಎಸ್‌/ಒಬಿಸಿ ಅಭ್ಯರ್ಥಿಗಳು ಅರ್ಜಿ ಶುಲ್ಕವಾಗಿ 300 ರೂ. ಅನ್ನು ಆನ್‌ಲೈನ್‌ ಅಥವಾ ಆಫ್‌ಲೈನ್‌ ಮೂಲಕ ಪಾವತಿಸಬೇಕು.

ಆಯ್ಕೆ ವಿಧಾನ ಮತ್ತು ಮಾಸಿಕ ವೇತನ

ಲಿಖಿತ/ಕಂಪ್ಯೂಟರ್‌ ಆಧಾರಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ. ಆಯ್ಕೆಯಾದವರಿಗೆ 70,000 ರೂ. – 2,00,000 ರೂ. ಮಾಸಿಕ ವೇತನ ದೊರೆಯಲಿದೆ.

NTPC Recruitment 2024 ಅಧಿಸೂಚನೆ ಓದಲು ಇಲ್ಲಿ ಕ್ಲಿಕ್‌ ಮಾಡಿ.

ಅರ್ಜಿ ಸಲ್ಲಿಸುವ ವಿಧಾನ

  • ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್‌ ಮಾಡಿ (https://careers.ntpc.co.in/recruitment/login.php)
  • Register ಆಯ್ಕೆ ಮೇಲೆ ಕ್ಲಿಕ್‌ ಮಾಡಿ ಹೆಸರು ನೋಂದಾಯಿಸಿ.
  • ಲಾಗಿನ್‌ ಆಗಿ ಅಲ್ಲಿ ಕಂಡುಬರುವ ಅಪ್ಲಿಕೇಷನ್‌ ಫಾರಂ ಭರ್ತಿ ಮಾಡಿ.
  • ಅಗತ್ಯ ದಾಖಲೆಗಳನ್ನು ಅಪ್‌ಲೋಡ್‌ ಮಾಡಿ.
  • ಅರ್ಜಿ ಶುಲ್ಕ ಪಾವತಿಸಿ (ಅಗತ್ಯವಿದ್ದವರು ಮಾತ್ರ).
  • ಭರ್ತಿ ಮಾಡಿದ ವಿವರಗಳನ್ನು ಮತ್ತೊಮ್ಮೆ ಪರಿಶೀಲಿಸಿ ಎಲ್ಲವೂ ಸರಿ ಇದ್ದರೆ Submit ಬಟನ್‌ ಕ್ಲಿಕ್‌ ಮಾಡಿ.
  • ಭವಿಷ್ಯದ ಅಗತ್ಯಗಳಿಗಾಗಿ ಅಪ್ಲಿಕೇಷನ್‌ ಫಾರಂನ ಪ್ರಿಂಟ್‌ಔಟ್‌ ತೆಗೆದಿಡಿ.

ಅಪ್‌ಲೋಡ್‌ ಮಾಡಬೇಕಾದ ದಾಖಲೆಗಳು

  • 10ನೇ ತರಗತಿಯ ಅಂಕಪಟ್ಟಿ.
  • ಆಧಾರ್‌ ಮತ್ತು ಪ್ಯಾನ್‌ ಕಾರ್ಡ್‌.
  • ಶೈಕ್ಷಣಿಕ ಅರ್ಹತೆಯ ದಾಖಲಾತಿ ಇತ್ಯಾದಿ

ಹೆಚ್ಚಿನ ವಿವರಗಳಿಗೆ ನ್ಯಾಷನಲ್ ಥರ್ಮಲ್ ಪವರ್ ಕಾರ್ಪೊರೇಷನ್ ಲಿಮಿಟೆಡ್‌ನ ವೆಬ್‌ಸೈಟ್‌: ntpc.co.inಗೆ ಭೇಟಿ ನೀಡಿ.

ಈ ಸುದ್ದಿಯನ್ನೂ ಓದಿ: Job Guide: BISನಲ್ಲಿದೆ ಉದ್ಯೋಗಾವಕಾಶ; 10ನೇ ತರಗತಿ ಪಾಸಾದವರು ಅರ್ಜಿ ಸಲ್ಲಿಸಿ

Leave a Reply

Your email address will not be published. Required fields are marked *