Wednesday, 30th October 2024

ಅಕ್ರಮವಾಗಿ ಬೆಳೆದಿದ್ದ ಗಾಂಜಾ ಜಪ್ತಿ, ಆರೋಪಿ ಬಂಧನ

ಬಾಗೇಪಲ್ಲಿ: ಕರೋನ ರಾಜ್ಯಕ್ಕೆ ವಕ್ಕರಿಸಿದಾಗಿನಿಂದ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಗಾಂಜಾ ನಶೆಯ ಬಗ್ಗೆ ಹೆಚ್ಚು ಕೇಳುತ್ತಿದ್ದೇವೆ ಬಾಗೇಪಲ್ಲಿ ತಾಲ್ಲೂಕಿನಾದ್ಯಂತ ಇತ್ತೀಚೆಗೆ ಗಾಂಜಾ ಸೇರಿದಂತೆ ಮಾದಕ ವಸ್ತುಗಳ ಕುರಿತು ಸರ್ಕಾರವೇ ಬೆಚ್ಚಿಬೀಳುವಂತಹ ಪ್ರಕರಣಗಳು ಬೆಳಕಿಗೆ ಬರ್ತಿವೆ.

ಅದೇ ರೀತಿಯಲ್ಲಿ ತಾಲ್ಲೂಕಿನ ಗೂಳೂರು ಹೋಬಳಿಯ ಮಾರಗಾನಕುಂಟೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಚಿಂತಾಮಾಕಲ ದಿನ್ನೆ ಗ್ರಾಮದಲ್ಲಿ ವ್ಯಕ್ತಿಯೋರ್ವ ಅಕ್ರಮವಾಗಿ ತನ್ನ ಬಯಲು ಕುರಿ ಕೊಟ್ಟಿಗೆಯಲ್ಲಿ ಗಾಂಜಾ ಸಸ್ಯಗಳನ್ನು ಬೆಳಿದಿದ್ದಾನೆ.

ಖಚಿತ ಮಾಹಿತಿ ಮೇರೆಗೆ ಡಿವೈಎಸ್ಪಿ ರವಿಶಂಕರ್, ರವರ ಮಾರ್ಗದರ್ಶನದಲ್ಲಿ ಮತ್ತು ಸೂಚನೆ ಮೇರೆಗೆ ಬಾಗೇಪಲ್ಲಿ ಪೊಲೀಸರು ವೃತ ನಿರೀಕ್ಷೆ ನಯಾಜ್ ಬೇಗ್, ಉಪ ನಿರೀಕ್ಷಕ ಸುನಿಲ್ ಕುಮಾರ್ ರವರ ನೇತೃತ್ವದಲ್ಲಿ ದಾಳಿ ನಡೆಸಿ 10 ಕೆಜಿಯಷ್ಟು ಅಕ್ರಮ ಗಾಂಜಾ ವಶಪಡಿಸಿಕೊಂಡ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. ಬಾಗೇಪಲ್ಲಿ ತಾಲ್ಲೂಕು ಪೋಲೀಸ್ ಠಾಣೆಯಲ್ಲಿ ಪ್ರಕರಣ ವನ್ನು ದಾಖಲಿಸಿದ್ದಾರೆ.