Friday, 20th September 2024

Farmers Protest: ಸಕ್ಕರೆ ಕಾರ್ಖಾನೆ ಪ್ರಾರಂಭಕ್ಕೆ ಆಗ್ರಹಿಸಿ ರೈತರ ಪ್ರತಿಭಟನೆ

ಕಲಬುರಗಿ: ಜಿಲ್ಲೆಯ ಚಿಂಚೋಳಿ ತಾಲೂಕಿನಲ್ಲಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಒಡೆತನದ ಸಿದ್ದಸಿರಿ ಇಥೇನಾಲ್ ಸಕ್ಕರೆ ಕಾರ್ಖಾನೆ ಪ್ರಾರಂಭಿಸುವಂತೆ ಆಗ್ರಹಿಸಿ ಮಂಗಳವಾರ ಜಿಲ್ಲಾ ಬಿಜೆಪಿ ಘಟಕದ ನೇತೃತ್ವದಲ್ಲಿ ಸಾವಿರಾರು ರೈತರು ಬೃಹತ್ ಪ್ರತಿಭಟನೆ ನಡೆಸಿದರು.

ನಗರದ ಪಬ್ಲಿಕ್ ಗಾರ್ಡನ್ ಬಳಿ ಸಾವಿರಾರು ಸಂಖ್ಯೆಯಲ್ಲಿ ಜಮಾವಣೆಗೊಂಡ ರೈತರು, ಕೂಡಲೇ ಸಕ್ಕರೆ ಕಾರ್ಖಾನೆ ಪ್ರಾರಂಭಿಸಬೇಕು ಎಂದು ಒತ್ತಾಯಿಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅಥವಾ ಸರಕಾರದ ಪ್ರತಿನಿಧಿಗಳು ಸ್ಥಳಕ್ಕೆ ಆಗಮಿಸಿ ರೈತರ ಸಮಸ್ಯೆ ಪರಿಹರಿಸಬೇಕು ಎಂದು ಬಿಗಿ ಪಟ್ಟು ಹಿಡಿದು ಸರಕಾರದ ವಿರುದ್ದ ಘೋಷಣೆ ಕೂಗಿದರು.

ಈ ವೇಳೆ ಬಿಜೆಪಿ ಮುಖಂಡರು ಹಾಗೂ ರೈತ ಮುಖಂಡರ ನಿಯೋಗ ತೆರಳಿ ಮುಖ್ಯಮಂತ್ರಿಗಳ ಭೇಟಿ ಮಾಡಿದರು. ಈ ನಿಯೋಗದಲ್ಲಿ ಶಾಸಕರಾದ ಬಸವರಾಜ್ ಮತ್ತಿಮಡು, ಡಾ. ಅವಿನಾಶ್ ಜಾಧವ, ಪರಿಷತ್ ಸದಸ್ಯ ಶಶೀಲ್ ನಮೋಶಿ, ಜಿಲ್ಲಾಧ್ಯಕ್ಷರಾದ ಶಿವರಾಜ್ ಪಾಟೀಲ್ ರದ್ದೇವಾಡಗಿ, ಚಂದು ಪಾಟೀಲ್, ಮುಖಂಡರಾದ ಅಮರನಾಥ್ ಪಾಟೀಲ್, ಸೈಬಣ್ಣ ತಳವಾರ್ ಸೇರಿ ಅನೇಕರು ತೆರಳಿ ಸಮಸ್ಯೆ ಆಲಿಸುವಂತೆ ಒತ್ತಾಯಿಸಿದರು.

ಇದನ್ನೂ ಓದಿ: Kalaburagi: ಸಂಪುಟದ ಮೇಲೆ ಗರಿಗೆದರಿದ ಶ್ರೀಸಾಮಾನ್ಯ ನಿರೀಕ್ಷೆ !