Friday, 20th September 2024

Chickballapur News: ಕ್ರೀಡಾಭ್ಯಾಸದಿಂದ ದೈಹಿಕ, ಮಾನಸಿಕ ದೃಢತೆ ಆರೋಗ್ಯ ಸಾಧ್ಯ-ಶ್ರೀನಿವಾಸ್

ಬಾಗೇಪಲ್ಲಿ: ರಾಜ್ಯಮಟ್ಟದ ಕ್ರೀಡೆಗೆ ಅಯ್ಕೆಗೊಂಡಿರುವ ವಿದ್ಯಾರ್ಥಿಗಳು ಪಠ್ಯದ ಜೊತೆಗೆ ಕಠಿಣ ಕ್ರೀಡಾಭ್ಯಾಸ ವನ್ನು ಅಳವಡಿಸಿಕೊಂಡು ಗಡಿ ಭಾಗದ ಬಾಗೇಪಲ್ಲಿ ತಾಲೂಕಿನ ಕೀರ್ತಿಯನ್ನು ರಾಷ್ಟ್ರ ಮಟ್ಟದಲ್ಲಿ ಪಸರಿಸ ಬೇಕಾಗಿದೆ ಎಂದು ಎಕ್ಸ್ಪರ್ಟ್ ಪಿ.ಯು ಕಾಲೇಜು ಮುಖ್ಯಸ್ಥ ಶ್ರೀನಿವಾಸ್ ಅಭಿಮತ ವ್ಯಕ್ತಪಡಿಸಿದರು.

ಬಾಗೇಪಲ್ಲಿ ಪಟ್ಟಣದಲ್ಲಿರುವ ಎಕ್ಸ್ಪರ್ಟ್ ಪಿಯು ಕಾಲೇಜುನಲ್ಲಿ ಅಯೋಜಿಸಿದ್ದ ಸನ್ಮಾನ ಕಾರ್ಯಕ್ರಮದಲ್ಲಿ ಸಾಧಕರನ್ನು ಸನ್ಮಾನಿಸಲಾಯಿತು.

ಚಿಕ್ಕಬಳ್ಳಾಪುರದ ನಾಗಾರ್ಜುನ ಇಂಜನಿಯರಿಂಗ್ ಕಾಲೇಜುನಲ್ಲಿ ನಡೆದ 2024-25 ನೇ ಸಾಲಿನ ಪದವಿ ಪೂರ್ವ ಕಾಲೇಜುಗಳ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಎತ್ತರ ಜಿಗಿತ ಸ್ಪರ್ಧೆಯಿಂದ ಹಾಗೂ ತ್ರಿವಿದ ಜಿಗಿತದಲ್ಲಿ ಪ್ರಥಮ ಸ್ಥಾನ ಪಡೆದುಕೊಂಡಿರುವ ವಿದ್ಯಾರ್ಥಿ ಪಿ.ಎನ್.ಸಂತೋಷರನ್ನು ಎಕ್ಸ್ಪರ್ಟ್ ಪಿಯು ಕಾಲೇಜು ಆಡಳಿತ ಮಂಡಳಿ ವತಿಯಿಂದ ಸನ್ಮಾನಿಸಿದರು.

ಈ ವೇಳೆ ಮಾತನಾಡಿದ ಶ್ರೀನಿವಾಸ್ ಚಿಕ್ಕಬಳ್ಳಾಪುರದಲ್ಲಿ ನಡೆದಿರುವ ಜಿಲ್ಲಾ ಮಟ್ಟದ ಕ್ರೀಡಾ ಕೂಟದಲ್ಲಿ ಪ್ರಥಮ ಸ್ಥಾನ ಪಡೆದುಕೊಂಡು ರಾಜ್ಯಮಟ್ಟದ ಕ್ರೀಡಾಕೂಟಕ್ಕೆ ಅಯ್ಕೆಯಾಗಿರುವ ವಿದ್ಯಾರ್ಥಿಗಳ ಸಾಧನೆಯಿಂದ ಗಡಿ ಭಾಗದ ಬಾಗೇಪಲ್ಲಿ ತಾಲೂಕಿನ ಕಾಲೇಜುಗಳಿಗೆ ಕೀರ್ತಿ ಓದಗಿ ಬಂದಿದೆ.

ಮುಂದಿನ ದಿನಗಳಲ್ಲಿ ಉತ್ತಮ ಸಾಧನೆ ಮಾಡಿ ರಾಜ್ಯಮಟ್ಟದಲ್ಲಿ ಪ್ರಥಮ ಸ್ಥಾನ ಗಳಿಸಿಕೊಂಡು ರಾಷ್ಟೀಯ ಮಟ್ಟಕ್ಕೆ ಅಯ್ಕೆಯಾಗಿ ರಾಜ್ಯಮಟ್ಟದಲ್ಲಿ ಹೆಸರು ಗಳಿಸಿ ತಾಲೂಕಿಗೆ ಅವರದ್ದೆ ಆದ ಕೊಡುಗೆ ನೀಡುವ ಶಕ್ತಿ ಅವರಿಗೆ ಸಿಗಲಿ. ಗಡಿ ಭಾಗದ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳ ಸಾಧನೆ ಇತರೆ ವಿದ್ಯಾರ್ಥಿಗಳಿಗೆ ಮಾದರಿ ಆಗಬೇಕಾಗಿದೆ, ವಿದ್ಯಾರ್ಥಿಗಳು ಪಠ್ಯದ ಜೊತೆಗೆ ಕ್ರೀಡೆ ಯನ್ನು ರೂಡಿಸಿಕೊಂಡು ಕೀರ್ತಿ ಹೆಚ್ಚಿಸಿಕೊಳ್ಳಬೇಕಾಗಿದೆ. ಕ್ರೀಡೆಯಿಂದ ವಿದ್ಯಾರ್ಥಿಗಳಲ್ಲಿ ದೈಹಿಕ ಶಕ್ತಿ ಹೆಚ್ಚಾಗಿ ಆರೋಗ್ಯವಂತರಾಗಿರಲು ಸಹಕಾರಿಯಾಗಲಿದೆ ಎಂದರು.

ಎಕ್ಸ್ಪರ್ಟ್ ಕಾಲೇಜು ವಿದ್ಯಾರ್ಥಿ ಹಾಗೂ ಕ್ರೀಡಾಪಟು ಎಂ.ಎಸ್.ಅರವಿಂದ ಮಾತನಾಡಿ, ನಾನು ಮತ್ತು ನನ್ನ ಸ್ನೇಹಿತ ಸಂತೋಷ್ ಹತ್ತನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ವೇಳೆ ರಾಜ್ಯ ಮಟ್ಟದ ಕ್ರೀಡಾ ಕೂಟಕ್ಕೆ ಅಯ್ಕೆಯಾಗಿ ರಾಜ್ಯಮಟ್ಟದಲ್ಲಿ ಸೋಲು ಅನುಭವಿಸಿದ್ದೆವು, ಎರಡು ವರ್ಷಗಳ ನಂತರ ನಮಗಿಬ್ಬರಿಗೂ ರಾಜ್ಯ ಮಟ್ಟದ ಕ್ರೀಡಾ ಕೂಟದಲ್ಲಿ ಸ್ಪರ್ಧಿಸುವ ಅವಕಾಶ ಸಿಕ್ಕಿದ್ದು, ಕಠಿಣ ಶ್ರಮಪಟ್ಟು ರಾಜ್ಯಮಟ್ಟದ ಪ್ರಶಸ್ತಿಯನ್ನು ಪಡೆದುಕೊಂಡು ಉತ್ತಮ ಸಾಧನೆ ಮಾಡುವ ಗುರಿಹೊಂದಿದ್ದೇವೆ, ಮುಂದಿನ ದಿನಗಳಲ್ಲಿ ನಮ್ಮ ಶ್ರಮಕ್ಕೆ ಪ್ರತಿಪಲ ಸಿಗಲಿದೆ ಎಂದರು.

ಈ ಸಂದರ್ಭದಲ್ಲಿ ಎಕ್ಸ್ಪರ್ಟ್ ಪಿಯು ಕಾಲೇಜು ಆಡಳಿತ ಮಂಡಳಿ ಅಧ್ಯಕ್ಷ ಎಸ್.ಆರ್.ನಾಗೇಶ್, ಕಾರ್ಯದರ್ಶಿ ಮಂಜುನಾಥ, ಪ್ರಾಂಶುಪಾಲ ಕೆ.ಶಿವಪ್ಪ ಹಾಗೂ ಉಪಾನ್ಯಸಕ ವರ್ಗದವರು ಇದ್ದರು.

ಇದನ್ನೂ ಓದಿ: Chickballapur News: ಅದಾನಿ ಕೌಶಲ್ಯ ಅಭಿವೃದ್ಧಿ ಕೇಂದ್ರದಿಂದ 100% ಉದ್ಯೋಗಕ್ಕೆ ಬೆಂಬಲ, 20 ಮಂದಿ ಪ್ರಶಿಕ್ಷಣಾರ್ಥಿ ಗಳಿಗೆ ಉದ್ಯೋಗ