Thursday, 19th September 2024

CM Siddaramaiah: ಉಪಕುಲಪತಿ ನೇಮಕ ನಿರ್ಧಾರ ರಾಜ್ಯಪಾಲರಿಂದ ತನ್ನ ಕೈಗೆ ತೆಗೆದುಕೊಂಡ ರಾಜ್ಯ ಸರ್ಕಾರ

Cabinet Meeting

ಕಲಬುರಗಿ: ವಿಶ್ವವಿದ್ಯಾನಿಲಯದ ಉಪ ಕುಲಪತಿ (Vice Chancellor) ನೇಮಕದ ನಿರ್ಧಾರವನ್ನು ರಾಜ್ಯ ಸರ್ಕಾರ ತನ್ನ ಸುಪರ್ದಿಗೆ ಪಡೆಯುವ ಬಗ್ಗೆ ಸಿಎಂ ಸಿದ್ದರಾಮಯ್ಯ (CM Siddaramaiah) ನೇತೃತ್ವದಲ್ಲಿ ಕಲಬುರಗಿಯಲ್ಲಿ ನಡೆದ (Kalaburagi news) ಸಚಿವ ಸಂಪುಟ ಸಭೆಯಲ್ಲಿ (Cabinet meeting) ನಿರ್ಧಾರ ಕೈಗೊಳ್ಳಲಾಗಿದೆ. ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ವಿಶ್ವವಿದ್ಯಾಲಯದ ಉಪ ಕುಲಪತಿ ನೇಮಕದ ತೀರ್ಮಾನ ಈ ಮೂಲಕ ಕೈಗೊಳ್ಳಲಾಗಿದೆ.

ಈ ಮೂಲಕ ಇದುವರೆಗೂ ರಾಜ್ಯಪಾಲರಿಗೆ ಇದ್ದ ಅಧಿಕಾರವನ್ನು ರಾಜ್ಯ ಸರ್ಕಾರ ತನ್ನ ಸುಪರ್ದಿಗೆ ತೆಗೆದುಕೊಂಡಂತಾಗಿದೆ. ‘ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯ ತಿದ್ದುಪಡಿ ವಿಧೇಯಕ 2024’ಕ್ಕೆ ಸಚಿವ ಸಂಪುಟ ಅನುಮೋದನೆ ನೀಡಿದ್ದು, ಇದರಿಂದ ಕುಲಪತಿ ನೇಮಕ ಮಾಡಲು ರಾಜ್ಯ ಸರ್ಕಾರಕ್ಕೆ ಅವಕಾಶ ದೊರೆಯುತ್ತಿದೆ.

ಈಗಿರುವ ನಿಯಮಗಳ ಪ್ರಕಾರ ರಾಜ್ಯದ ಎಲ್ಲ ವಿಶ್ವವಿದ್ಯಾಲಯಗಳ ಕುಲಪತಿಗಳು ರಾಜ್ಯಪಾಲರೇ ಆಗಿರುತ್ತಾರೆ. ಉಪ ಕುಲಪತಿಗಳ ನೇಮಕ ಅವರ ವ್ಯಾಪ್ತಿಗೆ ಬರುತ್ತದೆ. ‘ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವ ವಿದ್ಯಾಲಯ ತಿದ್ದುಪಡಿ ವಿಧೇಯಕ 2024’ ವಿಧಾನಸಭೆಯಲ್ಲಿ ಅನುಮೋದನೆಗೊಂಡರೆ ರಾಜ್ಯಪಾಲರ ಈ ಒಂದು ಅಧಿಕಾರ ಇಲ್ಲವಾಗುತ್ತದೆ. ಹೊರತುಪಡಿಸಿ ಇತರ ಅಧಿಕಾರಗಳು ಹಾಗೇ ಉಳಿಯುತ್ತವೆ.

ಇದನ್ನು, ಮುಡಾ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ ರಾಜ್ಯಪಾಲರ ವಿರುದ್ಧ ಸಿಡಿದೆದ್ದ ಕ್ಯಾಬಿನೆಟ್‌ನ ಕ್ರಮ ಎಂದೇ ವ್ಯಾಖ್ಯಾನಿಸಲಾಗುತ್ತಿದೆ. ಕಾಂಗ್ರೆಸ್ ನಾಯಕರು ಇದನ್ನು ವಿರೋಧಿಸಿ ರಾಜಭವನ ಚಲೋ ಹಮ್ಮಿಕೊಂಡಿದ್ದರು. ಜೊತೆಗೆ ಹಿಂದಿನ ಬಿಜೆಪಿ ಸರ್ಕಾರದ ಅವಧಿಯ ಪ್ರಕರಣಗಳ ಪ್ರಾಸಿಕ್ಯೂಷನ್​ಗೆ ಅನುಮತಿ ನೀಡುವಂತೆ ರಾಜ್ಯಪಾಲರನ್ನು ಆಗ್ರಹಿಸಿದ್ದರು. ಇದಾದ ಕೆಲವು ದಿನಗಳ ನಂತರ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದಿದ್ದ ರಾಜ್ಯಪಾಲರು, 20-05-2023 ರಿಂದ, ಅಂದರೆ ಕಾಂಗ್ರೆಸ್ ಸರ್ಕಾರ ರಚನೆಯಾದ ನಂತರ ಈವರೆಗೆ ಲೋಕಾಯುಕ್ತ ಸಂಸ್ಥೆಯಿಂದ ಸ್ವೀಕೃತವಾಗಿರುವ ಸ್ವೀಕೃತಗೊಂಡಿರುವ ಪ್ರಕರಣಗಳ ಮಾಹಿತಿ ನೀಡುವಂತೆ ಕೋರಿದ್ದರು.

ಇದನ್ನೂ ಓದಿ: Arvind Kejriwal: ಸಿಎಂ ಸ್ಥಾನದಿಂದ ಕೆಳಗಿಳಿದ ಕೇಜ್ರಿವಾಲ್‌; ಲೆಫ್ಟಿನೆಂಟ್‌ ಗವರ್ನರ್‌ಗೆ ರಾಜೀನಾಮೆ ಸಲ್ಲಿಕೆ