Friday, 22nd November 2024

R Ashok: ಕಾಂಗ್ರೆಸ್‌ ಸರ್ಕಾರದ ಮತ್ತೊಂದು ʼಅದ್ಧೂರಿʼ ಹಗರಣಕ್ಕೆ ದಸರಾ ವೇದಿಕೆಯಾಗದಿರಲಿ; ಆರ್‌. ಅಶೋಕ್‌ ವ್ಯಂಗ್ಯ

R Ashok

ಬೆಂಗಳೂರು: ನಾಡಹಬ್ಬ ಮೈಸೂರು ದಸರಾ ಉತ್ಸವವನ್ನು (Mysore Dasara) ಅದ್ಧೂರಿಯಾಗಿ ಆಚರಿಸಬೇಕು ಎಂಬ ಸರ್ಕಾರದ ನಿರ್ಧಾರ ಸ್ವಾಗತಾರ್ಹ. ಆದರೆ ಅದ್ಧೂರಿ ದಸರಾ, ಕಾಂಗ್ರೆಸ್‌ ಸರ್ಕಾರದ (Congress Government) ಮತ್ತೊಂದು ಅದ್ಧೂರಿ ಹಗರಣಕ್ಕೆ ವೇದಿಕೆ ಆಗದಿರಲಿ ಎನ್ನುವುದೇ ಕನ್ನಡಿಗರ ಆಶಯ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ (R Ashok) ಹೇಳಿದ್ದಾರೆ.

ಈ ಕುರಿತು ಬುಧವಾರ ತಮ್ಮ ʼಎಕ್ಸ್‌ʼ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, ಕಳೆದ ವರ್ಷ ಅಂತಾರಾಷ್ಟ್ರೀಯ ಖ್ಯಾತಿಯ ಸರೋದ್ ವಾದಕ ಪಂಡಿತ್ ತಾರಾನಾಥ್ ಅವರ ಬಳಿಯೂ ಪರ್ಸಂಟೇಜ್ ಕಮಿಷನ್ ಕೇಳಿ ಕರ್ನಾಟಕದ ಮಾನ ಹಾರಾಜು ಹಾಕಿದ್ದ ಕಾಂಗ್ರೆಸ್ ಸರ್ಕಾರ, ಈ ವರ್ಷವಾದರೂ ನಾಡಹಬ್ಬ ದಸರಾ ಮಹೋತ್ಸವಕ್ಕೆ ಭ್ರಷ್ಟಾಚಾರದ ಸೋಂಕು ತಗುಲಿಸದೆ ನಾಡಿನ ಸಂಸ್ಕೃತಿ, ಪರಂಪರೆಯ ಗೌರವ ಉಳಿಸುತ್ತೋ ಅಥವಾ ಈ ವರ್ಷವೂ ಮತ್ತೊಂದು ಭ್ರಷ್ಟಾಚಾರದ ಅಂಬಾರಿ ಹೊತ್ತು ಕನ್ನಡಿಗರ ಮಾನ ಕಳಿಯುತ್ತೋ ಕಾದು ನೋಡಬೇಕು ಎಂದು ಹೇಳಿದ್ದಾರೆ.

ಈ ಸುದ್ದಿಯನ್ನೂ ಓದಿ | Bengaluru Space Expo 2024: ಬೆಂಗಳೂರು ಸ್ಪೇಸ್‌ ಎಕ್ಸ್‌ಪೊ ಇಂದಿನಿಂದ ಆರಂಭ

ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ ಅಂದರೆ ಅದು ಕರ್ನಾಟಕದ ಭವ್ಯ ಸಾಂಸ್ಕೃತಿಕ ಪರಂಪರೆಯ ಪ್ರತೀಕ. ಇಡೀ ದೇಶವೇ, ಪ್ರಪಂಚವೇ ಎದುರು ನೋಡುವ ಇಂತಹ ಉತ್ಸವವನ್ನು ರಾಜ್ಯ ಸರ್ಕಾರ ಅತ್ಯಂತ ಆಸಕ್ತಿ, ಶ್ರದ್ಧೆ, ಭಕ್ತಿಗಳಿಂದ ಆಚರಿಸಬೇಕು. ಇಲ್ಲವಾದರೆ ಈ ಸರ್ಕಾರ ಆ ತಾಯಿ ಚಾಮುಂಡೇಶ್ವರಿಯ ಶಾಪಕ್ಕೆ ಗುರಿಯಾಗುವುದು ನಿಶ್ಚಿತ ಎಂದಿದ್ದಾರೆ.