Thursday, 19th September 2024

HD Kumaraswamy: ಒಂದು ರಾಷ್ಟ್ರ, ಒಂದು ಚುನಾವಣೆಗೆ ಜೆಡಿಎಸ್ ಸ್ವಾಗತ; ಇದು ಪ್ರಧಾನಿ ಮೋದಿಯವರ ಐತಿಹಾಸಿಕ ನಿರ್ಧಾರ ಎಂದ ಎಚ್‌.ಡಿ.ಕೆ

HD Kumaraswamy

ನವದೆಹಲಿ: ಒಂದು ರಾಷ್ಟ್ರ, ಒಂದು ಚುನಾವಣೆ ಭಾರತೀಯ ಚುನಾವಣಾ ವ್ಯವಸ್ಥೆ ಸುಧಾರಣೆಗೆ ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರು ಇರಿಸಿರುವ ಐತಿಹಾಸಿಕ ಹೆಜ್ಜೆ ಎಂದು ಕೇಂದ್ರದ ಭಾರೀ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಎಚ್.ಡಿ. ಕುಮಾರಸ್ವಾಮಿ (HD Kumaraswamy) ತಿಳಿಸಿದ್ದಾರೆ. ಒಂದು ರಾಷ್ಟ್ರ, ಒಂದು ಚುನಾವಣೆ ಭಾರತೀಯ ಚುನಾವಣಾ ವ್ಯವಸ್ಥೆಯನ್ನು ಜಾತ್ಯತೀತ ಜನತಾದಳ (ಜೆಡಿಎಸ್) ಪಕ್ಷ (JDS Party) ಸ್ವಾಗತಿಸುತ್ತದೆ ಎಂದು ಸಚಿವರು ಇದೇ ವೇಳೆ ತಿಳಿಸಿದರು. ನವದೆಹಲಿಯ ಭಾರತ್ ಮಂಟಪದಲ್ಲಿ ಭಾರೀ ಕೈಗಾರಿಕೆ ಸಚಿವಾಲಯ ಹಮ್ಮಿಕೊಂಡಿದ್ದ ಎಲೆಕ್ಟ್ರಿಕ್ ವಾಹನಗಳ ಕುರಿತ ಸಭೆಯಲ್ಲಿ ಪಾಲ್ಗೊಂಡ ನಂತರ ಸಚಿವರು ಮಾಧ್ಯಮಗಳೊಂದಿಗೆ ಮಾತನಾಡಿದರು.

ಈ ಸುದ್ದಿಯನ್ನೂ ಓದಿ | HD Kumaraswamy: ಹೆಚ್ಚಿನ ಆಮದು ಸುಂಕ ಹೇರುವ ಮೂಲಕ ಚೀನಾ ಉಕ್ಕಿಗೆ ಕಡಿವಾಣ

ಲೋಕಸಭೆ ಮತ್ತು ವಿಧಾನಸಭೆಗಳಿಗೆ ಏಕಕಾಲಕ್ಕೆ ಚುನಾವಣೆ ನಡೆಸುವ ಬಗ್ಗೆ ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರ ಅಧ್ಯಕ್ಷತೆಯಲ್ಲಿ ಸಮಿತಿ ರಚನೆ ಮಾಡಲಾಗಿತ್ತು. ಸಮಿತಿ ವರದಿ ನೀಡಿದೆ. ಈ ವರದಿಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ತಿಳಿಸಿದರು.

ಈ ಸುದ್ದಿಯನ್ನೂ ಓದಿ | JioPhone Prima 2: ಜಿಯೊದಿಂದ ಹಳೇ ಮಾಡೆಲ್‌ನಲ್ಲೇ ಸ್ಮಾರ್ಟ್‌ ಫೋನ್‌! ದರ ಕೇವಲ 2799 ರೂ!

ನರೇಂದ್ರ ಮೋದಿ ಅವರ ಸರ್ಕಾರ ಮೂರನೇ ಅವಧಿಗೆ ಅಧಿಕಾರಕ್ಕೆ ಬಂದ ನೂರು ದಿನಗಳಲ್ಲಿ ಚುನಾವಣೆ ಸಂದರ್ಭದಲ್ಲಿ ಭರವಸೆ ನೀಡಿದಂತೆಯೇ ಸಂಪುಟವು ಈ ಐತಿಹಾಸಿಕ ನಿರ್ಧಾರ ಕೈಗೊಂಡಿದೆ ಎಂದು ಅವರು ಹೇಳಿದರು.