ಚಿಕ್ಕಬಳ್ಳಾಪುರ: ಸಾರ್ವಜನಿಕರು ಇ-ಆಸ್ತಿ ಸಂಯೊಜನೆಯ ಸದುಪಯೋಗ ಪಡೆದುಕೊಳ್ಳುವಂತೆ ಜಿಲ್ಲಾಧಿಕಾರಿ ಪಿ.ಎನ್. ರವೀಂದ್ರ ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.
ಕೃಷಿ ಜಮೀನಿನ ನೋಂದಣಿಗೆ ಭೂಮಿ ತಂತ್ರಾಂಶದೊಂದಿಗೆ 2006 ರಿಂದಲೇ ನೋಂದಣಿ ಮತ್ತು ಮುದ್ರಾಂಕ ಇಲಾಖೆಯ ಕಾವೇರಿ ತಂತ್ರಾಂಶವನ್ನು ಸಂಯೋಜನೆ ಮಾಡಲಾಗಿರುತ್ತದೆ.
ಜಮೀನಿನ ಸರ್ವೆ ನಕ್ಷೆ (ಸ್ಕೆಚ್)-ನಮೂನೆ 11 ಇ ಇರುವ ಮೋಜಣಿ ತಂತ್ರಾಂಶದೊಂದಿಗೆ ಹಾಗೂ ಕಾವೇರಿ ತಂತ್ರಾಂಶವನ್ನು ದಿನಾಂಕ:೦೫/೧೦/೨೦೧೬ ರಿಂದ ಸಂಯೋಜನೆ ಮಾಡಲಾಗಿದೆ.
ಗ್ರಾಮ ಪಂಚಾಯತ ವ್ಯಾಪ್ತಿಯ ಕೃಷಿಯೇತರ ಸ್ವತ್ತುಗಳ ದಸ್ತಾವೇಜುಗಳ ನೋಂದಣಿಗಾಗಿ ಇ-ಸ್ವತ್ತು ತಂತ್ರಾಂಶವನ್ನು ದಿನಾಂಕ:೧೮/೦೭/೨೦೧೪ ರ ಸುತ್ತೋಲೆಯಂತೆ ಸಂಯೋಜನೆಗೊಳಿಸಲಾಗಿದೆ.
ಈ ಮೇಲೆ ಕಾಣಿಸಿದ ಆಸ್ತಿಗಳನ್ನು ಹೊರತು ಪಡಿಸಿ ಅಂದರೆ ನಗರ ಪ್ರದೇಶಗಳಲ್ಲಿನ ಕೃಷಿಯೇತರ ಆಸ್ತಿಗಳಿಗೆ ಸಂಬಂಧಿಸಿದಂತೆ ಇ-ಆಸ್ತಿ (ತಂತ್ರಾಂಶ) ವನ್ನು ರೂಪಿಸಿದ್ದು ಇ-ಆಸ್ತಿ ತಂತ್ರಾಂಶವನ್ನು ನೋಂದಣಿ ಮತ್ತು ಮುದ್ರಾಂಕ ಇಲಾಖೆಯ ಕಾವೇರಿ ೨.೦ ತಂತ್ರಾಂಶದೊಂದಿಗೆ ಪ್ರಾಯೋಗಿಕವಾಗಿ ರಾಮನಗರ ಮತ್ತು ಕನಕಪುರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಸ್ವತ್ತುಗಳಿಗೆ ಸಂಬಂಧಿಸಿದಂತೆ ಕಾವೇರಿ-೨.೦ ತಂತ್ರಾಂಶದೊಂದಿಗೆ ಸಂಯೋಜನೆ ಮಾಡಿ ದಿನಾಂಕ:೨೯/೦೧/೨೦೨೦ ರಿಂದ ನೋಂದಣಿ ಮಾಡುತ್ತಿರುವುದು ಯಶಸ್ವಿಯಾಗಿರುತ್ತದೆ.
ನಗರಾಭಿವೃದ್ಧಿ ಇಲಾಖೆಯು ಚಿಕ್ಕಬಳ್ಳಾಪುರ ಜಿಲ್ಲೆಯ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಆಸ್ತಿಗಳ ಹಕ್ಕು ವರ್ಗಾವಣೆಗೆ ಸಂಬಂಧಿಸಿದಂತೆ ಇ-ಆಸ್ತಿ ತಂತ್ರಾಂಶ ಮತ್ತು ಕಾವೇರಿ ತಂತ್ರಾಂಶವನ್ನು ಸಂಯೋಜನೆ ಮಾಡಲು ಸಮ್ಮತಿ ನೀಡಿರುತ್ತಾರೆ.
ಮುಂದುವರೆದು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯ ಸ್ಥಿರಾಸ್ಥಿಗಳ ನೋಂದಣಿ ಯನ್ನು ಇ-ಆಸ್ತಿ ತಂತ್ರಾಂಶದಿಂದ ಕಡ್ಡಾಯವಾಗಿ ಮಾಹಿತಿ ಪಡೆದು ನೋಂದಾಯಿಸಲು ಇ-ಆಸ್ತಿ ತಂತ್ರಾ0ಶವನ್ನು ಕಾವೇರಿ-೨ ತಂತ್ರಾಂಶದೊಂದಿಗೆ ದಿನಾಂಕ : ೨೩-೦೯-೨೦೨೪ ರಿಂದ ಜಾರಿಗೆ ಬರುವಂತೆ ಸರ್ಕಾರದ ಆದೇಶ ಸಂಖ್ಯೆ: ಕಂಇ/೨೦/ಎAಎ???Aಯು/೨೦೨೩, ದಿನಾಂಕ:೧೭-೦೯-೨೦೨೪ ರ ಆದೇಶದ ಮೂಲಕ ಆದೇಶಿಸಲಾಗಿದೆ. ಆದಕಾರಣ ದಿನಾಂಕ: ೨೩-೦೯-೨೦೨೪ ರಿಂದ ಚಿಕ್ಕಬಳ್ಳಾಪುರ ಜಿಲ್ಲಾ ವ್ಯಾಪ್ತಿಯ ಎಲ್ಲಾ ಉಪನೋಂದಣಿ ಕಚೇರಿಗಳಲ್ಲಿ ನಗರ ಸ್ಥಳಿಯ ಸಂಸ್ಥೆಗಳ ಆಸ್ತಿಯನ್ನು ನೊಂದಾಯಿಸಲು ಆಸ್ತಿಯ ಮಾಹಿತಿ ಯನ್ನು ಕಡ್ಡಾಯವಾಗಿ ಇ-ಆಸ್ತಿ ತಂತ್ರಾಂಶದಿಂದಲೇ ಪಡೆಯಬೇಕಿರುತ್ತದೆ.
ಇ-ಖಾತಾ ಸಂಯೋಜನೆಯಿಂದ ಸಾರ್ವಜನಿಕರಿಗೆ ಈ ಕೆಳಕಂಡ ಉಪಯೋಗಗಳಾಗುತ್ತದೆ.
- ಇ-ಆಸ್ತಿ ತಂತ್ರಾಂಶದಿಂದಾಗಿ ಸ್ವತ್ತುಗಳ ನೋಂದಣಿ ವೇಳೆ ಸಾರ್ವಜನಿಕರು ಮೋಸ ಹೋಗುವುದನ್ನು ತಡೆಯುವುದು.
- ಇ-ಖಾತಾದಿಂದ ಮಾತ್ರ ಸ್ವತ್ತಿನ ಸ್ವರೂಪ ಮತ್ತು ನೈಜ ಮಾಲೀಕರನ್ನು ಗುರುತಿಸಲು ಸಾಧ್ಯ.
- ನೈಜ ಮಾಲೀಕರಿಗೆ ವಂಚಿಸಿ ಬೇರೆಯವರಿಂದ ಸ್ವತ್ತುಗಳ ನೋಂದಣಿಯನ್ನು ತಪ್ಪಿಸುವುದು.
- ಸ್ವತ್ತುಗಳ ಖರೀದಿದಾರರಿಗೆ ಸ್ವತ್ತಿನ ನೈಜ ಮಾಲೀಕರನ್ನು ಗುರುತಿಸುವುದು.
- ಭವಿಷ್ಯದಲ್ಲಿ ಉಂಟಾಗಬಹುದಾದ ವ್ಯಾಜ್ಯ, ಕಾನೂನು ತೊಂದರೆಗಳನ್ನು ತಪ್ಪಿಸುವುದು.
ಆದ್ದರಿಂದ ಸಾರ್ವಜನಿಕರು ಇ-ಆಸ್ತಿ ಸಂಯೊಜನೆಯ ಸದುಪಯೋಗವನ್ನು ಪಡೆದುಕೊಳ್ಳುವಂತೆ ಜಿಲ್ಲಾಧಿಕಾರಿ ಪಿ.ಎನ್. ರವೀಂದ್ರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.