Friday, 20th September 2024

Department of Agriculture: ಕೃಷಿ ಇಲಾಖೆಯ 945 ಗ್ರೂಪ್ ಬಿ ಹುದ್ದೆಗಳಿಗೆ ಅರ್ಜಿ ಆಹ್ವಾನ; ವಿದ್ಯಾರ್ಹತೆ, ಶುಲ್ಕದ ವಿವರ ಇಲ್ಲಿದೆ

Department of Agriculture

ಬೆಂಗಳೂರು: ಕೃಷಿ ಇಲಾಖೆಯಲ್ಲಿ ಒಟ್ಟು 945 ಕೃಷಿ ಅಧಿಕಾರಿಗಳು ಹಾಗೂ ಸಹಾಯಕ ಕೃಷಿ ಅಧಿಕಾರಿಗಳನ್ನೊಳಗೊಂಡ ಗ್ರೂಪ್ ಬಿ ಹುದ್ದೆಗಳ ಭರ್ತಿಗೆ (Department of Agriculture) ಕರ್ನಾಟಕ ಲೋಕಸೇವಾ ಆಯೋಗ ಅಧಿಸೂಚನೆ ಹೊರಡಿಸಿದೆ. ಅರ್ಹ ಅಭ್ಯರ್ಥಿಗಳು ಅ.7 ರಿಂದ ನ.7 ರೊಳಗೆ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇರಬೇಕಾದ ವಿದ್ಯಾರ್ಹತೆ, ಅರ್ಜಿ ಶುಲ್ಕ, ವಯೋಮಿತಿ ಸೇರಿ ನೇಮಕಾತಿಯ ಸಂಪೂರ್ಣ ಮಾಹಿತಿ ಇಲ್ಲಿದೆ.

ನೇಮಕಾತಿ ವಿವರ

ಹುದ್ದೆಯ ಹೆಸರು: ಕೃಷಿ ಅಧಿಕಾರಿ+ ಸಹಾಯಕ ಕೃಷಿ ಅಧಿಕಾರಿ
ಇಲಾಖೆ ಹೆಸರು: ಕೃಷಿ ಇಲಾಖೆ
ಒಟ್ಟು ಹುದ್ದೆಗಳ ಸಂಖ್ಯೆ: 945 ಗ್ರೂಪ್ ಬಿ
ಉಳಿಕೆ ಮೂಲ ಮೂಲವೃಂದ: ಕೃಷಿ ಅಧಿಕಾರಿ 86 + ಸಹಾಯಕ ಕೃಷಿ ಅಧಿಕಾರಿ 586
ಹೈದರಾಬಾದ್‌ ಕರ್ನಾಟಕ: ಕೃಷಿ ಅಧಿಕಾರಿ 42 + ಸಹಾಯಕ ಕೃಷಿ ಅಧಿಕಾರಿ 231

ವೇತನ ಶ್ರೇಣಿ:
ಕೃಷಿ ಅಧಿಕಾರಿ: 43,100-83,900 ರೂ.
ಸಹಾಯಕ ಕೃಷಿ ಅಧಿಕಾರಿ: 40,900- 78,200 ರೂ.

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಕೆ ಆರಂಭ: ಅಕ್ಟೋಬರ್ 7
ಅರ್ಜಿ ಸಲ್ಲಿಕೆಗೆ ಕೊನೆ ದಿನಾಂಕ: ನವೆಂಬರ್‌ 7

ಅರ್ಜಿ ಶುಲ್ಕ
ಸಾಮಾನ್ಯ ಅಭ್ಯರ್ಥಿಗಳಿಗೆ: 600 ರೂ.
ಪ್ರವರ್ಗ 2ಎ, 2ಬಿ, 3ಎ, 3ಬಿ (ಒಬಿಸಿ): 300 ರೂ.
ಮಾಜಿ ಸೈನಿಕ ಅಭ್ಯರ್ಥಿಗಳಿಗೆ: 50 ರೂ.
ಎಸ್‌ಸಿ, ಎಸ್‌ಟಿ, ಪ್ರವರ್ಗ-1, ವಿಶೇಷ ಚೇತನರು: ಶುಲ್ಕ ವಿನಾಯಿತಿ

ಶೈಕ್ಷಣಿಕ ವಿದ್ಯಾರ್ಹತೆ
ಕೃಷಿ ಅಧಿಕಾರಿಗಳು+ ಸಹಾಯಕ ಕೃಷಿ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಭರ್ತಿ ಮಾಡಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅನುಸೂಚಿಯಲ್ಲಿ ನಮೂದಿಸಿರುವ ವಿದ್ಯಾರ್ಹತೆಯನ್ನು ಅಭ್ಯರ್ಥಿಗಳು ಹೊಂದಿರಲೇಬೇಕು. ವಿದ್ಯಾರ್ಹತೆಯನ್ನು ಹೊಂದದೆ ಹೆಚ್ಚಿನ ವಿದ್ಯಾರ್ಹತೆಯನ್ನು ಹೊಂದಿದ್ದರೂ ಸಹ ಪರಿಗಣಿಸಲಾಗುವುದಿಲ್ಲ.

ಶೇ. 85 ಹುದ್ದೆಗಳಿಗೆ: ಬಿ.ಎಸ್ಸಿ ಕೃಷಿ ಅಥವಾ ಬಿ.ಎಸ್ಸಿ (ಆನರ್ಸ್) ಕೃಷಿ ಪದವಿ ಉತ್ತೀರ್ಣರಾಗಿರಬೇಕು.

ಶೇ. 15 ರಷ್ಟು ಹುದ್ದೆಗಳಿಗೆ:
1) ಬಿ.ಟೆಕ್ (ಆಹಾರ ವಿಜ್ಞಾನ ಮತ್ತು ತಂತ್ರಜ್ಞಾನ) ಅಥವಾ
2) ಬಿ.ಟೆಕ್ (ಆಹಾರ ತಂತ್ರಜ್ಞಾನ) ಅಥವಾ
3) ಬಿ.ಎಸ್ಸಿ (ಕೃಷಿ ಮಾರುಕಟ್ಟೆ ಮತ್ತು ಸಹಕಾರ) ಅಥವಾ
4) ಬಿ.ಎಸ್ಸಿ (ಆನರ್ಸ್) ಕೃಷಿ ಮಾರಾಟ ಮತ್ತು ಸಹಕಾರ ಅಥವಾ
5) ಬಿ.ಎಸ್ಸಿ (ಆನರ್ಸ್) ಅಗ್ರಿ ಬಿಸಿನೆಸ್ ಮ್ಯಾನೇಜ್ ಮೆಂಟ್ ಅಥವಾ
6) ಬಿ.ಎಸ್ಸಿ (ಕೃಷಿ ಜೈವಿಕ ತಂತ್ರಜ್ಞಾನ) ಅಥವಾ
7) ಬಿಟೆಕ್ (ಜೈವಿಕ ತಂತ್ರಜ್ಞಾನ) ಅಥವಾ
8) ಬಿ.ಎಸ್ಸಿ (ಅಗ್ರಿಕಲ್ಪರಲ್ ಎಂಜಿನಿಯರಿಂಗ್) ಅಥವಾ
9) ಬಿ.ಟೆಕ್ (ಆಗ್ರಿಕಲ್ಪರಲ್ ಎಂಜಿನಿಯರಿಂಗ್).

ವಯೋಮಿತಿ:
ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಕನಿಷ್ಠ – 18 ವರ್ಷ ವಯೋಮಾನದವರಾಗಿರಬೇಕು. ಇನ್ನು ರಾಜ್ಯ ಸರ್ಕಾರವು ಸೆ.10ರಂದು ಜಾರಿ ಮಾಡಿರುವ ಆದೇಶದಲ್ಲಿ ಎಲ್ಲಾ ಪ್ರವರ್ಗಗಳಿಗೆ ಒಂದು ಬಾರಿಗೆ ಅನ್ವಯಿಸುವಂತೆ ವಯೋಮಿತಿಯಲ್ಲಿ 03 ವರ್ಷಗಳ ಸಡಿಲಿಕೆ ನೀಡಿರುತ್ತದೆ. ಅದನ್ನು ಅಳವಡಿಸಿಕೊಂಡ ನಂತರ ಅಭ್ಯರ್ಥಿಗಳು ಕೆಳಕಂಡ ಗರಿಷ್ಠ ವಯೋಮಿತಿಯನ್ನು ಮೀರಿರಬಾರದು.

ಸಾಮಾನ್ಯ ಅರ್ಹತೆ: 38 ವರ್ಷ
ಪ್ರವರ್ಗ 2ಎ, 2ಬಿ, 3ಎ, 3ಬಿ: 41 ವರ್ಷ
ಪ.ಜಾ, ಪ.ಪಂ, ಪ್ರವರ್ಗ-1: 43 ವರ್ಷ

ಸ್ಪರ್ಧಾತ್ಮಕ ಪರೀಕ್ಷಾ ವಿಧಾನ, ಪಠ್ಯಕ್ರಮ ಸೇರಿ ನೇಮಕಾತಿ ಕುರಿತ ಹೆಚ್ಚಿನ ಮಾಹಿತಿಗಾಗಿ ಕೆಪಿಎಸ್‌ಸಿ ವೆಬ್‌ಸೈಟ್‌ಗೆ ಭೇಟಿ ನೀಡಿ

ದೊಡ್ಡಪ್ರಮಾಣದಲ್ಲಿ ಅಧಿಕಾರಿಗಳ ನೇಮಕಾತಿ

ಕೃಷಿ ಸಚಿವರಾದ ಎನ್. ಚಲುವರಾಯಸ್ವಾಮಿ ಅವರ ವಿಶೇಷ ಪ್ರಯತ್ನದ ಫಲವಾಗಿ ಈ ನೇಮಕಾತಿ ಪ್ರಕ್ರಿಯೆಗೆ ಚಾಲನೆ ದೊರೆತಿದೆ. ಇಲಾಖೆ ಇತಿಹಾಸದಲ್ಲಿ ಇಷ್ಟು ದೊಡ್ಡಪ್ರಮಾಣದಲ್ಲಿ ಅಧಿಕಾರಿಗಳ ನೇಮಕಾತಿ ಪ್ರಕ್ರಿಯೆ ನಡೆಯುತ್ತಿರಿವುದು ಇದೇ ಮೊದಲು.

ಎನ್. ಚಲುವರಾಯಸ್ವಾಮಿ ಕೃಷಿ ಸಚಿವರಾಗಿ ಅಧಿಕಾರ ಸ್ವೀಕರಿಸಿದ ದಿನದಿಂದಲೇ ಇಲಾಖಾ ಸುಧಾರಣೆಗೂ ಹೆಚ್ಚಿನ ಆದ್ಯತೆ ನೀಡಿದ್ದಾರೆ. ಇಲಾಖೆಯಲ್ಲಿ ಶೇ. 60ಕ್ಕೂ ಅಧಿಕ ಹುದ್ದೆಗಳು‌ ಖಾಲಿ ಇರುವುದನ್ನು ಮನಗಂಡ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮನವೊಲಿಸಿ ಆರ್ಥಿಕ ಇಲಾಖೆ ಅನುಮತಿಯನ್ನು ಪಡೆದು ಇಲಾಖೆ‌ ಮೂಲಕ ಕೆಪಿಎಸ್‌ಸಿಗೆ ಪ್ರಸ್ತಾವನೆ ಕಳುಹಿಸಲು ಕಾರಣರಾಗಿದ್ದಾರೆ.

ಈ ನೇಮಕಾತಿಯಿಂದ ರಾಜ್ಯದ 31 ಜಿಲ್ಲೆಗಳ ಎಲ್ಲಾ ತಾಲೂಕುಗಳಲ್ಲಿ ತಳ ಮಟ್ಟದಲ್ಲಿ ಕೆಲಸ ಮಾಡಲು ಅಧಿಕಾರಿಗಳನ್ನು ನೇಮಿಸಲು ಸಾಧ್ಯವಾಗಲಿದೆ. 2008 ರಲ್ಲಿ ಕೆಪಿಎಸ್‌ಸಿ ಮೂಲಕ 410 ಅಧಿಕಾರಿಗಳನ್ನು ನೇಮಕ ಮಾಡಲಾಗಿತ್ತು . ಇದೀಗ ಒಂದೇ ಬಾರಿಗೆ ದೊಡ್ಡ ಪ್ರಮಾಣದಲ್ಲಿ ಕೃಷಿ ಅಧಿಕಾರಿ, ಸಹಾಯಕ ಕೃಷಿ ಅಧಿಕಾರಿಗಳ ನೇಮಕಾತಿ (Agriculture Officer and Assistant Agriculture Officer) ಮಾಡಲು ಕ್ರಮ ವಹಿಸಲಾಗಿದ್ದು, ಮೂರು ತಿಂಗಳೊಳಗೆ ನೇಮಕಾತಿ ಪ್ರಕ್ರಿಯೆ ಪೂರ್ಣ ಗೊಳಿಸಲು ಸೂಚಿಸಲಾಗಿದೆ. ಇದರಿಂದ‌ ಎಲ್ಲಾ ರೈತ ಸಂಪರ್ಕ ಕೇಂದ್ರದಲ್ಲಿ ಕಾರ್ಯನಿರ್ವಹಿಸಲು ಅಧಿಕಾರಿಗಳು ಲಭ್ಯವಾಗಲಿದ್ದು, ಕೃಷಿಕ ಸಮುದಾಯದ ಮಾರ್ಗದರ್ಶನ ಹಾಗೂ ಸೇವೆಗೆ ದೊಡ್ಡ ಶಕ್ತಿ ದೊರೆತಂತಾಗಲಿದೆ.

ಈ ಸುದ್ದಿಯನ್ನೂ ಓದಿ | KEA Exam: ಪಿಎಸ್‌ಐ, ವಿಎಒ, ಕೆ-ಸೆಟ್‌ ಸೇರಿ ವಿವಿಧ ಪರೀಕ್ಷೆಗಳ ಪರಿಷ್ಕೃತ ವೇಳಾಪಟ್ಟಿ ಪ್ರಕಟ

ಮುಖ್ಯಮಂತ್ರಿಯವರಿಗೆ ಧನ್ಯವಾದ ಕೃಷಿ ಇಲಾಖೆಯಲ್ಲಿ ಏಕಕಾಲದಲ್ಲಿ ಇಷ್ಟು ದೊಡ್ಡ ಮಟ್ಟದ ನೇಮಕಾತಿಗೆ ಅನುಮತಿ ಒದಗಿಸಿಕೊಟ್ಟ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕೃಷಿ ಸಚಿವರು ವಿಶೇಷ ಧನ್ಯವಾದಗಳನ್ನು ಅರ್ಪಿಸಿದ್ದಾರೆ. ಈ‌ ನೇಮಕಾತಿಯಿಂದ ಇಲಾಖೆಯಲ್ಲಿ ಖಾಲಿ ಇದ್ದ ಮೂರನೇ ಒಂದರಷ್ಟು ಅಧಿಕಾರಿಗಳ ಹುದ್ದೆ ಭರ್ತಿಯಾದಂತಾಗಲಿದೆ. ಇದರಿಂದ ರೈತರಿಗೆ ಸೇವಾ ಸೌಲಭ್ಯ ಒದಗಿಸುವ ಪ್ರಕ್ರಿಯೆ ಸುಗಮವಾಗಲಿದೆ . ಬಾಕಿ ಉಳಿವ ಖಾಲಿ ಹುದ್ದೆಗಳ ಭರ್ತಿಗೂ ಪ್ರಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ಕೃಷಿ ಸಚಿವರು ತಿಳಿಸಿದ್ದಾರೆ.