Saturday, 21st September 2024

Karnataka Weather: ಇಂದಿನ ಹವಾಮಾನ ವರದಿ; ರಾಜ್ಯದ ಎಲ್ಲೆಲ್ಲಿ ಮಳೆಯಾಗುತ್ತೆ?

Karnataka Weather

ಬೆಂಗಳೂರು: ಸೆ. 21ರಂದು ಶನಿವಾರ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಬೀದರ್, ಕಲಬುರಗಿ, ವಿಜಯಪುರ, ಯಾದಗಿರಿ, ಬೆಳಗಾವಿ, ಧಾರವಾಡ, ಬಾಗಲಕೋಟೆ ಜಿಲ್ಲೆಗಳಲ್ಲಿ ಕೆಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ (Karnataka Weather) ಸಾಧ್ಯತೆಯಿದೆ. ಬಳ್ಳಾರಿ, ದಾವಣಗೆರೆ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳ ಪ್ರತ್ಯೇಕ ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದ್ದು, ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಮುಖ್ಯವಾಗಿ ಶುಷ್ಕ ಹವಾಮಾನದ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇನ್ನು ಸೆ. 22ರಂದು ಕೂಡ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಬಾಗಲಕೋಟೆ, ಬೆಳಗಾವಿ, ಬೀದರ್, ದಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಹಲವೆಡೆ ಹಗುರದಿಂದ ಸಾಧಾರಣ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಚಿಕ್ಕಮಗಳೂರು, ಶಿವಮೊಗ್ಗ, ಬಳ್ಳಾರಿ, ದಾವಣಗೆರೆ, ಚಿತ್ರದುರ್ಗ, ತುಮಕೂರು, ಚಿಕ್ಕಬಳ್ಳಾಪುರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಕೆಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ತಿಳಿಸಿದೆ.

ಅದೇ ರೀತಿ ಸೆ. 23 ರಂದು ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಹೆಚ್ಚಿನ ಸ್ಥಳಗಳಲ್ಲಿ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಂಭವವಿದೆ. ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರ್ಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಮೈಸೂರು, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಹಲವೆಡೆ ಹಗುರದಿಂದ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಂಭವವಿದೆ. ಸೆ. 26ರವರೆಗೆ ಇದೇ ರೀತಿಯ ಹವಾಮಾನ ಮುಂದುವರಿಯಲಿದೆ.

Healthy Life: ಆರೋಗ್ಯಕರ ಭವಿಷ್ಯಕ್ಕಾಗಿ ಈಗಲೇ ಸಿದ್ಧರಾಗಿ…

ಬೆಂಗಳೂರು ಮತ್ತು ಸುತಮುತ್ತಲಿನ ಪ್ರದೇಶಗಳ ಮುನ್ಸೂಚನೆ:
ಮುಂದಿನ 48 ಗಂಟೆಗಳ ಕಾಲ ಭಾಗಶಃ ಮೋಡ ಕವಿದ ಆಕಾಶ, ಹಗುರ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 30° C ಮತ್ತು 21° C ಆಗಿರಬಹುದು.