Friday, 22nd November 2024

Actor Darshan: ದರ್ಶನ್‌ಗೆ ಬೆನ್ನು ನೋವು; ಜೈಲು ಸಿಬ್ಬಂದಿ ಮೇಲೆ ನಟ ಗರಂ

actor darshan

ಬಳ್ಳಾರಿ:‌ ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ (RenukaSwamy Murder case) ಪ್ರಕರಣದಲ್ಲಿ ಬಂಧಿತನಾಗಿ ಬಳ್ಳಾರಿ ಜೈಲಿನಲ್ಲಿರುವ (bellary jail) ನಟ ದರ್ಶನ್‌ (Actor Darshan) ಬೆನ್ನು ನೋವಿನಿಂದ ನರಳುತ್ತಿದ್ದು, ಚೇರ್‌ ವ್ಯವಸ್ಥೆ ಕಲ್ಪಿಸಲು ಜೈಲು ಅಧಿಕಾರಿಗಳಿಗೆ ಹೇಳಿದ್ದಾನೆ. ಆದರೆ ಜೈಲು ಅಧಿಕಾರಿಗಳು ಈ ಕುರಿತು ಕೋರ್ಟ್‌ ನಿರ್ದೇಶನದ ಅಗತ್ಯವಿದೆ ಎಂದಿದ್ದು, ಇದರಿಂದ ಗರಂ ಆಗಿರುವ ನಟ ಜೈಲಧಿಕಾರಿಗಳ ಮೇಲೆ ರೇಗಾಡಿದ್ದಾನೆ (Bellary news) ಎಂದು ಗೊತ್ತಾಗಿದೆ.

ಬಳ್ಳಾರಿ ಸೆಂಟ್ರಲ್ ಜೈಲಿನಲ್ಲಿರುವ ನಟ ದರ್ಶನ್ ಬೆನ್ನು ನೋವು ಹಿನ್ನೆಲೆ ಚೇರ್‌ಗಾಗಿ ಮನವಿ ಮಾಡಿದ್ದ. ಮನವಿ ಮಾಡಿ ವಾರ ಕಳೆದರೂ ಜೈಲು ಅಧಿಕಾರಿಗಳು ಚೇರ್ ಕೊಟ್ಟಿಲ್ಲ. ಕೋರ್ಟ್ ಆದೇಶ ನೀಡಿದರೂ ತನಗೆ ಜೈಲು ಅಧಿಕಾರಿಗಳು ಚೇರ್ ನೀಡಿಲ್ಲ. ಪದೇ ಪದೆ ಕೇಳಿದರೂ ಚೇರ್ ಕಲ್ಪಿಸಿಲ್ಲ ಎಂದು ಜೈಲು ಸಿಬ್ಬಂದಿ ವಿರುದ್ಧ ದರ್ಶನ್‌ ಗರಂ ಆಗಿದ್ದಾನೆ ಎನ್ನಲಾಗಿದೆ.

ಆರೋಪಿ ದರ್ಶನ್ ಗೆ ಖಡಕ್ಕಾಗಿ ತಿರುಗೇಟು ನೀಡಿರುವ ಜೈಲಿನ ಅಧಿಕಾರಿಗಳು, ನ್ಯಾಯಾಲಯದ ಅಧಿಕೃತ ಆದೇಶ ಬಂದ ನಂತರವೇ ಕುರ್ಚಿ ಕೊಡುತ್ತೇವೆ ಎಂದಿದ್ದಾರೆ. ವಿಚಾರಣಾಧೀನ ಕೈದಿಗಳಿಗೆ ಕೆಲವು ಅವಶ್ಯಕ ವಸ್ತು ಕೊಡುವ ಬಗ್ಗೆ ನಿಯಮಗಳು ಇವೆ. ಆದರೆ ಇದಕ್ಕೆ ಕೋರ್ಟ್ ಆದೇಶ ಬೇಕಿದೆ.

Police firing: ಗ್ರಾಮ ಪಂಚಾಯತ್‌ ಮಾಜಿ ಸದಸ್ಯನ ಕೊಲೆ ಆರೋಪಿ ಕಾಲಿಗೆ ಗುಂಡು

ಕಲಬುರಗಿ: ಇತ್ತೀಚೆಗೆ ಕಲಬುರಗಿ (Kalaburagi news, Kalaburagi crime) ಜಿಲ್ಲೆಯಲ್ಲಿ ಗ್ರಾಮ ಪಂಚಾಯತ್‌ ಮಾಜಿ ಸದಸ್ಯನನ್ನು ಗುಂಡಿಕ್ಕಿ ಕೊಲೆ (Murder case) ಮಾಡಿದ್ದ ಆರೋಪಿಯ ಕಾಲಿಗೆ ಗುಂಡು ಹಾರಿಸಿ ಪೊಲೀಸರು (Police firing) ಬಂಧಿಸಿದ್ದಾರೆ. ಈತ ಬೆಂಗಳೂರಿಗೆ ಅಕ್ರಮ ಗನ್‌ ಪೂರೈಕೆ ಸಹ ಮಾಡುತ್ತಿದ್ದ ಎಂದು ಗೊತ್ತಾಗಿದೆ.

ಕಳೆದ ಶುಕ್ರವಾರ ಆಳಂದ (Alanda) ತಾಲೂಕಿನ ಜಿಡಗಾ ಕ್ರಾಸ್​ ಬಳಿ ಗ್ರಾಮ ಪಂಚಾಯತ್‌ ಮಾಜಿ ಸದಸ್ಯ ವಿಶ್ವನಾಥ ಜಮಾದಾರ್ ಅವರನ್ನು ಗುಂಡಿಕ್ಕಿ ಕೊಲೆ ಮಾಡಲಾಗಿತ್ತು. ಈ ಕೊಲೆ ಪ್ರಕರಣದ ಆರೋಪಿ ಲಕ್ಷ್ಮಣ ಕಾಲಿಗೆ ಪೊಲೀಸರು ಗುಂಡಿಕ್ಕಿದ್ದಾರೆ.

ಗನ್ ​ರಿಕವರಿ ಮಾಡಿಕೊಳ್ಳುವುದಕ್ಕಾಗಿ ಅಫಜಲಪುರ ಠಾಣೆ ಪಿಎಸ್ಐ ಸೋಮಲಿಂಗ ಒಡೆಯರ್ ನೇತೃತ್ವದಲ್ಲಿ ಪೊಲೀಸರು ಆರೋಪಿ ಲಕ್ಷ್ಮಣನನ್ನು ಕರೆದುಕೊಂಡು ಆಳಂದ ತಾಲೂಕಿನ ಮಾಡ್ಯಾಳ ಗ್ರಾಮಕ್ಕೆ ಹೋಗಿದ್ದರು. ಈ ವೇಳೆ ಲಕ್ಷ್ಮಣ ಪೊಲೀಸರ ಮೇಲೆ ಹಲ್ಲೆ ಮಾಡಲು ಮುಂದಾಗಿದ್ದ. ಆತ್ಮರಕ್ಷಣೆಗಾಗಿ ಅಫಜಲಪುರ ಠಾಣೆ ಪಿಎಸ್ಐ ಸೋಮಲಿಂಗ ಆರೋಪಿ ಲಕ್ಷ್ಮಣನ ಬಲಗಾಲಿಗೆ ಗುಂಡು ಹಾರಿಸಿದ್ದಾರೆ.

ಆರೋಪಿ ಲಕ್ಷ್ಮಣ ಬೆಂಗಳೂರು ಮತ್ತು ಕಲಬುರಗಿ ಜಿಲ್ಲೆಯ ವಿವಿಧಡೆ ಬಂದೂಕು ಸರಬರಾಜು ಮಾಡುತ್ತಿದ್ದ ಎಂದು ಗೊತ್ತಾಗಿದೆ. ಅಕ್ರಮ ಶಸ್ತ್ರಾಸ್ತ ಪೂರೈಕೆ ಸೇರಿದಂತೆ ಕೊಲೆ ಆರೋಪಿ ಲಕ್ಷ್ಮಣ ಪೂಜಾರಿ ವಿರುದ್ಧ 11 ಕೇಸ್​ಗಳಿವೆ. ವಿಶ್ವನಾಥ್​ ಜಮಾದಾರ್​ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಲಕ್ಷ್ಮಣ ವಿರುದ್ಧ ಆಳಂದ‌ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಶ್ವನಾಥ್​​​ ಜಮಾದಾರ್ ಕಳೆದ ಶುಕ್ರವಾರ ಬೆಳಿಗ್ಗೆ ಮಗನನ್ನು ಶಾಲೆಗೆ ಬಿಟ್ಟು ಬರುತ್ತಿದ್ದಾಗ ಜಿಡಗಾ ಕ್ರಾಸ್ ಬಳಿ ಗುಂಡು ಹಾರಿಸಿ ಕೊಲೆ ಮಾಡಲಾಗಿತ್ತು. ಬೈಕ್​ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ವಿಶ್ವನಾಥ್​ ಅವರ ಮೇಲೆ ಏಕಾಏಕಿ ಗುಂಡಿನ ದಾಳಿ ಮಾಡಿದ್ದರು. ವಿಶ್ವನಾಥ್​ ಅವರ ತಲೆಗೆ ಮೂರು ಗುಂಡು ಹೊಡೆದಿದ್ದರು. ಪರಿಣಾಮ ತೀವ್ರ ರಕ್ತಸ್ರಾವವಾಗಿ ವಿಶ್ವನಾಥ್​ ಸ್ಥಳದಲ್ಲೇ ಮೃತಪಟ್ಟಿದ್ದರು. ವಿಶ್ವನಾಥ್​ ಅವರನ್ನು ಕೊಂದು ದುಷ್ಕರ್ಮಿಗಳು ಸ್ಥಳದಿಂದ ಪರಾರಿಯಾಗಿದ್ದರು. ಆಳಂದ‌ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದು, ಕೊಲೆ ಪ್ರಕರಣದ ಪ್ರಮುಖ ಆರೋಪಿ ಲಕ್ಷ್ಮಣನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದರು.

ಇದನ್ನೂ ಓದಿ: Gauri Lankesh: ಗೌರಿ ಲಂಕೇಶ್‌ ಕೊಲೆ ಪ್ರಕರಣ; ಮತ್ತೆ 4 ಆರೋಪಿಗಳಿಗೆ ಜಾಮೀನು