Saturday, 21st September 2024

Tumkur News: ಹಿಂದೂ ಸಂಘಟನೆಗಳ ಕೆಂಗಣ್ಣಿಗೆ ಗುರಿಯಾದ ಪೊಲೀಸರ ನಡೆ

ತುಮಕೂರು: ಹಿಂದೂ ಮಹಾಗಣಪತಿ ವಿಸರ್ಜನಾ ಮಹೋತ್ಸವ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಭಾಗವಹಿಸಿ ದಂತೆ ಎಚ್ಚರಿಕೆ ನೀಡಿರುವ ಪೊಲೀಸರ ನಡೆಯನ್ನು ಹಿಂದೂ ಸಂಘಟನೆಗಳು ಖಂಡಿಸಿವೆ.

ಈ ಸಂಬಂಧ ತುಮಕೂರು ವಿಶ್ವವಿದ್ಯಾನಿಲಯದ ಕುಲ ಸಚಿವರಿಗೆ ಪತ್ರ ಬರೆದಿರುವ ತುಮಕೂರು ನಗರ ಪೊಲೀಸ್ ಠಾಣೆ ಇನ್ಸ್ಪೆಕ್ಟರ್, ಸೆ.21 ರಂದು ನಗರದ ಬಿ.ಜಿ.ಎಸ್ ವೃತ್ತದಲ್ಲಿರುವ ನಾಗರಕಟ್ಟೆಯ ಶ್ರೀ ಗಣೇಶೋತ್ಸವ ಮತ್ತು ವಿಸರ್ಜನಾ ಕಾರ್ಯಕ್ರಮವನ್ನು ಹಮ್ಮಿಕೊಂಡಿರುತ್ತಾರೆ. ಸದರಿ ಕಾರ್ಯಕ್ರಮದ ಉತ್ಸವದ ವೇಳೆಯಲ್ಲಿ ತುಮಕೂರು ನಗರದ ನಾಗರೀಕರು, ಶಾಲಾ-ಕಾಲೇಜು ಮಕ್ಕಳು, ವಿದ್ಯಾರ್ಥಿಗಳು ಸಹ ಭಾಗವಹಿಸುವ ಬಗ್ಗೆ ಮಾಹಿತಿ ಇರುತ್ತದೆ. ಸದರಿ ಮೆರವಣಿಗೆಯಲ್ಲಿ ಸಮಾಜದಲ್ಲಿ ಶಾಂತಿ ಭಂಗವನ್ನುಂಟು ಮಾಡುವ, ಕೋಮು ಪ್ರಚೋದನೆ ಯನ್ನುಂಟು ಮಾಡುವ ಕೆಲವು ಕಿಡಿಗೇಡಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಾರೆಂದು ಮಾಹಿತಿ ತಿಳಿದು ಬಂದಿರುತ್ತದೆ.

ಆದ್ದರಿಂದ ಸದರಿ ಉತ್ಸವದ ಸಮಯದಲ್ಲಿ ಕೆಲವು ಕಿಡಿಗೇಡಿಗಳು ಶಾಲಾ-ಕಾಲೇಜು ವಿದ್ಯಾರ್ಥಿ- ವಿದ್ಯಾರ್ಥಿನಿ ಯರನ್ನು ಒತ್ತಾಯಪೂರ್ವಕವಾಗಿ ಕರೆತಂದು ವಿಸರ್ಜನಾ ಮೆರವಣಿಗೆಯಲ್ಲಿ ಸೇರಿಸಿಕೊಂಡು ಸಾರ್ವಜನಿಕ ಶಾಂತಿ ಭಂಗವನ್ನುಂಟು ಮಾಡುವ ಮತ್ತು ಕೋಮು ಪ್ರಚೋದನೆಯನ್ನುಂಟು ಮಾಡುವ ಸಂಭವವಿದೆ. ಆದ್ದರಿಂದ ಮುನ್ನೆಚ್ಚರಿಕೆಯಾಗಿ ಶಾಲಾ ಕಾಲೇಜುಗಳ ವಿದ್ಯಾರ್ಥಿಗಳ ಉಜ್ವಲ ಭವಿಷ್ಯದ ಹಿತದೃಷ್ಟಿಯಿಂದ ತುಮಕೂರು ನಗರದ ಯಾವುದೇ ಶಾಲಾ ಕಾಲೇಜು ವಿದ್ಯಾರ್ಥಿ-ವಿದ್ಯಾರ್ಥಿನಿಯರು ಯಾವುದೋ ಕಿಡಿಗೇಡಿಗಳ ಒತ್ತಾಯಕ್ಕೆ ಒಳಗಾಗಿ ಕಾರ್ಯಕ್ರಮದಲ್ಲಿ ಭಾಗವಹಿವಿಸುವುದರ ಬಗ್ಗೆ ಸೂಕ್ತ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲು ಸೂಚಿಸಿದ್ದಾರೆ.

ಹಿಂದೂ ಸಂಘಟನೆಗಳು ಕಿಡಿ: ಪೊಲೀಸರು ಕ್ರಮವನ್ನು ಖಂಡಿಸಿರುವ ಹಿಂದೂ ಸಂಘಟನೆ ಮುಖಂಡರು, ನಾವು ಮಹಾಗಣಪತಿಯನ್ನು ವಿಸರ್ಜನೆ ಮಾಡಲು ಶಾಂತ ರೀತಿಯಲ್ಲಿ ವ್ಯವಸ್ಥೆ ಮಾಡಿಕೊಂಡಿದ್ದೇವೆ ಆದರೆ ಪೊಲೀಸರೇ ಗಲಭೆಗೆ ಕುಮ್ಮಕ್ಕು ನೀಡುವ ರೀತಿ ಶಾಲಾ ಕಾಲೇಜುಗಳಿಗೆ ಪತ್ರ ಬರೆದಿರುವುದು ಖಂಡನೀಯ ಎಂದು ಕಿಡಿ ಕಾಡಿದ್ದಾರೆ.

ಇದನ್ನೂ ಓದಿ: Tumkur News: ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಜನರಲ್ಲಿ ನೆಮ್ಮದಿ ಇಲ್ಲ-ಚಿದಾನಂದ್ ಎಂ.ಗೌಡ