ತುಮಕೂರು: ನಗರದಲ್ಲಿ ಹಿಂದು ಮಹಾಗಣಪತಿ ವಿಸರ್ಜನೆ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಹಿಂದುಪರ ಸಂಘಟನೆ ಮುಖಂಡ ಪುನೀತ್ ಕೆರೆಹಳ್ಳಿಯನ್ನು ಪೊಲೀಸರು ಬಂಧಿಸಿದ್ದಾರೆ. ತುಮಕೂರಿನ ಕ್ಯಾತಸಂದ್ರ ಬಳಿಯ ಜಾಸ್ ಟೋಲ್ ಬಳಿ ಪುನೀತ್ ಕೆರೆಹಳ್ಳಿಯನ್ನು (Puneeth Kerehalli) ಬಂಧಿಸಲಾಗಿದೆ.
ತುಮಕೂರು ನಗರದಲ್ಲಿ ಶನಿವಾರ ಹಿಂದು ಮಹಾಗಣಪತಿ ವಿಸರ್ಜನೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಚರ್ಚ್ ವೃತ್ತದ ಬಳಿ ಪುನೀತ್ ಕೆರೆಹಳ್ಳಿ ಭಾಷಣ ಮಾಡಬೇಕಿತ್ತು. ಆದರೆ, ಅವರು ಪ್ರಚೋದನಕಾರಿ ಭಾಷಣ ಮಾಡುವ ಸಾಧ್ಯತೆ ಹಿನ್ನೆಲೆಯಲ್ಲಿ ಪೊಲೀಸರು ಬಂಧಿಸಿದ್ದಾರೆ. ಇನ್ನು ಗಣಪತಿ ವಿಸರ್ಜನೆ ಹಿನ್ನೆಲೆಯಲ್ಲಿ ತುಮಕೂರು ನಗರದಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ.
ತುಮಕೂರಿನ ಗಣೇಶೊತ್ಸವ ಕಾರ್ಯಕ್ರಮಕ್ಕೆ ಭಾಗವಹಿಸು ಹಕ್ಕು ಕಸಿದುಕೊಂಡ ಕಾಂಗ್ರೆಸ್ಸ್ ಸರ್ಕಾರ ನನಗೆ ಯಾವುದೇ ರೀತಿಯ ನೋಟೀಸ್ ಕೂಡಾ ನೀಡದೇ ನನ್ನನ್ನೆ ಬಂಧಿಸಿ ನನ್ನ ಬದುಕುವ ಮೂಲಭೂತ ಹಕ್ಕಿಗೆ ದಕ್ಕೆ ತಂದಿದೆ ಇದು ಪ್ರಜಾಪ್ರಭುತ್ವವೇ?! pic.twitter.com/hrdOVYzGYb
— Puneeth Kerehalli (@Puneeth74353549) September 21, 2024
ಈ ಸುದ್ದಿಯನ್ನೂ ಓದಿ | Tumkur News: ಕೋರ ಗ್ರಾಪಂ ಸದಸ್ಯರಿಂದ ಅಕ್ರಮವಾಗಿ ನಿವೇಶನ ಹಂಚಿಕೆ
ಶಾಸಕ ಮುನಿರತ್ನ ಮತ್ತೆ ಜೈಲುಪಾಲು; ಅತ್ಯಾಚಾರ ಪ್ರಕರಣದಲ್ಲಿ 14 ದಿನ ನ್ಯಾಯಾಂಗ ಬಂಧನ
ಬೆಂಗಳೂರು: ಅತ್ಯಾಚಾರ ಪ್ರಕರಣದಲ್ಲಿ ಬಂಧನವಾಗಿರುವ ಬಿಜೆಪಿ ಶಾಸಕ ಮುನಿರತ್ನಗೆ (MLA Munirathna) 14 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಹೀಗಾಗಿ ಅವರು ಮತ್ತೆ ಜೈಲು ಸೇರಿದ್ದಾರೆ. ಜಾತಿ ನಿಂದನೆ ಪ್ರಕರಣದಲ್ಲಿ ಜಾಮೀನು ಪಡೆದು ಬಿಡುಗಡೆಯಾದ ಬೆನ್ನಲ್ಲೇ ಕಗ್ಗಲೀಪುರ ಪೊಲೀಸರು, ಶಾಸಕ ಮುನಿರತ್ನರನ್ನು ಬಂಧಿಸಿದ್ದರು. ಇದೀಗ ಅವರನ್ನು ನ್ಯಾಯಾಂಗ ಬಂಧನಕ್ಕೆ ನೀಡಿ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಆದೇಶಿಸಿದೆ.
ಗುತ್ತಿಗೆದಾರನಿಗೆ ಜೀವ ಬೆದರಿಕೆ ಮತ್ತು ಜಾತಿ ನಿಂದನೆ ಪ್ರಕರಣದಲ್ಲಿ ಜೈಲು ಪಾಲಾಗಿದ್ದ ಅವರು ಗುರುವಾರವಷ್ಟೇ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದರು. ಇದರ ಬೆನ್ನಲ್ಲೇ ಅತ್ಯಾಚಾರ ಪ್ರಕರಣ ಅವರಿಗೆ ಸುತ್ತಿಕೊಂಡಿತ್ತು. ಹೀಗಾಗಿ ಪೊಲೀಸರು ಶನಿವಾರ ಕೋರ್ಟ್ಗೆ ಹಾಜರುಪಡಿಸಿದ್ದು, ಅಕ್ಟೋಬರ್ 5ರ ವರೆಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
2020 ರಿಂದ 2022ರವರೆಗೆ ಶಾಸಕ ಮುನಿರತ್ನ ತನ್ನ ಮೇಲೆ ಅತ್ಯಾಚಾರ ಎಸಗಿದ್ದಾರೆ ಮತ್ತು ಬ್ಲ್ಯಾಕ್ಮೇಲ್ ಮಾಡಿದ್ದಾರೆ ಎಂದು ರಾಜರಾಜೇಶ್ವರಿ ನಗರದ 40 ವರ್ಷದ ಮಹಿಳೆಯೊಬ್ಬರು ದೂರು ದಾಖಲಿಸಿದ್ದರು. ಸಂತ್ರಸ್ತೆ ದೂರಿನ ಆಧಾರದ ಮೇಲೆ ರಾಮನಗರ ಜಿಲ್ಲೆಯ ಕಗ್ಗಲೀಪುರ ಠಾಣೆ ಪೊಲೀಸರು ಶಾಸಕ ಮುನಿರತ್ನ ವಿರುದ್ಧ ಎಫ್‌ಐಆರ್ ದಾಖಲಿಸಿದ್ದರು. ಈ ಪ್ರಕರಣ ಸಂಬಂಧ ಶಾಸಕ ಮುನಿರತ್ನ ಅವರನ್ನು ಬಂಧಿಸಲಾಗಿತ್ತು.
ಈ ಸುದ್ದಿಯನ್ನೂ ಓದಿ | US Indian embassy : ಅಮೆರಿಕದಲ್ಲಿ ಭಾರತೀಯ ರಾಯಭಾರ ಕಚೇರಿಯ ಅಧಿಕಾರಿ ಅನುಮಾನಾಸ್ಪದ ಸಾವು
ಘಟನೆ ಸಂಬಂಧ ಶಾಸಕ ಮುನಿರತ್ನ ಸೇರಿ 7 ಜನರ ವಿರುದ್ಧ FIR ದಾಖಲಾಗಿತ್ತು. ಆರ್.ಆರ್.ನಗರ ಬಿಜೆಪಿ ಶಾಸಕ ಮುನಿರತ್ನ, ವಿಜಯ್ ಕುಮಾರ್, ಕಿರಣ್, ಲೋಹಿತ್, ಮಂಜುನಾಥ್, ಲೋಕಿ ವಿರುದ್ಧ ಎಫ್ಐಆರ್ ದಾಖಲಾಗಿತ್ತು. ಖಾಸಗಿ ರೆಸಾರ್ಟ್ನಲ್ಲಿ ಅತ್ಯಾಚಾರ ಮಾಡಿರುವುದಾಗಿ DySP ದಿನಕರ್ ಶೆಟ್ಟಿ ಸಮ್ಮುಖದಲ್ಲಿ ಮಹಿಳೆ ಆರೋಪ ಮಾಡಿ ಹೇಳಿಕೆ ನೀಡಿದ್ದರು.