Saturday, 21st September 2024

BJP MP Dr K Sudhakar: ರೇಷ್ಮೆ ಬೆಳೆಯಲ್ಲಿ ಮಧ್ಯವರ್ತಿಗಳ ಹಾವಳಿ ತಪ್ಪಿಸಿ ಉತ್ತಮ ಬೆಲೆ ನೀಡುವಂತೆ ಕೇಂದ್ರಕ್ಕೆ ಸಂಸದ ಡಾ.ಕೆ.ಸುಧಾಕರ್ ಮನವಿ

ಕಾಂಗ್ರೆಸ್ ಸರ್ಕಾರದಿಂದ ಓಲೈಕೆ ರಾಜಕಾರಣಕ್ಕಾಗಿಯೇ ಗಣೇಶೋತ್ಸವಕ್ಕೆ ಸರ್ಕಾರದಿಂದ ಅಡ್ಡಿಪಡಿಸ ಲಾಗುತ್ತಿದೆ

ಚಿಕ್ಕಬಳ್ಳಾಪುರ: ರೇಷ್ಮೆ ಬೆಳೆಗಾರರನ್ನು ಮಧ್ಯವರ್ತಿಗಳು ಶೋಷಿಸುತ್ತಿದ್ದು, ರೈತರಿಗೆ ಸರಿಯಾದ ದರ ದೊರೆಯು ತ್ತಿಲ್ಲ. ಈ ಸಮಸ್ಯೆಯನ್ನು ಕೇಂದ್ರ ಸರ್ಕಾರ ನಿವಾರಿಸಬೇಕು ಎಂದು ಸಂಸದ ಡಾ.ಕೆ.ಸುಧಾಕರ್(MP Dr K Sudhakar) ಮನವಿ ಮಾಡಿದರು.

ಕೇಂದ್ರ ರೇಷ್ಮೆ ಮಂಡಳಿಯ ಅಮೃತ ಮಹೋತ್ಸವದಲ್ಲಿ ಪಾಲ್ಗೊಂಡ ಡಾ.ಕೆ.ಸುಧಾಕರ್, ರೇಷ್ಮೆ ಬೆಳೆಗಾರರು ಎದುರಿಸುತ್ತಿರುವ ಸಮಸ್ಯೆಗಳನ್ನು ಕೇಂದ್ರ ಜವಳಿ ಸಚಿವ ಗಿರಿರಾಜ್ ಸಿಂಗ್(Union Textile Minister Giriraj Singh) ಗಮನಕ್ಕೆ ತಂದು ಪರಿಹಾರಕ್ಕೆ ಮನವಿ ಸಲ್ಲಿಸಿದರು.

ನನ್ನ ಕ್ಷೇತ್ರದಲ್ಲಿ ರೇಷ್ಮೆ ಬೆಳೆ ರೈತರ ಜೀವನಾಡಿಯಾಗಿದೆ. ಇದನ್ನೇ ನಂಬಿ ಲಕ್ಷಾಂತರ ಕುಟುಂಬಗಳು ಜೀವನ ಕಟ್ಟಿ ಕೊಂಡಿವೆ. ಕಷ್ಟಪಟ್ಟು ಬೆಳೆದ ಬೆಳೆಗೆ ಮಧ್ಯವರ್ತಿಗಳಿಂದಾಗಿ ಸರಿಯಾದ ಬೆಲೆ ದೊರೆಯುತ್ತಿಲ್ಲ. ಮಧ್ಯವರ್ತಿ ಗಳ ಹಸ್ತಕ್ಷೇಪ ತಪ್ಪಿಸುವ ಮೂಲಕ ರೈತರ ಸಮಸ್ಯೆಯನ್ನು ನಿವಾರಿಸಿ ವರ್ತಕರು ಹಾಗೂ ರೈತರು ಬದುಕುವಂತೆ ಮಾಡಬೇಕು ಎಂದು ಮನವಿ ಮಾಡಿದರು.

ರಾಜ್ಯದಲ್ಲಿ ರೇಷ್ಮೆ ಉದ್ಯಮ ಆರಂಭವಾಗಲು ನಾಲ್ವಡಿ ಕೃಷ್ಣರಾಜ ಒಡೆಯರ್ ಕಾರಣ. ಅವರು ವಿದ್ಯುತ್ ಮಳಿಗೆ ಗಳನ್ನು ತಂದು ಇಲ್ಲಿ ಉದ್ದಿಮೆಯನ್ನು ಬೆಳೆಸಿದರು. ಅವರನ್ನು ಈ ದಿನ ಸ್ಮರಿಸಬೇಕಿದೆ ಎಂದರು.

ನನ್ನನ್ನು ಕೇಂದ್ರ ರೇಷ್ಮೆ ಮಂಡಳಿಗೆ ನಾಮ ನಿರ್ದೇಶನ ಮಾಡಲಾಗಿದೆ. ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಶಿಡ್ಲಘಟ್ಟ ಮತ್ತು ರಾಮನಗರದಲ್ಲಿ ಹೈಟೆಕ್ ರೇಷ್ಮೆ ಮಾರುಕಟ್ಟೆ ನಿರ್ಮಿಸಲು ಯೋಜನೆ ರೂಪಿಸಲಾಗಿತ್ತು. ಈ ಯೋಜನೆಯ ಮೂಲಕ ರೈತರಿಗೆ ಉತ್ತಮ ಬೆಲೆ ಸಿಗಲಿದೆ. ನಾನು ಕೇಂದ್ರದಲ್ಲಿ ರೇಷ್ಮೆ ಬೆಳೆಗಾರರ ಪ್ರತಿನಿಧಿಯಾಗಿ ಕಾರ್ಯನಿರ್ವಹಿಸುವಾಗ ಖಂಡಿತವಾಗಿ ರೇಷ್ಮೆಬೆಳೆಗಾರರ ಹಿತಕ್ಕೆ ಧಕ್ಕೆಯಾಗದ ಹಾಗೆ ಜಾಗೃತೆ ವಹಿಸುತ್ತೇನೆ ಎಂದು ಹೇಳಿದರು.

ಓಲೈಕೆ ರಾಜಕಾರಣ

ಓಲೈಕೆ ರಾಜಕಾರಣ ಕಾಂಗ್ರೆಸ್‌ನ ರಕ್ತದಲ್ಲೇ ಇರುವುದರಿಂದ ರಾಜ್ಯದಲ್ಲಿ ಕೋಮುಗಲಭೆ ನಡೆಯುತ್ತಿದೆ. ಗಣೇಶನ ಮೂರ್ತಿಯನ್ನು ಕೂಡ ಬಂಧಿಸಿ ಕರೆದೊಯ್ದ ಘಟನೆ ಎಲ್ಲೂ ನಡೆದಿಲ್ಲ. ನನ್ನ ಕ್ಷೇತ್ರದಲ್ಲೂ ಗಣೇಶ ಮೆರವಣಿಗೆಗೆ ಕಾಂಗ್ರೆಸ್ ಸರ್ಕಾರ ತಡೆ ಒಡ್ಡಿದೆ. ನಾವೇನೋ ಬೇರೆ ದೇಶದಲ್ಲಿ ಗಣೇಶ ಉತ್ಸವ ಮಾಡುತ್ತಿದ್ದೇವೆ ಎಂಬ ಭಾವನೆ ಬಂದಿದೆ. ಅನೇಕ ಯುವಕರು ಬಂದು ಅವರ ನೋವು ತೋಡಿಕೊಂಡಿದ್ದಾರೆ. ಅಧಿಕಾರಿಗಳು ಗಣೇಶೋತ್ಸವಕ್ಕೆ ಏಕೆ ಅಡ್ಡಿ ಮಾಡುತ್ತಿದ್ದಾರೆ ಎಂದು ಸರ್ಕಾರ ವಿಮರ್ಶೆ ಮಾಡಿಕೊಳ್ಳಲಿ ಎಂದರು.

ದ್ವೇಷದ ರಾಜಕಾರಣ

ಕೋವಿಡ್ ಕುರಿತ ಮಧ್ಯಂತರ ವರದಿಯನ್ನು ನೀಡಲಾಗಿದೆ. ತಪ್ಪಿತಸ್ಥರು ಇದ್ದರೆ ಅವರಿಗೆ ಶಿಕ್ಷೆ ನೀಡಲಿ. ನಮ್ಮ ಸರ್ಕಾರ ಇದ್ದಾಗ ದ್ವೇಷದ ರಾಜಕಾರಣ ಅಥವಾ ತನಿಖಾ ಅಸ್ತ್ರ ಪ್ರಯೋಗ ಮಾಡಿಲ್ಲ. ಬಿಜೆಪಿ ಬಂದ ನಂತರ ಜಾರಿ ನಿರ್ದೇಶನಾಲಯ, ಸಿಬಿಐ ಬಂದಿಲ್ಲ. ಅದು ಹಿಂದೆಯೂ ಇತ್ತು. ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ, ಈ ಎಲ್ಲ ಸಂಸ್ಥೆಗಳು ಸ್ವತಂತ್ರವಾಗಿತ್ತು, ಈಗ ಸ್ವತಂತ್ರವಾಗಿಲ್ಲ ಎಂಬ ಅಭಿಪ್ರಾಯವನ್ನು ಕಾಂಗ್ರೆಸ್ ನಾಯಕರು ಹುಟ್ಟು ಹಾಕಿದ್ದಾರೆ. ಇಡೀ ಸರ್ಕಾರ ಕಾಂಗ್ರೆಸ್ ಕೈಯಲ್ಲಿದೆ. ಕುರ್ಚಿ ಹೋದ ನಂತರ ಮುಂದೇನು ಮಾಡುತ್ತಾರೆ? ಅವರೇ ದ್ವೇಷದ ರಾಜಕಾರಣವನ್ನು ಎಲ್ಲರಿಗೂ ಕಲಿಸುತ್ತಿದ್ದಾರೆ ಎಂದರು.

ಇದನ್ನೂ ಓದಿ: MP Dr K Sudhakar: ಎಲ್ಲರೂ ಪಕ್ಷವನ್ನು ಅನುಸರಿಸಿ, ಪಕ್ಷದ ಯಾವುದೇ ಘಟಕದ ಅಧ್ಯಕ್ಷರ ಆದೇಶವನ್ನು ಪಾಲಿಸಿ