Sunday, 24th November 2024

Law Training: ಕಾನೂನು ಪದವೀಧರರ ತರಬೇತಿಗಾಗಿ ಅರ್ಜಿ ಆಹ್ವಾನ; ಸೆ.30 ಕೊನೆಯ ದಿನ

ಬೆಂಗಳೂರು: ಸಮಾಜ ಕಲ್ಯಾಣ ಇಲಾಖೆ ವತಿಯಿಂದ 2024-25ನೇ ಸಾಲಿಗೆ ಆಡಳಿತ ನ್ಯಾಯಾಧೀಕರಣ ಯೋಜನೆಯಡಿ ತರಬೇತಿ ನೀಡಲು ಬೆಂಗಳೂರು ನಗರ ಜಿಲ್ಲಾ ವ್ಯಾಪ್ತಿಯಲ್ಲಿರುವ ಅರ್ಹ ಪರಿಶಿಷ್ಟ ಜಾತಿಯ ಕಾನೂನು ಪದವೀಧರರಿಂದ ಆನ್ ಲೈನ್ ಮೂಲಕ ಅರ್ಜಿಗಳನ್ನು (Law Training) ಆಹ್ವಾನಿಸಲಾಗಿದೆ.

ಅಭ್ಯರ್ಥಿಗಳು 40 ವರ್ಷ ವಯೋಮಿತಿಯೊಳಗಿರಬೇಕು. ತರಬೇತಿ ಅವಧಿ 2 ವರ್ಷಗಳಾಗಿದ್ದು, ಆಯ್ಕೆಯಾದ ಅಭ್ಯರ್ಥಿಗಳನ್ನು ಜಿಲ್ಲಾ ಪಬ್ಲಿಕ್ ಪ್ರಾಸಿಕ್ಯೂಟರ್ ಅಥವಾ ಹಿರಿಯ ವಕೀಲರವರಲ್ಲಿ ತರಬೇತಿಗೆ ನೀಯೋಜಿಸಲಾಗುವುದು. ಬೆಂಗಳೂರು ನಗರ ಜಿಲ್ಲೆಯ ಅಭ್ಯರ್ಥಿಗಳು ಮಾತ್ರ ತರಬೇತಿಗೆ ಅರ್ಜಿ ಸಲ್ಲಿಸಬಹುದು.
ಆಸಕ್ತ ಪರಿಶಿಷ್ಟ ಜಾತಿಯ ಅಭ್ಯರ್ಥಿಗಳು ವೆಬ್ ಸೈಟ್ https://swdservices.karnataka.gov.in/indexKan.aspx ನಲ್ಲಿ ಅರ್ಜಿಗಳನ್ನು ಸೆಪ್ಟೆಂಬರ್ 30ರೊಳಗೆ ಸಲ್ಲಿಸಬಹುದು.

ಆನ್ ಲೈನ್‌ ಮೂಲಕ ಸಲ್ಲಿಸಿದ ಅರ್ಜಿಗಳ ಜೊತೆಗೆ ದಾಖಲಾತಿಗಳನ್ನು ಜಂಟಿ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ಬೆಂಗಳೂರು ನಗರ ಜಿಲ್ಲೆ, ನಂ.21/1,1ನೇ ಮಹಡಿ, ಜೆಲ್ಲೇಟಾ ಟವರ್ಸ್, ಮಿಷನ್ ರಸ್ತೆ, ಸಂಪಂಗಿರಾಮನಗರ, ಬೆಂಗಳೂರು-560027 ಇಲ್ಲಿಗೆ ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 080-22240449 ಗೆ ಸಂಪರ್ಕಿಸಬಹುದು ಎಂದು ಬೆಂಗಳೂರು ನಗರ ಜಿಲ್ಲೆ, ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

1000 ಗ್ರಾಮ ಆಡಳಿತಾಧಿಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಆರಂಭ

vidhana_soudha

ಬೆಂಗಳೂರು: ಕಂದಾಯ ಇಲಾಖೆಯಲ್ಲಿ (revenue department) ಖಾಲಿ ಇರುವ 1000 ಗ್ರಾಮ ಆಡಳಿತಾಧಿಕಾರಿ ಹುದ್ದೆಗಳ ನೇಮಕಾತಿಗೆ (Job news, job alerts) ಆನ್ ಲೈನ್ ಮೂಲಕ ಅರ್ಜಿ ಕರೆಯಲಾಗಿದೆ. ನಿನ್ನೆಯಿಂದ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಪ್ರಾರಂಭವಾಗಿದೆ.

ಕೆಲ ತಾಂತ್ರಿಕ ಕಾರಣಗಳಿಂದಾಗಿ ಈಗ ಈ ಅರ್ಜಿ ಸಲ್ಲಿಕೆ ಪ್ರಕ್ರಿಯೆಯನ್ನು ತಾತ್ಕಾಲಿಕವಾಗಿ ಮುಂದೂಡಿಕೆ ಮಾಡಲಾಗಿತ್ತು. ಇದೀಗ ಸೆ.19ರಿಂದ ಅರ್ಜಿಗಳನ್ನು ಸ್ವೀಕರಿಸಲಾಗುತ್ತಿದೆ. PSI ಸೇರಿ ವಿವಿಧ ಪರೀಕ್ಷೆಗಳ ಪರಿಷ್ಕೃತ ವೇಳಾಪಟ್ಟಿಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಪ್ರಕಟಿಸಿದೆ. PSI ಪರೀಕ್ಷೆ ಆಕ್ಟೋಬರ್ 3ಕ್ಕೆ ನಡೆಯಲಿದೆ. ವಯೋಮಿತಿ ಸಡಿಲ ಮಾಡಿರುವ ಕಾರಣ ಗ್ರಾಮ ಆಡಳಿತಾಧಿಕಾರಿ ಹುದ್ದೆಗಳಿಗೆ ಸೆ.19ರಿಂದ 9 ದಿನ ಅರ್ಜಿ ಸಲ್ಲಿಸಲು ಮತ್ತೊಮ್ಮೆ ಅವಕಾಶ ನೀಡಲಾಗಿದೆ. ಈ ಮೂಲಕ ಅರ್ಜಿ ಸಲ್ಲಿಸಲು ಮತ್ತೊಮ್ಮೆ ಅವಕಾಶ ನೀಡಿದೆ.

ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಹೀಗಿದೆ:

ಗ್ರಾಮ ಆಡಳಿತ ಅಧಿಕಾರಿ ಹುದ್ದೆಗೆ ವಿದ್ಯಾರ್ಹತೆ

ದ್ವಿತೀಯ ಪಿಯುಸಿ ಅಥವಾ 12ನೇ ತರಗತಿ ಶಿಕ್ಷಣವನ್ನು ಅಂಗೀಕೃತ ಶಿಕ್ಷಣ ಸಂಸ್ಥೆಗಳಿಂದ ಪಡೆದಿರಬೇಕು.

  • ಪಿಯುಸಿ ಹೊರತುಪಡಿಸಿ ಜೆಒಸಿ, ಡಿಪ್ಲೊಮ ಮತ್ತು ಇನ್ನಿತರ ಯಾವುದೇ ವಿದ್ಯಾರ್ಹತೆಗಳನ್ನು ಈ ಹುದ್ದೆಗಳಿಗೆ ಪರಿಗಣಿಸಲಾಗುವುದಿಲ್ಲ.
  • ಕಂಪ್ಯೂಟರ್ ಜ್ಞಾನ ಹೊಂದಿರಬೇಕು.

ಗ್ರಾಮ ಆಡಳಿತ ಅಧಿಕಾರಿ ಹುದ್ದೆಗೆ ವಿದ್ಯಾರ್ಹತೆ ವಿವರಗಳು

ದ್ವಿತೀಯ ಪಿಯುಸಿ ಅಥವಾ ತತ್ಸಮಾನ ಪರೀಕ್ಷೆ ಪಾಸ್‌ ಮಾಡಿರಬೇಕು. ಅಥವಾ ಸಿಬಿಎಸ್‌ಇ / ಐಸಿಎಸ್‌ಇ ನಡೆಸುವ 12ನೇ ತರಗತಿ / ಎನ್‌ಐಓಎಸ್‌ ನಡೆಸುವ ಹೆಚ್‌ಎಸ್‌ಸಿ ಅರ್ಹತೆ ಪಡೆದಿರಬೇಕು. ಅಥವಾ ಮೂರು ವರ್ಷಗಳ ಡಿಪ್ಲೊಮ ಅಥವಾ ಎರಡು ವರ್ಷಗಳ ಐಟಿಐ ಕೋರ್ಸ್‌ ಅಥವಾ ಎರಡು ವರ್ಷಗಳ ಯಾವುದೇ ವೃತ್ತಿ ಶಿಕ್ಷಣ ಡಿಪ್ಲೊಮ (ಜೆಓಸಿ / ಜೆಓಡಿಸಿ / ಜೆಎಲ್‌ಡಿಸಿ) ಉತ್ತೀರ್ಣರಾಗಿರಬೇಕು.

ಶೈಕ್ಷಣಿಕ ವಿದ್ಯಾರ್ಹತೆ

  • ಗ್ರಾಮ ಆಡಳಿತ ಅಧಿಕಾರಿ : ದ್ವಿತೀಯ ಪಿಯುಸಿ ಅಥವಾ ತತ್ಸಮಾನ
    (ಸರ್ಕಾರದ ಸುತ್ತೋಲೆ ಸಂಖ್ಯೆ: ಸಿಆಸುಇ 81 ಸೇವನೆ 2017, ದಿ: 27,02,2018 ರನ್ವಯ ಈ ಕೆಳಕಂಡ ವಿದ್ಯಾರ್ಹತೆಗಳನ್ನು ತತ್ಸಮಾನವೆಂದು ಆದೇಶಿದೆ.

ಸಿಬಿಎಸ್‌ಸಿ ಮತ್ತು ಐಸಿಎಸ್‌ಸಿ ಮಂಡಳಿಯು ನಡೆಸುವ ಕ್ಲಾಸ್ 12 ಪರೀಕ್ಷೆ.
ಇತರೆ ರಾಜ್ಯ ಸರ್ಕಾರದ ಪರೀಕ್ಷಾ ಮಂಡಳಿಗಳಿಂದ ನಡೆಸುವ ಕ್ಲಾಸ್ 12 ಪರೀಕ್ಷೆ.
ನ್ಯಾಷನಲ್ ಇನ್ಸಿಟ್ಯೂಟ್ ಆಫ್ ಓಪನ್ ಸ್ಕೂಲಿಂಗ್ (ಎನ್ ಐ ಓ ಎಸ್) ವತಿಯಿಂದ ನಡೆಸುವ ಉನ್ನತ ಪ್ರೌಢ ಶಿಕ್ಷಣ ಕೋರ್ಸ್) ಹೆಚ್.ಎಸ್‌.ಸಿ.
ಮೂರು ವರ್ಷಗಳ ಡಿಪ್ಲೋಮಾ ಅಥವಾ ಎರಡು ವರ್ಷಗಳ ಐಟಿಐ ಕೋರ್ಸ್ ಅಥವಾ ಎರಡು ವರ್ಷಗಳ ವೃತ್ತಿ ಶಿಕ್ಷಣ ಡಿಪ್ಲೋಮಾ (ಜೆ.ಓ.ಸಿ/ಜೆ.ಓ.ಡಿ.ಸಿ/ಜಿ.ಎಲ್.ಡಿ.ಸಿ)
(ಅಭ್ಯರ್ಥಿಗಳು ಎನ್‌ಐಓಎಸ್ ವತಿಯಿಂದ ನಡೆಸುವ ಒಂದು ಭಾಷಾ ಕೋರ್ಸ್ ಮತ್ತು ಒಂದು ಶೈಕ್ಷಣಿಕ ವಿಷಯದಲ್ಲಿ (ದೊರಕಲಿಕೆ ಮಾದರಿಯಲ್ಲಿ ಅಥವಾ ಪದವಿ ಪೂರ್ವ ಮಂಡಳಿಯು ನಡೆಸುವ ಪರೀಕ್ಷೆಯಲ್ಲಿ ಒಂದು ಭಾಷೆ ಮತ್ತು ಒಂದು ವಿಷಯದಲ್ಲಿ ಉತ್ತೀರ್ಣರಾದಲ್ಲಿ ಮಾತ್ರ ಪಿಯುಸಿ ಗೆ ತತ್ಸಮಾನವೆಂದು ಪರಿಗಣಿಸಬಹುದು.)

  1. ಪಿಂಚಣಿ ಸೌಲಭ್ಯ: ಪಿಂಚಣಿ ರಹಿತ (NPS)
  2. ವಯೋಮಿತಿ: ಅರ್ಜಿಗಳನ್ನು ಸ್ವೀಕರಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಕನಿಷ್ಟ 18 ವರ್ಷಗಳು ತುಂಬಿರತಕ್ಕದ್ದು ಹಾಗೂ ಈ ಕೆಳಕಂಡ ಗರಿಷ್ಟ ವಯೋಮಿತಿಯನ್ನು ಮೀರಿರಬಾರದು.

ಸಾಮಾನ್ಯ ಅರ್ಹತೆಯ ಅಭ್ಯರ್ಥಿಗಳಿಗೆ-38 ವರ್ಷ
ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ-41 ವರ್ಷ
ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ /ಪ್ರವರ್ಗ-1 ಅಭ್ಯರ್ಥಿಗಳಿಗೆ- 43 ವರ್ಷ

ಗ್ರಾಮ ಆಡಳಿತ ಅಧಿಕಾರಿ ಹುದ್ದೆಗೆ ಅಪ್ಲಿಕೇಶನ್‌ ಶುಲ್ಕ ವಿವರ
ಸಾಮಾನ್ಯ ಅರ್ಹತೆ, ಇತರೆ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ರೂ.750.
ಪರಿಶಿಷ್ಟ ಜಾತಿ, ಪರಿಶಿಷ್ಠ ಪಂಗಡ, ಪ್ರವರ್ಗ-1, ಮಾಜಿ ಸೈನಿಕ ಮತ್ತು ವಿಕಲ ಚೇತನ ಅಭ್ಯರ್ಥಿಗಳಿಗೆ ರೂ.500.