ಬೆಂಗಳೂರು: ಗ್ರಾಮ ಆಡಳಿತಾಧಿಕಾರಿ ಹುದ್ದೆಗಳು, ಜಿಟಿಟಿಸಿ ಹುದ್ದೆಗಳ ನೇಮಕಾತಿಗೆ ಸೆ. 29ರಂದು ನಡೆಯುವ ಕಡ್ಡಾಯ ಕನ್ನಡ ಪರೀಕ್ಷೆಯ ಪ್ರವೇಶ ಪತ್ರಗಳನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (KEA Exam) ಬಿಡುಗಡೆ ಮಾಡಿದ್ದು, ಅಭ್ಯರ್ಥಿಗಳು ಕೆಇಎ ವೆಬ್‌ಸೈಟ್‌ನಲ್ಲಿ ಹಾಲ್ ಟಿಕೆಟ್ ಡೌನ್‌ಲೋಡ್ ಮಾಡಿಕೊಳ್ಳಬಹುದಾಗಿದೆ.
ರಾಜ್ಯ ಸರ್ಕಾರವು ಗ್ರೂಪ್ ಬಿ ಮತ್ತು ಗ್ರೂಪ್ ಸಿ ಹುದ್ದೆಗಳಿಗೆ 3 ವರ್ಷ ವಯೋಮಿತಿ ಸಡಿಲಿಕೆ ನೀಡಿರುವ ಹಿನ್ನೆಲೆಯಲ್ಲಿ ಗ್ರಾಮ ಆಡಳಿತಾಧಿಕಾರಿ ಹುದ್ದೆ (Village administrative officer) ಹಾಗೂ ಬಿಡಿಎ ಮತ್ತು ಇತರೆ ಹುದ್ದೆಗಳ ನೇಮಕಾತಿಗೆ ಮತ್ತೆ ಅರ್ಜಿ ಆಹ್ವಾನಿಸಲಾಗಿದೆ. ಸೆ.19ರಿಂದ ಸೆ.28ವರೆಗೆ (9 ದಿನ) ಅರ್ಜಿ ಸಲ್ಲಿಸಲು ಮತ್ತೊಮ್ಮೆ ಅವಕಾಶ ನೀಡಲಾಗಿದೆ. ಇದೀಗ ಸೆ. 29ಕ್ಕೆ ಕಡ್ಡಾಯ ಕನ್ನಡ ಪರೀಕ್ಷೆ ನಡೆಯುವ ಹಿನ್ನೆಲೆಯಲ್ಲಿ ಪ್ರವೇಶ ಪತ್ರಗಳನ್ನು ಬಿಡುಗಡೆ ಮಾಡಲಾಗಿದೆ.
ಈ ಬಗ್ಗೆ ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಎಚ್. ಪ್ರಸನ್ನ ಅವರು ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿದ್ದು, ಗ್ರಾಮ ಆಡಳಿತಾಧಿಕಾರಿ ಮತ್ತು ಜಿಟಿಟಿಸಿ ಹುದ್ದೆಗಳಿಗೆ ಸೆ.29ಕ್ಕೆ ಕಡ್ಡಾಯ ಕನ್ನಡ ಪರೀಕ್ಷೆ ಇದ್ದು, ಪ್ರವೇಶ ಪತ್ರವನ್ನು ಡೌನ್ ಲೋಡ್ ಮಾಡಿಕೊಳ್ಳಲು ವೆಬ್ ಸೈಟ್ ನಲ್ಲಿ ಲಿಂಕ್ ಬಿಡಲಾಗಿದೆ. ಕೆಲವರು ಎರಡೂ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ್ದು, ಅಂತಹವರಿಗೆ ಎರಡೆರಡು ಪ್ರವೇಶ ಪತ್ರಗಳು ಬಂದಿವೆ. ಅಂತಹವರು ತಮಗೆ ಇಚ್ಛೆ ಇರುವ ಒಂದು ಕೇಂದ್ರದಲ್ಲಿ ಪರೀಕ್ಷೆ ಬರೆಯಬೇಕು.
ಪರೀಕ್ಷೆ ನಂತರ ಎರಡೂ ಪ್ರವೇಶ ಪತ್ರಗಳ ಜೆರಾಕ್ಸ್ ಪ್ರತಿಯನ್ನು ಕೆಇಎಗೆ ಅಂಚೆ ಅಥವಾ ಖುದ್ದಾಗಿ ತಲುಪಿಸಬೇಕು. ಪ್ರತ್ಯೇಕ ನೇಮಕಾತಿ ಅಧಿಸೂಚನೆಗಳಾದ ಕಾರಣಕ್ಕೆ ಈ ರೀತಿ ಎರಡೆರಡು ಪ್ರವೇಶ ಪತ್ರ ಜನರೇಟ್ ಆಗಿದ್ದು, ಆತಂಕಪಡುವ ಅಗತ್ಯ ಇಲ್ಲಎಂದು ತಿಳಿಸಿದ್ದಾರೆ.
ಗ್ರಾಮ ಆಡಳಿತಾಧಿಕಾರಿ ಹುದ್ದೆಗಳು, ಜಿಟಿಟಿಸಿ ಹುದ್ದೆಗಳ ಪರೀಕ್ಷೆ ಪ್ರವೇಶ ಪತ್ರಕ್ಕೆ ಇಲ್ಲಿ ಕ್ಲಿಕ್ ಮಾಡಿ
#VAO #GTTC ಹುದ್ದೆಗಳಿಗೆ ಸೆ.29ಕ್ಕೆ ಕಡ್ಡಾಯ ಕನ್ನಡ ಪರೀಕ್ಷೆ ಇದ್ದು ಪ್ರವೇಶ ಪತ್ರವನ್ನು ಡೌನ್ ಲೋಡ್ ಮಾಡಿಕೊಳ್ಳಲು #KEA ವೆಬ್ ಸೈಟ್ ನಲ್ಲಿ ಲಿಂಕ್ ಬಿಡಲಾಗಿದೆ. ಕೆಲವರು ಎರಡೂ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ್ದು ಅಂತಹವರಿಗೆ ಎರಡೆರಡು ಪ್ರವೇಶ ಪತ್ರಗಳು ಬಂದಿವೆ. ಅಂತಹವರು ತಮಗೆ ಇಚ್ಛೆ ಇರುವ ಒಂದು ಕೇಂದ್ರದಲ್ಲಿ ಪರೀಕ್ಷೆ ಬರೆಯಬೇಕು.
— ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) (@KEA_karnataka) September 21, 2024
ಈ ಸುದ್ದಿಯನ್ನೂ ಓದಿ | Village administrative officer: ಗ್ರಾಮ ಆಡಳಿತಾಧಿಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಮತ್ತೆ ಅವಕಾಶ
ಈಗಾಗಲೇ ಅರ್ಜಿ ಸಲ್ಲಿಸಿದವರಿಗೆ ಸೆ.29ಕ್ಕೆ ಕಡ್ಡಾಯ ಕನ್ನಡ ಪರೀಕ್ಷೆ
ಈಗಾಗಲೇ ಗ್ರಾಮ ಆಡಳಿತ ಅಧಿಕಾರಿ ಹುದ್ದೆ ಮತ್ತು ಜಿಟಿಟಿಸಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದವರಿಗೆ ಕಡ್ಡಾಯ ಕನ್ನಡ ಪರೀಕ್ಷೆ ಸೆ. 29 ಮತ್ತು ವಯೋಮಿತಿ ಸಡಿಲಿಕೆಯಿಂದ ಹೊಸದಾಗಿ ಅರ್ಜಿ ಸಲ್ಲಿಸಿದವರಿಗೆ ಅ.26ರಂದು ಕಡ್ಡಾಯ ಕನ್ನಡ ಪರೀಕ್ಷೆ ನಡೆಯಲಿದೆ. ಸ್ಪರ್ಧಾತ್ಮಕ ಪರೀಕ್ಷೆ ಅಕ್ಟೋಬರ್ 27 ರಂದು ನಡೆಯಲಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಈಗಾಗಲೇ ಮಾಹಿತಿ ನೀಡಿದೆ.
#PSI ಸೇರಿದಂತೆ ವಿವಿಧ ಪರೀಕ್ಷೆಗಳ ಪರಿಷ್ಕೃತ ವೇಳಾಪಟ್ಟಿಯನ್ನು #KEA ಪ್ರಕಟಿಸಿದೆ.
— ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) (@KEA_karnataka) September 17, 2024
PSI ಪರೀಕ್ಷೆ OCT 3ಕ್ಕೆ ನಡೆಯಲಿದೆ.
ವಯೋಮಿತಿ ಸಡಿಲ ಮಾಡಿರುವ ಕಾರಣ #VAO ಮತ್ತು #GTTC ಹುದ್ದೆಗಳಿಗೆ ಸೆ.19ರಿಂದ 9 ದಿನ ಅರ್ಜಿ ಸಲ್ಲಿಸಲು ಮತ್ತೊಮ್ಮೆ ಅವಕಾಶ ನೀಡಲಾಗಿದೆ.@CMofKarnataka @drmcsudhakar pic.twitter.com/92wmxAwTht
ಆಯ್ಕೆ ಹೇಗೆ?
ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳನ್ನು ಕೆಇಎ ಭರ್ತಿ ಮಾಡಲಿದೆ. ಕೆಇಎ ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ತೇರ್ಗಡೆಯಾಗುವ ಅಭ್ಯರ್ಥಿಗಳನ್ನು ಈ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ. ಈ ಪರೀಕ್ಷೆ ಆಫ್‌ಲೈನ್-ಒಎಂಆರ್ ಮಾದರಿಯಲ್ಲಿ ಇರುತ್ತದೆ. ಪರೀಕ್ಷೆಗೆ 200 ಅಂಕಗಳನ್ನು ಒಳಗೊಂಡ 2 ಪತ್ರಿಕೆ ಇರಲಿದ್ದು, ಜತೆಗೆ ಕನ್ನಡ ಭಾಷಾ ಪರೀಕ್ಷೆ ಕಡ್ಡಾಯವಾಗಿದೆ. ಇದರಲ್ಲಿ ಕನಿಷ್ಠ 50 ಅಂಕ ಗಳಿಸಬೇಕು. ಪರೀಕ್ಷೆಗಳನ್ನು ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ನಡೆಸಲಾಗುತ್ತದೆ. ಈ ಹಿಂದೆ ದ್ವಿತೀಯ ಪಿಯುಸಿ ಅಥವಾ 12ನೇ ತರಗತಿ ಅಂಕಗಳ ಆಧಾರದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಮೆರಿಟ್ ಆಧಾರದಲ್ಲಿ ಹುದ್ದೆಗಳಿಗೆ ಆಯ್ಕೆ ನಡೆಯುತ್ತಿತ್ತು. ಆದರೆ ಈ ಬಾರಿಯಿಂದ ಆಯ್ಕೆ ವಿಧಾನವನ್ನು ಬದಲಿಸಲಾಗಿದೆ.
ಈ ಸುದ್ದಿಯನ್ನೂ ಓದಿ | KEA Exam: ಪಿಎಸ್‌ಐ, ವಿಎಒ, ಕೆ-ಸೆಟ್ ಸೇರಿ ವಿವಿಧ ಪರೀಕ್ಷೆಗಳ ಪರಿಷ್ಕೃತ ವೇಳಾಪಟ್ಟಿ ಪ್ರಕಟ
ಸ್ಪರ್ಧಾತ್ಮಕ ಪರೀಕ್ಷೆ ಬಳಿಕ ಅಭ್ಯರ್ಥಿಗಳ ರ‍್ಯಾಂಕಿಂಗ್ ಪಟ್ಟಿ ಬಿಡುಗಡೆಯಾಗಲಿದೆ. ನಂತರ ಜಿಲ್ಲಾವಾರು ಪಟ್ಟಿಯಲ್ಲಿ ಅಗ್ರಸ್ಥಾನ ಪಡೆದವರನ್ನು ಕೌನ್ಸೆಲಿಂಗ್ ಮೂಲಕ ಸ್ಥಳ ನಿಯೋಜನೆಗೊಳಿಸಲಾಗುತ್ತದೆ. ನಿಗದಿತ ಮೀಸಲಾತಿಯಂತೆ ಹುದ್ದೆಗಳನ್ನು ಗುರುತಿಸಿ, ಆ ಪ್ರಕಾರ ಹುದ್ದೆ ಭರ್ತಿ ಮಾಡಲಾಗುತ್ತದೆ.