ಬೆಂಗಳೂರು: ಸಮಾಜ ಕಲ್ಯಾಣ ಇಲಾಖೆ ವತಿಯಿಂದ 2024-25 ನೇ ಸಾಲಿನ ಎಸ್.ಎಸ್.ಎಲ್.ಸಿ ಹಾಗೂ ಮೆಟ್ರಿಕ್ ನಂತರದ ವಿವಿಧ ಕೋರ್ಸ್ಗಳಲ್ಲಿ ಪ್ರಥಮ ಬಾರಿಗೆ ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾಗಿರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅರ್ಹ ವಿದ್ಯಾರ್ಥಿಗಳಿಂದ ಪ್ರೋತ್ಸಾಹಧನಕ್ಕೆ (Prize Money) ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ವಿದ್ಯಾರ್ಥಿಗಳು ವೆಬ್ ಸೈಟ್ https://swdservices.karnataka.gov.in ನಲ್ಲಿ ಅರ್ಜಿ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು (ಗ್ರೇಡ್-1), ಸಮಾಜ ಕಲ್ಯಾಣ ಇಲಾಖೆ, ಪ್ರಥಮ ದರ್ಜೆ ಕಾಲೇಜು ಪಕ್ಕ, ಬೆಂಗಳೂರು ಉತ್ತರ ತಾಲೂಕು / ಯಲಹಂಕ ಅಥವಾ ದೂರವಾಣಿ ಸಂಖ್ಯೆ : 080-28461351 ಗೆ ಸಂಪರ್ಕಿಸಬಹುದು ಎಂದು ಬೆಂಗಳೂರು ಉತ್ತರ ತಾಲ್ಲೂಕಿನ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಈ ಸುದ್ದಿಯನ್ನೂ ಓದಿ | KEA Exam: ಗ್ರಾಮ ಆಡಳಿತಾಧಿಕಾರಿ, ಜಿಟಿಟಿಸಿ ಹುದ್ದೆಗಳ ನೇಮಕಾತಿ; ಕಡ್ಡಾಯ ಕನ್ನಡ ಪರೀಕ್ಷೆ ಪ್ರವೇಶ ಪತ್ರ ಪ್ರಕಟ
Law Training: ಕಾನೂನು ಪದವೀಧರರ ತರಬೇತಿಗಾಗಿ ಅರ್ಜಿ ಆಹ್ವಾನ; ಸೆ.30 ಕೊನೆಯ ದಿನ
ಬೆಂಗಳೂರು: ಸಮಾಜ ಕಲ್ಯಾಣ ಇಲಾಖೆ ವತಿಯಿಂದ 2024-25ನೇ ಸಾಲಿಗೆ ಆಡಳಿತ ನ್ಯಾಯಾಧೀಕರಣ ಯೋಜನೆಯಡಿ ತರಬೇತಿ ನೀಡಲು ಬೆಂಗಳೂರು ನಗರ ಜಿಲ್ಲಾ ವ್ಯಾಪ್ತಿಯಲ್ಲಿರುವ ಅರ್ಹ ಪರಿಶಿಷ್ಟ ಜಾತಿಯ ಕಾನೂನು ಪದವೀಧರರಿಂದ ಆನ್ ಲೈನ್ ಮೂಲಕ ಅರ್ಜಿಗಳನ್ನು (Law Training) ಆಹ್ವಾನಿಸಲಾಗಿದೆ.
ಅಭ್ಯರ್ಥಿಗಳು 40 ವರ್ಷ ವಯೋಮಿತಿಯೊಳಗಿರಬೇಕು. ತರಬೇತಿ ಅವಧಿ 2 ವರ್ಷಗಳಾಗಿದ್ದು, ಆಯ್ಕೆಯಾದ ಅಭ್ಯರ್ಥಿಗಳನ್ನು ಜಿಲ್ಲಾ ಪಬ್ಲಿಕ್ ಪ್ರಾಸಿಕ್ಯೂಟರ್ ಅಥವಾ ಹಿರಿಯ ವಕೀಲರವರಲ್ಲಿ ತರಬೇತಿಗೆ ನೀಯೋಜಿಸಲಾಗುವುದು. ಬೆಂಗಳೂರು ನಗರ ಜಿಲ್ಲೆಯ ಅಭ್ಯರ್ಥಿಗಳು ಮಾತ್ರ ತರಬೇತಿಗೆ ಅರ್ಜಿ ಸಲ್ಲಿಸಬಹುದು.
ಆಸಕ್ತ ಪರಿಶಿಷ್ಟ ಜಾತಿಯ ಅಭ್ಯರ್ಥಿಗಳು ವೆಬ್ ಸೈಟ್ https://swdservices.karnataka.gov.in/indexKan.aspx ನಲ್ಲಿ ಅರ್ಜಿಗಳನ್ನು ಸೆಪ್ಟೆಂಬರ್ 30ರೊಳಗೆ ಸಲ್ಲಿಸಬಹುದು.
ಆನ್ ಲೈನ್ ಮೂಲಕ ಸಲ್ಲಿಸಿದ ಅರ್ಜಿಗಳ ಜೊತೆಗೆ ದಾಖಲಾತಿಗಳನ್ನು ಜಂಟಿ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ಬೆಂಗಳೂರು ನಗರ ಜಿಲ್ಲೆ, ನಂ.21/1,1ನೇ ಮಹಡಿ, ಜೆಲ್ಲೇಟಾ ಟವರ್ಸ್, ಮಿಷನ್ ರಸ್ತೆ, ಸಂಪಂಗಿರಾಮನಗರ, ಬೆಂಗಳೂರು-560027 ಇಲ್ಲಿಗೆ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 080-22240449 ಗೆ ಸಂಪರ್ಕಿಸಬಹುದು ಎಂದು ಬೆಂಗಳೂರು ನಗರ ಜಿಲ್ಲೆ, ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.