ತಾಲ್ಲೂಕು ಮಟ್ಟದ ಮಹಿಳಾ ವಿಚಾರಗೋಷ್ಠಿ ಕಾರ್ಯಕ್ರಮದಲ್ಲಿ ಹೇಳಿಕೆ
ಶಿಡ್ಲಘಟ್ಟ: ಮಕ್ಕಳಿಗೆ ಮೂಲ ಸಂಸ್ಕೃತಿ ಕಲಿಸಿ ಸ್ವಾಭಿಮಾನದ ಬದುಕು ಕಟ್ಟಲು ಪ್ರೆರೇಪಿಸಿ ಎಂದು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬೆಂಗಳೂರು ಪ್ರಾದೇಶಿಕ ನಿರ್ದೇಶಕ ಸೀನಪ್ಪ ಎಂ. ಅಭಿಪ್ರಾಯಪಟ್ಟರು.
ನಗರದ ಶ್ರೀ ವಾಸವಿ ಕಲ್ಯಾಣ ಮಂಟಪದಲ್ಲಿ ಹಮ್ಮಿಕೊಂಡಿದ್ದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃಡಿ ಯೋಜನೆ ಬಿ ಸಿ ಟ್ರಸ್ಟ್ (ರಿ.) ಶಿಡ್ಲಘಟ್ಟ ಇದರ ಜ್ಞಾನವಿಕಾಸ ಕಾರ್ಯಕ್ರಮದ ಅಡಿಯಲ್ಲಿ ನಡೆದ ತಾಲೂಕು ಮಟ್ಟದ ಮಹಿಳಾ ವಿಚಾರಗೋಷ್ಠಿಯಲ್ಲಿ ಮಾತನಾಡಿದ ಅವರು ಮಕ್ಕಳನ್ನು ಶಾಲೆಯ ತರಗತಿಯಲ್ಲಿ ಪಡೆಯುವ ಅಂಕಗಳ ಹಿಂದೆ ಹೋಗದೆ ಸಂಸ್ಕಾರ, ಸಂಸ್ಕೃತಿಯ ಹಿಂದೆ ಹೋಗುವಂತೆ ಬೆಳೆಸಬೇಕು, ಎಂದರು.
ಆರ್ಥಿಕ ಸೌಲಭ್ಯ ಒದಗಿಸುವುದರೊಂದಿಗೆ ನಿರ್ಗತಿಕರ ಮಾಶಾಸನ, ಜ್ಞಾನದೀಪ ಕಾರ್ಯಕ್ರಮದಡಿಯಲ್ಲಿ ಶಿಕ್ಷಕರ ಒದಗಣೆ, ಸಾಮೂಹಿಕ ಧಾರ್ಮಿಕ ಕಾರ್ಯಕ್ರಮಗಳು, ಕೆರೆ ಹೂಳೆತ್ತುವ ಕಾರ್ಯಕ್ರಮ, ದೇವಸ್ಥಾನಗಳ ಜೀರ್ಣೋ ದ್ಧಾರಕ್ಕಾಗಿ ಅನುದಾನ, ಹಾಲಿನ ಡೈರಿ ಕಟ್ಟಡ ರಚನೆಗೆ ಅನುದಾನ, ಸುಜ್ಞಾನನಿಧಿ ಶಿಷ್ಯ ವೇತನ ಮುಂತಾದ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಇದರೊಂದಿಗೆ ತಾಲೂಕಿನಲ್ಲಿ ಮಹಿಳಾ ಜ್ಞಾನವಿಕಾಸ ಕಾರ್ಯ ಕ್ರಮದಲ್ಲಿ ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕಾಗಿ ಹತ್ತು ಹಲವು ಕಾರ್ಯಕ್ರಮಗಳನ್ನು ನಿರಂತರವಾಗಿ ಹಮ್ಮಿಕೊಳ್ಳಲಾಗುತ್ತಿದೆ. ಇದರಿಂದ ಗ್ರಾಮೀಣ ಮಹಿಳೆಯರ ಸಾಮಾಜಿಕ ಮತ್ತು ಬೌದ್ಧಿಕ ಮಟ್ಟ ಸುಧಾರಿಸುವು ದರಲ್ಲಿ ಅನುಕೂಲವಾಗಿದೆ ಎಂದು ತಿಳಿಸಿದರು.
ಜಂಗಮಕೋಟೆ ಸಾರ್ವಜನಿಕ ಆಸ್ಪತ್ರೆಯ ವೈದ್ಯಾಧಿಕಾರಿ ಅಂಬಿಕಾ ಮಾತನಾಡಿ ಭಾರತದಲ್ಲಿ ಸುಮಾರು 77,000 ಜನ ಹೆಣ್ಣು ಮಕ್ಕಳು ಗರ್ಭಕೋಶ ಕ್ಯಾನ್ಸರ್ ಸಮಸ್ಯೆಯಿಂದ ಬಳಲುತ್ತಿದ್ದಾರೆ ಹಾಗೂ ಈ ಸಮಸ್ಯೆಯಿಂದ ತಪ್ಪಿಸಿ ಕೊಳ್ಳಲು ಕನಿಷ್ಠ ಮೂರು ವರ್ಷಕ್ಕೊಮ್ಮೆ ಗರ್ಭಕೋಶ ಕ್ಯಾನ್ಸರ್ ತಪಾಸಣೆ ಮಾಡಿಸಿಕೊಳ್ಳಬೇಕೆಂದು ತಿಳಿಸಿದರು. ಉತ್ತಮ ಆಹಾರ ಪದ್ಧತಿ, ನಿಗದಿತ ವ್ಯಾಯಾಮ ಮುಂತಾದವುಗಳನ್ನು ರೂಡಿಸಿಕೊಳ್ಳುವುದರಿಂದ ಕ್ಯಾನ್ಸರ್ ಯಿಂದ ದೂರವಿರಬಹುದು ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಗ್ರಾಮಾಭಿವೃದ್ಧಿ ಯೋಜನೆಯ ಚಿಕ್ಕಬಳ್ಳಾಪುರ ಜಿಲ್ಲಾ ನಿರ್ದೇಶಕ ಪ್ರಶಾಂತ್ ಸಿ. ಎಸ್ ರವರು, ಬೆಂಗಳೂರು ಪ್ರಾದೇಶಿಕ ವಿಭಾಗದ ಜ್ಞಾನವಿಕಾಸ ಯೋಜನಾಧಿಕಾರಿ ಸಂಧ್ಯಾ ಶೆಟ್ಟಿ, ತಾಲೂಕಿನ ಯೋಜನಾಧಿಕಾರಿ ಸುರೇಶ್ ಗೌಡ ಎಸ್,ಡಾಲ್ಫಿನ್ ಶಾಲೆಯ ಆಡಳಿತ ಅಧಿಕಾರಿ ಚಂದನ. ಅಶೋಕ್ ಕುಮಾರ್ಜ್ಞಾನವಿಕಾಸ ಸಮನ್ವಯಾಧಿಕಾರಿ ಅರುಣಾ ಹೆಚ್. ಶಿಡ್ಲಘಟ್ಟ ವಲಯದ ಮೇಲ್ವಿಚಾರಕ ಮಂಜುನಾಥ್, ಜ್ಞಾನವಿಕಾಸ ಸಂಯೋಜಕಿಯರು ಹಾಗೂ ಜ್ಞಾನವಿಕಾಸ ಕೇಂದ್ರದ ಸದಸ್ಯರು ಭಾಗವಹಿಸಿದ್ದರು.