ಬೆಂಗಳೂರು : ಕೆಲವು ಜನರಲ್ಲಿ ಮಲಬದ್ಧತೆ ಸಮಸ್ಯೆ ಕಾಡುತ್ತದೆ. ಇದಕ್ಕೆ ನಮ್ಮ ಕೆಟ್ಟ ಆಹಾರ ಪದ್ಧತಿಯೇ ಕಾರಣವಾಗಿದೆ. ಮಲಬದ್ಧತೆ ಸಮಸ್ಯೆಯನ್ನು ಆರಂಭದಲ್ಲೇ ನಿವಾರಿಸಿಕೊಳ್ಳಬೇಕು. ಇಲ್ಲವಾದರೆ ಇದರಿಂದ ಇನ್ನೂ ಅನೇಕ ಆರೋಗ್ಯ ಸಮಸ್ಯೆಗಳು ಶುರುವಾಗಬಹುದು. ಕೆಲವು ಆಹಾರಗಳು ಮತ್ತು ಪಾನೀಯಗಳು ಜೀರ್ಣಕ್ರಿಯೆಯನ್ನು ಉತ್ತೇಜಿಸುವ ಮೂಲಕ ಮತ್ತು ಕರುಳಿನ ಕಾರ್ಯವನ್ನು ಸುಧಾರಿಸುವ ಮೂಲಕ ಮಲಬದ್ಧತೆಯನ್ನು(Herbal Tea for Constipation) ನಿವಾರಿಸಲು ಸಹಾಯ ಮಾಡುತ್ತದೆ.
ಗಿಡಮೂಲಿಕೆ ಚಹಾಗಳು ಮಲಬದ್ಧತೆಗೆ ಪರಿಣಾಮಕಾರಿ ಪರಿಹಾರಗಳಾಗಿವೆ. ಈ ಚಹಾಗಳು ಜೀರ್ಣಕಾರಿ ಸ್ನಾಯುಗಳನ್ನು ಸಡಿಲಗೊಳಿಸುವ ಮೂಲಕ, ಕರುಳಿನ ಚಲನೆಯನ್ನು ಹೆಚ್ಚಿಸುವ ಮೂಲಕ ಮಲವನ್ನು ಮೃದುಗೊಳಿಸಿ ಅದು ಸುಲಭವಾಗಿ ಹೊರಗೆ ಹೋಗುವಂತೆ ಮಾಡುತ್ತದೆ. ಹಾಗಾಗಿ ಈ ಚಹಾಗಳನ್ನು ಆಹಾರದಲ್ಲಿ ಸೇರಿಸುವುದರಿಂದ ಮಲಬದ್ಧತೆಯನ್ನು ನೈಸರ್ಗಿಕವಾಗಿ ನಿವಾರಿಸಿಕೊಳ್ಳಬಹುದು. ಇಲ್ಲಿ ಮಲಬದ್ಧತೆಯನ್ನು ನಿವಾರಿಸಲು ಸಹಾಯ ಮಾಡುವಂತಹ ಗಿಡಮೂಲಿಕೆ ಚಹಾಗಳ ಬಗ್ಗೆ ತಿಳಿಸಲಾಗಿದೆ.
ಪುದೀನಾ ಚಹಾ:
ಪುದೀನಾ ಚಹಾದಲ್ಲಿ ಮೆಂಥಾಲ್ ಇದೆ. ಇದು ಜೀರ್ಣಾಂಗವ್ಯೂಹದ ಸ್ನಾಯುಗಳನ್ನು ಸಡಿಲಗೊಳಿಸಲು ಸಹಾಯ ಮಾಡುತ್ತದೆ. ಇದು ಹೊಟ್ಟೆಯುಬ್ಬರವನ್ನು ಕಡಿಮೆ ಮಾಡಲು, ಪಿತ್ತರಸದ ಉತ್ಪತ್ತಿಯನ್ನು ಹೆಚ್ಚಿಸಿ ಮತ್ತು ಕರುಳಿನ ಚಲನೆಯನ್ನು ಸರಾಗಗೊಳಿಸಲು ಸಹಾಯ ಮಾಡುತ್ತದೆ. ಇದರಿಂದ ಮಲಬದ್ಧತೆ ನಿವಾರಣೆಯಾಗುತ್ತದೆ.
ಶುಂಠಿ ಚಹಾ:
ಶುಂಠಿ ಚಹಾವು ಹೊಟ್ಟೆಯಲ್ಲಿ ಆಮ್ಲದ ಉತ್ಪಾದನೆಯನ್ನು ಹೆಚ್ಚಿಸುವ ಮೂಲಕ ಮತ್ತು ಕರುಳಿನ ಮೂಲಕ ಆಹಾರದ ಚಲನೆಯನ್ನು ಉತ್ತೇಜಿಸುವ ಮೂಲಕ ಜೀರ್ಣಕ್ರಿಯೆಗೆ ಸಹಾಯ ಮಾಡುತ್ತದೆ. ಹಾಗಾಗಿ ಮಲಬದ್ಧತೆಗೆ ಇದು ಅತ್ಯುತ್ತಮ ಪರಿಹಾರವಾಗಿದೆ.
ಫೆನ್ನೆಲ್ ಚಹಾ:
ಫೆನ್ನೆಲ್ ಚಹಾವು ಜೀರ್ಣಕಾರಿ ಸ್ನಾಯುಗಳನ್ನು ಸಡಿಲಗೊಳಿಸಲು ಮತ್ತು ಹೊಟ್ಟೆಯುಬ್ಬರವನ್ನು ಕಡಿಮೆ ಮಾಡಲು ಸಹಾಯ ಮಾಡುವ ಸಂಯುಕ್ತಗಳನ್ನು ಹೊಂದಿರುತ್ತದೆ. ಇದು ಜೀರ್ಣಕ್ರಿಯೆ ಆರೋಗ್ಯವಾಗಿರುವಂತೆ ಮಾಡುತ್ತದೆ ಮತ್ತು ಮಲವನ್ನು ಮೃದುಗೊಳಿಸಲು ಸಹಾಯ ಮಾಡುತ್ತದೆ. ಇದರಿಂದ ಮಲ ಹಾದುಹೋಗುವುದು ಸುಲಭವಾಗುತ್ತದೆ. ಇದರಿಂದಾಗಿ ಮಲಬದ್ಧತೆ ಸಮಸ್ಯೆ ಕಾಡುವುದಿಲ್ಲ.
ಕ್ಯಾಮೊಮೈಲ್ ಚಹಾ:
ಕ್ಯಾಮೊಮೈಲ್ ಚಹಾವು ಕರುಳಿನ ಸ್ನಾಯುಗಳನ್ನು ಸಡಿಲಗೊಳಿಸಲು ಮತ್ತು ಕರುಳಿನಲ್ಲಿ ಉರಿಯೂತವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಇದು ಕರುಳಿನ ಚಲನೆಯನ್ನು ಹೆಚ್ಚಿಸುವ ಮೂಲಕ ಮಲಬದ್ಧತೆಗೆ ಪರಿಹಾರವನ್ನು ನೀಡುತ್ತದೆ.
ಲೈಕೋರೈಸ್ ರೂಟ್ ಟೀ:
ಲೈಕೋರೈಸ್ ರೂಟ್ ಟೀ ಜೀರ್ಣಾಂಗ ವ್ಯವಸ್ಥೆಯನ್ನು ಆರೋಗ್ಯವಾಗಿಡುತ್ತದೆ. ಇದು ಉರಿಯೂತ ನಿವಾರಿಸಿ ಹೊಟ್ಟೆಯನ್ನು ತಂಪಾಗಿಡುತ್ತದೆ. ಇದು ಮಲವನ್ನು ಮೃದುಗೊಳಿಸುವ ಮೂಲಕ ಮತ್ತು ಜೀರ್ಣಕಾರಿ ಸಮಸ್ಯೆಗಳನ್ನು ತೊಲಗಿಸಿ ಕರುಳಿನ ಚಲನೆಯನ್ನು ಹೆಚ್ಚಿಸುವ ಮೂಲಕ ಮಲಬದ್ಧತೆಯನ್ನು ಹೋಗಲಾಡಿಸುತ್ತದೆ.
ಇದನ್ನೂ ಓದಿ:ಗರ್ಭಧಾರಣೆ ಮತ್ತು ಹೆರಿಗೆ ನಂತರ ಸೇವಿಸುವ ಆಹಾರದ ಬಗ್ಗೆ ಇರುವ ಈ ವಿಚಾರ ನಿಜವೇ? ಸುಳ್ಳೆ?
ಅಲೋವೆರಾ ಚಹಾ:
ಅಲೋವೆರಾದಲ್ಲಿ ಆಂಥ್ರಾಕ್ವಿನೋನ್‌ಗಳಿವೆ. ಇವು ಮಲವನ್ನು ಮೃದುಗೊಳಿಸಲು ಮತ್ತು ಜೀರ್ಣಾಂಗ ವ್ಯವಸ್ಥೆ ಸರಿಯಾಗಿ ಕಾರ್ಯ ನಿರ್ವಹಿಸಲು ಸಹಾಯ ಮಾಡುತ್ತದೆ. ಇದು ಕರುಳಿನ ಚಲನೆಯನ್ನು ಸುಲಭಗೊಳಿಸುತ್ತದೆ. ಇದರಿಂದ ಮಲಬದ್ಧತೆ ಸಮಸ್ಯೆ ಕಾಡುವುದಿಲ್ಲ.
ಈ ಗಿಡಮೂಲಿಕೆ ಚಹಾಗಳ ಮೂಲಕ ನೀವು ಮಲಬದ್ಧತೆಯನ್ನು ನೈಸರ್ಗಿಕ ವಿಧಾನಗಳಿಂದ ನಿವಾರಿಸಿಕೊಳ್ಳಬಹುದು. ಇವು ನಿಮ್ಮ ಜೀರ್ಣಕ್ರಿಯೆ ಸರಿಯಾಗಿ ಆಗುವಂತೆ ಮಾಡುತ್ತದೆ. ಹಾಗಾಗಿ ಅವುಗಳನ್ನು ಪ್ರತಿದಿನ ಸೇವಿಸುವುದರಿಂದ ಆರೋಗ್ಯಕರ ಜೀರ್ಣಾಂಗ ವ್ಯವಸ್ಥೆಯನ್ನು ಕಾಪಾಡಿಕೊಳ್ಳಲು ಸಹಾಯ ಮಾಡುತ್ತದೆ.