ನವದೆಹಲಿ: ಮಕ್ಕಳ ಅಶ್ಲೀಲ ಚಿತ್ರ, ವಿಡಿಯೋಗಳನ್ನು ನೋಡುವುದು ಮತ್ತು ಅದನ್ನು ಡೌನ್‌ಲೋಡ್ ಮಾಡಿಕೊಳ್ಳುವುದು ಶಿಕ್ಷಾರ್ಹ ಅಪರಾಧ ಎಂದು ಸುಪ್ರೀಂ ಕೋರ್ಟ್(Supreme Court) ಮಹತ್ವದ ಆದೇಶ ಹೊರಡಿಸಿದೆ. ಆ ಮೂಲಕ ಮಕ್ಕಳ ಅಶ್ಲೀಲ ವಿಡಿಯೋ ಬಗ್ಗೆ ಮದ್ರಾಸ್ ಹೈಕೋರ್ಟ್(Madras High Court) ನೀಡಿದ್ದ ಆದೇಶವನ್ನು ರದ್ದುಗೊಳಿಸಿದ್ದು, ಇದು ಶಿಕ್ಷಾರ್ಹ ಅಪರಾಧ ಮತ್ತು ಪೋಕ್ಸೋ ಕಾಯಿದೆ(POCSO Act)ಯಡಿಯಲ್ಲಿ ಕೇಸ್ ದಾಖಲಿಸಲಾಗುತ್ತದೆ ಎಂದು ಕೋರ್ಟ್ ಹೇಳಿದೆ.
ಮಕ್ಕಳ ಅಶ್ಲೀಲ ಚಿತ್ರ ನೋಡುವುದು ಡೌನ್‌ಲೋಡ್ ಮಾಡುವುದು ಅಪರಾಧ ಅಲ್ಲವೆಂದು ಮದ್ರಾಸ್ ಹೈಕೋರ್ಟ್ ಈ ಹಿಂದೆ ಆದೇಶ ನೀಡಿತ್ತು. ಇದೀಗ ಇದೇ ವಿಚಾರವಾಗಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಜೆ.ಬಿ. ಪರ್ದಿವಾಲಾ ಇದ್ದ ನ್ಯಾಯಪೀಠ, ಹೈಕೋರ್ಟ್ ತನ್ನ ಆದೇಶದಲ್ಲಿ ತಪ್ಪನ್ನು ಮಾಡಿದೆ. ಆದ್ದರಿಂದ ನಾವು HC ಆದೇಶವನ್ನು ರದ್ದುಗೊಳಿಸಿದ್ದೇವೆ ಮತ್ತು ನಾವು ವಿಷಯವನ್ನು ಮತ್ತೆ ಸೆಷನ್ಸ್ ನ್ಯಾಯಾಲಯಕ್ಕೆ ಕಳುಹಿಸುತ್ತೇವೆ ಎಂದಿದ್ದಾರೆ.
Supreme Court says that mere storage of child pornographic material is an offence under the Protection of Children from Sexual Offences Act (POCSO Act).
— ANI (@ANI) September 23, 2024
Supreme Court suggests Parliament to bring a law amending the POCSO Act to replace the term "child pornography" with "Child… pic.twitter.com/mNwDXX88fb
“ಮಕ್ಕಳ ಪೋರ್ನ್” ಎಂಬ ಪದವನ್ನು “ಮಕ್ಕಳ ಲೈಂಗಿಕ ಶೋಷಣೆ ಮತ್ತು ನಿಂದನೆ” ಎಂದು ಬದಲಿಸಲು POCSO ಕಾಯಿದೆಗೆ ತಿದ್ದುಪಡಿ ಮಾಡುವ ಕಾನೂನನ್ನು ಸಂಸತ್ತು ತರಬೇಕು ಎಂದು ಸುಪ್ರೀಂ ಕೋರ್ಟ್ ಸೂಚಿಸಿದೆ. ಈ ತಿದ್ದುಪಡಿ ಮಸೂದೆ ಅಂಗೀಕಾರಗೊಳ್ಳುವವರೆಗೆ ಕೇಂದ್ರ ಸರ್ಕಾರವು ಈ ಕುರಿತು ಸುಗ್ರೀವಾಜ್ಞೆಯನ್ನು ತರಬಹುದು ಎಂದು ನ್ಯಾಯಾಲಯವು ಹೇಳಿದೆ. ಅಲ್ಲದೇ “ಮಕ್ಕಳ ಪೋರ್ನ್” ಎಂಬ ಪದವನ್ನು ಬಳಸದಂತೆ ಆದೇಶ ಹೊರಡಿಸುವಂತೆ ಸುಪ್ರೀಂಕೋರ್ಟ್ ಎಲ್ಲಾ ನ್ಯಾಯಾಲಯಗಳಿಗೆ ಆದೇಶಿಸಿದೆ.
ಮಕ್ಕಳ ಅಶ್ಲೀಲ ಚಿತ್ರಗಳನ್ನು ಡೌನ್‌ಲೋಡ್ ಮಾಡುವುದು ಮತ್ತು ವೀಕ್ಷಿಸುವುದು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆ ಮತ್ತು ಮಾಹಿತಿ ತಂತ್ರಜ್ಞಾನ (ಐಟಿ) ಕಾಯ್ದೆಯಡಿ ಅಪರಾಧವಲ್ಲ ಎಂದು ಹೇಳಿದ ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ಸಲ್ಲಿಸಿದ ಅರ್ಜಿಯನ್ನು ಆಲಿಸಲು ಸುಪ್ರೀಂ ಕೋರ್ಟ್ ಸಮ್ಮತಿಸಿತ್ತು ಅದರ ಪ್ರಕಾರ ಇಂದು ನಡೆದ ವಿಚಾರಣೆಯಲ್ಲಿ ಈ ಖಡಕ್ ಆದೇಶವನ್ನು ಸುಪ್ರೀಂ ಕೋರ್ಟ್ ನೀಡಿದೆ.
ತನ್ನ ಮೊಬೈಲ್ ಫೋನ್‌ನಲ್ಲಿ ಮಕ್ಕಳ ಅಶ್ಲೀಲ ಚಿತ್ರ, ವಿಡಿಯೋಗಳನ್ನು ಡೌನ್‌ಲೋಡ್ ಮಾಡಿದ ಆರೋಪದ ಮೇಲೆ 28 ವರ್ಷದ ವ್ಯಕ್ತಿಯ ವಿರುದ್ಧ ಕ್ರಿಮಿನಲ್ ಮೊಕದ್ದಮೆಗಳನ್ನು ರದ್ದುಗೊಳಿಸುವಾಗ ಮದ್ರಾಸ್ ಹೈಕೋರ್ಟ್ ಈ ಆದೇಶವನ್ನು ನೀಡಿತ್ತು. ಇತ್ತೀಚಿನ ದಿನಗಳಲ್ಲಿ ಮಕ್ಕಳು ಅಶ್ಲೀಲ ಚಿತ್ರಗಳನ್ನು ನೋಡುವ ಗಂಭೀರ ಮಾನಸಿಕ ಸಮಸ್ಯೆಯೊಂದಿಗೆ ಹೋರಾಡುತ್ತಿದ್ದಾರೆ. ಅವರನ್ನು ಶಿಕ್ಷಿಸುವ ಬದಲು ಸಮಾಜವು ಅವರಲ್ಲಿಅರಿವು ಮೂಡಿಸುವ ಅಗತ್ಯತೆ ಬಹಳಷ್ಟಿ ಇದೆ ಎಂದು ಹೇಳಿತ್ತು.
ಈ ಸುದ್ದಿಯನ್ನೂ ಓದಿ: Supreme Court: ಟೆಲಿಕಾಂ ಕಂಪನಿಗಳಿಗೆ ಹಿನ್ನಡೆ; ಎಜಿಆರ್ ಮರು ಲೆಕ್ಕಾಚಾರದ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್