Sunday, 24th November 2024

Tirupati Laddu Row: ಲಡ್ಡು ವಿವಾದದ ಬೆನ್ನಲ್ಲೇ ತಿರುಪತಿ ತಿಮ್ಮಪ್ಪನ ಸನ್ನಿಧಿಯಲ್ಲಿ ಶುದ್ಧೀಕರಣ

Tirupati Laddoo Raw

ಹೈದರಾಬಾದ್‌: ತಿರುಪತಿ ದೇಗುಲದ ಲಡ್ಡುಗಳಲ್ಲಿ ಪ್ರಾಣಿಗಳ ಕೊಬ್ಬು ಕಲಬೆರಕೆ (Tirupati Laddu Row) ವಿವಾದ ಬೆನ್ನಲ್ಲೇ ತಿರುಪತಿ ತಿಮ್ಮಪ್ಪನ ಸನ್ನಿಧಿಯನ್ನು ಅರ್ಚಕರು ಶುದ್ಧೀಕರಣಗೊಳಿಸಿದ್ದಾರೆ. ಅರ್ಚಕರ ಸಮೂಹ ದೇಗುಲದಲ್ಲಿ ಬೆಳಗ್ಗಿನಿಂದಲೇ ಹೋಮ ಹವನ ಮಾಡಿ ಗಂಗಾ ಜಲ ಪ್ರೋಕ್ಷಣೆ ಮಾಡಿ ಶುದ್ಧೀಕರಣ(Purification)ಗೊಳಿಸಿದ್ದಾರೆ. ಅರ್ಚಕರು ಮಹಾಶಾಂತಿ ಹೋಮ ನೆರವೇರಿಸಿದ್ದಾರೆ.

ಈ ಬಗ್ಗೆ ಸರ್ಕಾರಿ ಒಡೆತನದ ಟ್ರಸ್ಟ್‌ ದೇವಸ್ಥಾನಂನ ಕಾರ್ಯ ನಿರ್ವಾಹಕ ಅಧಿಕಾರಿ ಶ್ಯಾಮಲಾ ರಾವ್‌ ಪ್ರತಿಕ್ರಿಯಿಸಿದ್ದು, ದೇವಾಸ್ಥಾನದಲ್ಲಿ ಬೆಳಿಗ್ಗೆ 6 ಗಂಟೆಗೆ ಪ್ರಾರಂಭವಾದ ವೈದಿಕ ಆಚರಣೆಗಳು ನಾಲ್ಕು ಗಂಟೆಗಳ ಕಾಲ ನಡೆಯಿತು. ಶುದ್ಧ ಹಸುವಿನ ತುಪ್ಪ ಸಂಗ್ರಹಣೆಯ ಹೊಸ ವ್ಯವಸ್ಥೆಯನ್ನು ಬದಲಾಯಿಸಲಾಗಿದೆ. ಮತ್ತು ಅದನ್ನೇ ದೇವಸ್ಥಾನದ ಲಡ್ಡೂಗಳು ಮತ್ತು ಪ್ರಸಾದದಲ್ಲಿ ಬಳಸಲಾಗುತ್ತಿದೆ ಎಂದು ಹೇಳಿದ್ದಾರೆ.

ಏನಿದು ವಿವಾದ?

ಕೋಟ್ಯಂತರ ಭಕ್ತರು ಭೇಟಿ ನೀಡುವ ತಿರುಪತಿ ತಿರುಮಲ ದೇವಸ್ಥಾನದಲ್ಲಿ ನೀಡಲಾಗುವ ಲಡ್ಡು ಪ್ರಸಾದದಲ್ಲಿ ದನದ ಕೊಬ್ಬು (Beef Fat) ಮತ್ತು ಮೀನಿನ ಎಣ್ಣೆ (Fish Fat) ಬೆರೆಸಲಾಗಿದೆ ಎಂಬ ಆಂಧ್ರ ಪ್ರದೇಶ ಸಿಎಂ ಚಂದ್ರಬಾಬು ನಾಯ್ಡು ಆರೋಪ ದೇಶಾದ್ಯಂತ ಸಂಚಲನ ಸೃಷ್ಟಿಸಿತ್ತು. ಈ ಪ್ರಕರಣದ ತನಿಖೆಯನ್ನು ಆಂಧ್ರ ಸರ್ಕಾರ ಎಸ್‌ಐಟಿಗೆ ಒಪ್ಪಿಸಿದೆ. ಮತ್ತೊಂದೆಡೆ ಆಂಧ್ರ ಡಿಸಿಎಂ ಪವನ್‌ ಕಲ್ಯಾಣ್‌ 11ದಿನಗಳ ಪ್ರಾಯಶ್ಚಿತ ಕಾರ್ಯವನ್ನು ಕೈಗೆತಿತಕೊಂಡಿದ್ದಾರೆ.

ವೈಎಸ್‌ಆರ್‌ಪಿ ಅಧಿಕಾರದಲ್ಲಿದ್ದಾಗ ತಿರುಪತಿ ಲಡ್ಡುಗಳನ್ನು ತಯಾರಿಸಲು ಬಳಸುವ ತುಪ್ಪದಲ್ಲಿ ಪ್ರಾಣಿಗಳ ಕೊಬ್ಬು ಕಂಡುಬಂದಿದೆ ಎಂದು ಗುಜರಾತ್‌ನ ರಾಷ್ಟ್ರೀಯ ಡೈರಿ ಅಭಿವೃದ್ಧಿ ಮಂಡಳಿಯ ಪ್ರಯೋಗಾಲಯದಿಂದ ಬುಧವಾರ ಬಿಡುಗಡೆ ಮಾಡಿದ ವರದಿಯಲ್ಲಿ ತಿಳಿಸಿದೆ. ತುಪ್ಪದಲ್ಲಿ ಮೀನಿನ ಎಣ್ಣೆ, ದನದ ಮಾಂಸ ಟಾಲೋ ಮತ್ತು ಹಂದಿಮಾಂಸದ ಕುರುಹುಗಳಿವೆ ಎಂದು ವರದಿ ಸೂಚಿಸಿದೆ.

ಕರ್ನಾಟಕ ಹಾಲು ಒಕ್ಕೂಟ (KMF) ಈ ವಿವಾದಕ್ಕೆ ಸಂಬಂಧಪಟ್ಟಂತೆ ಗುರುವಾರ ಸ್ಪಷ್ಟನೆ ನೀಡಿದೆ. ಈ ಬಗ್ಗೆ ಹೇಳಿಕೆ ಪ್ರಕಟಿಸಿರುವ ಕೆಎಂಎಫ್, ‘ತಿರುಮಲ ತಿರುಪತಿ ದೇವಸ್ಥಾನಮ್ (ಟಿಟಿಡಿ) ಮಂಡಳಿಯು ಕಳೆದ ನಾಲ್ಕು ವರ್ಷಗಳಿಂದ ತಮ್ಮಿಂದ (ಕೆಎಂಎಫ್‌) ತುಪ್ಪವನ್ನು ಖರೀದಿಸಿಲ್ಲ’ ಎಂದು ಸ್ಪಷ್ಟನೆ ನೀಡಿದೆ. ಚಂದ್ರಬಾಬು ನಾಯ್ಡು ಆರೋಪಕ್ಕೆ ಸಂಬಂಧಿಸಿದಂತೆ ವರದಿಯನ್ನು ಟಿಡಿಪಿ (TDP) ಬಹಿರಂಗಪಡಿಸಿದೆ.

ಈ ಸುದ್ದಿಯನ್ನೂ ಓದಿ: Tirupati Laddu: ದೇವಾಲಯಗಳನ್ನು ಮುಜರಾಯಿಯಿಂದ ಮುಕ್ತಗೊಳಿಸಿ, ಕೇಂದ್ರಕ್ಕೆ ನೀಡಿ: ಸುಬುಧೇಂದ್ರ ಶ್ರೀ ಒತ್ತಾಯ