ನವದೆಹಲಿ: ಮಹಾರಾಷ್ಟ್ರದ ಬದ್ಲಾಪುರ ಪ್ರದೇಶದ ಶಾಲೆಯೊಂದರಲ್ಲಿ ಇಬ್ಬರು ಶಾಲಾ ಬಾಲಕಿಯರ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಜೈಲು ಸೇರಿದ್ದ ಅಕ್ಷಯ್ ಶಿಂಧೆ ಎಂಬ ವ್ಯಕ್ತಿಯನ್ನು ಪೊಲೀಸರು ಸೋಮವಾರ ಗುಂಡಿಕ್ಕಿ ಹತ್ಯೆ (Rape accused shot Dead) ಮಾಡಿದ್ದಾರೆ. ಪೊಲೀಸರ ಮೇಲೆ ದಾಳಿ ಮಾಡಲು ಮುಂದಾದ ಹಿನ್ನೆಲೆಯಲ್ಲಿಆತನನ್ನು ಹತ್ಯೆ ಮಾಡಲಾಗಿದೆ. ಘಟನೆಯಲ್ಲಿ ಇಬ್ಬರು ಪೊಲೀಸ್ ಅಧಿಕಾರಿಗಳು ಗಾಯಗೊಂಡಿದ್ದಾರೆ.
ಪೊಲೀಸರ ಪ್ರಕಾರ, ಆರೋಪಿ ಶಿಂಧೆ ಸಂಜೆ 5.30 ರ ಸುಮಾರಿಗೆ ಜೈಲಿನಿಂದ ಪೊಲೀಸ್ ವಾಹನದಲ್ಲಿ ಕರೆದೊಯ್ಯಲಾಗುತ್ತಿತ್ತು. ಈ ವೇಳೆ ಪೊಲೀಸರ ಆಯುಧವನ್ನು ಕಸಿದುಕೊಂಡು ಗುಂಡು ಗುಂಡು ಹಾರಿಸಿದ್ದ. ಈ ವೇಳೆ ಹಲವಾರು ಸುತ್ತು ಗುಂಡಿನ ಚಕಮಕಿ ನಡೆದಿದೆ. ಘಟನೆಯಲ್ಲಿ ಹಲವಾರು ಪೊಲೀಸ್ ಅಧಿಕಾರಿಗಳು ಸಹ ಗಾಯಗೊಂಡಿದ್ದಾರೆ.
ತನಿಖೆಗಾಗಿ ತಲೋಜಾ ಜೈಲಿನಿಂದ ಬದ್ಲಾಪುರಕ್ಕೆ ಕರೆದೊಯ್ಯುತ್ತಿದ್ದ ಶಿಂಧೆ ಮೇಲೆ ಪೊಲೀಸರು ರಕ್ಷಣೆಗಾಗಿ ಗುಂಡು ಹಾರಿಸಿದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಗುಂಡಿನ ದಾಳಿಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಆತ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾನೆ ಎಂದು ವರದಿಯಲ್ಲಿ ಹೇಳಲಾಗಿದೆ.
ಶಾಲಾ ಶೌಚಾಲಯದಲ್ಲಿ ನಾಲ್ಕು ಮತ್ತು ಐದು ವರ್ಷದ ಇಬ್ಬರು ಬಾಲಕಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಶಿಂಧೆಯನ್ನು ಆಗಸ್ಟ್ 17 ರಂದು ಬಂಧಿಸಲಾಗಿತ್ತು. ಈ ಪ್ರದೇಶದಲ್ಲಿ ನಡೆದ ಪ್ರತಿಭಟನೆಗಳ ನಡುವೆ ಈ ಘಟನೆಯು ಭಾರಿ ಆಕ್ರೋಶ ಹುಟ್ಟುಹಾಕಿತು. ಶಿಂಧೆ ಶಾಲೆಯಲ್ಲಿ ಕ್ಲೀನರ್ ಆಗಿ ಕೆಲಸ ಮಾಡುತ್ತಿದ್ದ. ಸ್ಥಳೀಯ ಪೊಲೀಸರು ಆರಂಭದಲ್ಲಿ ಪ್ರಕರಣದ ತನಿಖೆ ನಡೆಸುತ್ತಿದ್ದರು, ಆದರೆ ಪೊಲೀಸ್ ತನಿಖೆಯಲ್ಲಿ ಗಂಭೀರ ಲೋಪಗಳ ಬಗ್ಗೆ ಸಾರ್ವಜನಿಕ ಆಕ್ರೋಶದ ನಂತರ ಮಹಾರಾಷ್ಟ್ರ ಸರ್ಕಾರ ವಿಶೇಷ ತನಿಖಾ ತಂಡವನ್ನು (ಎಸ್ಐಟಿ) ರಚಿಸಿತು.
ಇದನ್ನೂ ಓದಿ: Israel Strikes: ಇಸ್ರೇಲ್ ಏರ್ಸ್ಟ್ರೈಕ್ಗೆ ನಲುಗಿದ ಲೆಬನಾನ್; ಹೆಜ್ಬುಲ್ಲಾಗಳ ನೆಲೆ ಧ್ವಂಸ; 50ಕ್ಕೂ ಹೆಚ್ಚು ಜನ ಬಲಿ
ಘಟನೆಯನ್ನು ತಕ್ಷಣ ಪೊಲೀಸರಿಗೆ ವರದಿ ಮಾಡದ ಮತ್ತು ನಿರ್ಲಕ್ಷ್ಯಕ್ಕಾಗಿ ಶಾಲೆಯ ಅಧ್ಯಕ್ಷರು ಮತ್ತು ಕಾರ್ಯದರ್ಶಿ ವಿರುದ್ಧ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ಬಂಧನಪೂರ್ವ ಜಾಮೀನು ಕೋರಿ ಇವರಿಬ್ಬರು ಸೋಮವಾರ ಬಾಂಬೆ ಹೈಕೋರ್ಟ್ ಮೊರೆ ಹೋಗಿದ್ದರು. ಬಾಂಬೆ ಹೈಕೋರ್ಟ್ ತನಿಖೆಯ ಮೇಲ್ವಿಚಾರಣೆ ನಡೆಸುತ್ತಿದೆ.