Tuesday, 24th September 2024

Corruption: ಭ್ರಷ್ಟಾಚಾರದ ಪ್ರಕರಣ-ಬಿಜೆಪಿಯ ಉಷಾ ಹೆಗಡೆಗೆ ಒಂದು ವರ್ಷ ಸಜೆ, ಐದು ಸಾವಿರ ರೂ ದಂಡ

ಶಿರಸಿ: ಗ್ರಾಮೀಣ ಬಿಜೆಪಿ ಘಟಕದ ಅಧ್ಯಕ್ಷ(BJP Unit president) ರಾಗಿರುವ ಹಾಗೂ ಉತ್ತರ ಕನ್ನಡ ಜಿಲ್ಲಾ ಬಿಜೆಪಿ(Uttarakannada BJP)ಯ ಮಾಜಿ ಪ್ರಧಾನ ಕಾರ್ಯದರ್ಶಿಯಾಗಿದ್ದ ಉಷಾ ಹೆಗಡೆ(Usha Hegde) ಯವರಿಗೆ ಭ್ರಷ್ಟಾಚಾರದ ಪ್ರಕರಣ(Corruption Case) ದಲ್ಲಿ ಕಾರವಾರದ ಲೋಕಾಯುಕ್ತ ನ್ಯಾಯಾಲಯ(Karwar Lokayukta Court) ಒಂದು ವರ್ಷಗಳ ಕಠಿಣ ಸಜೆ ಹಾಗೂ ಐದು ಸಾವಿರ ರೂ ದಂಡ ವಿಧಿಸಿದೆ.

ಪ್ರಕರಣದ ವಿಚಾರಣೆ ನಡೆಸಿದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ವಿಜಯಕುಮಾರ್ ಈ ತೀರ್ಪು ನೀಡಿದ್ದಾರೆ. ಉಷಾ ಹೆಗಡೆಯವರು ಜಿಲ್ಲಾ ಪಂಚಾಯತ್ ಸದಸ್ಯರಾಗಿ ಆಯ್ಕೆಯಾಗು ಮೊದಲು ಶ್ರೀನಗರ ಪಂಚಾಯತ್ ವತಿಯಿಂದ ನಡೆದ ಸಭೆ ಸಮಾರಂಭಗಳಿಗೆ ಹಾಜರಾಗಿ ಎರಡು ಹುದ್ದೆಯಲ್ಲಿ ಅಧಿಕಾರದಲ್ಲಿದ್ದಾಗ ಜನವರಿ 2011 ರಿಂದ ನವಂಬರ್ 2012 ರವರೆಗೆ ಅಂಗನವಾಡಿ ಕಾರ್ಯಕರ್ತೆಯೆಂದು ಸರ್ಕಾರದಿಂದ ಗೌರವದನ 88,630 ಸ್ವೀಕರಿಸಿ ಸರ್ಕಾರಕ್ಕೆ ಮೋಸ ಮಾಡಿದ್ದಾಗಿ ಆರೋಪಿಸಲಾಗಿತ್ತು.

ಉಷಾ ಅವರು ಏಕಕಾಲದಲ್ಲಿ ಅಂಗನವಾಡಿ ಕಾರ್ಯಕರ್ತೆ ಮತ್ತು ಜಿಲ್ಲಾ ಪಂಚಾಯತ್ ಸದಸ್ಯಯಾಗಿ ಕಾರ್ಯ ನಿರ್ವಹಿಸಿ ಜಿಲ್ಲಾ ಪಂಚಾಯತ್ ಸದಸ್ಯತ್ವ ಹುದ್ದೆಯನ್ನು ಸರಿಯಾಗಿ ನಿಭಾಯಿಸದೆ ಹಾಗೂ ಅಂಗನವಾಡಿ ಕರ್ತವ್ಯದಲ್ಲಿಯೂ ಸರಿಯಾಗಿ ಹಾಜರಿರದೆ ಸುಳ್ಳು ದಾಖಲೆಗಳನ್ನು ಸೃಷ್ಟಿಸಿ ಹಾಜರಾತಿ ಪುಸ್ತಕದಲ್ಲಿ ಹಾಜರಿರುವು ದಾಗಿ ಸುಳ್ಳು ಸಹಿ ಮಾಡಿದ್ದಾಗಿಯೂ ಮತ್ತು ಈ ಮೂಲಕ ಭಾರತೀಯ ದಂಡ ಸಹಿತ ಕಲಂ 468ರ ಮೇರೆಗೆ ದಂಡನೀಯವಾದ ಅಪರಾಧವನ್ನು ಎಸಗಿದ್ದಾಗಿ ಅರೋಪಿಸಲಾಗಿತ್ತು.

ಇದನ್ನೂ ಓದಿ: HD Kumaraswamy: ಸರ್ಕಾರದ ಹಗರಣ ಮುಚ್ಚಿಹಾಕಲು ನಾಗಮಂಗಲ ಗಲಭೆ ಸೃಷ್ಟಿ: ಎಚ್‌ಡಿಕೆ ಆರೋಪ